![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Sep 4, 2018, 3:47 PM IST
ಸುದೀಪ್ ಅವರ ಬ್ಯಾನರ್‌ನಲ್ಲಿ ತಯಾರಾಗಿರುವ “ಅಂಬಿ ನಿಂಗೆ ವಯಸ್ಸಾಯ್ತೋ’ ಚಿತ್ರದ ಟೀಸರ್ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಖತ್ ಹಿಟ್ ಆಗಿದ್ದು, ಇತ್ತ ಚಿತ್ರತಂಡ ಚಿತ್ರದ “ಹೇ ಜಲೀಲಾ’ ಎಂಬ ಲಿರಿಕಲ್ ವಿಡಿಯೋ ಬಿಡುಗಡೆ ಮಾಡಿದೆ. ಅಂಬರೀಶ್ ಆ್ಯಂಗ್ರಿ ಯಂಗ್ ಮ್ಯಾನ್ ಲುಕ್‍ನಲ್ಲಿ ಮಿಂಚಿದ್ದು, ಇದೀಗ ಹಾಡು ಸಾಮಾಜಿಕ ಜಾಲತಾಣದಲ್ಲಿ ಭರ್ಜರಿ ಹಿಟ್ ಆಗಿದೆ.
ಇಲ್ಲಿವರೆಗೂ 5 ಲಕ್ಷಕ್ಕೂ ಹೆಚ್ಚು ಸಿನಿಪ್ರಿಯರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಹಾಡಿಗೆ ಸಾಹಿತ್ಯವನ್ನು ಜೋಗಿ ಪ್ರೇಮ್ ಬರೆದಿದ್ದು, ವಿಜಯ್ ಪ್ರಕಾಶ್ ಕಂಠಸಿರಿಯಲ್ಲಿ ಹಾಡು ಮೂಡಿಬಂದಿದೆ. ಚಿತ್ರವನ್ನು ಗುರುದತ್ ಗಾಣಿಗ ನಿರ್ದೇಶಿಸುತ್ತಿದ್ದು, ಸುದೀಪ್ ಜೊತೆ ಸಹಾಯಕರಾಗಿದ್ದ ಅವರಿಗೆ ಇದು ಮೊದಲ ಸಿನಿಮಾ. ಚಿತ್ರಕ್ಕೆ ಸುದೀಪ್ ಅವರ ಚಿತ್ರಕಥೆ ಇದೆ. ಜಾಕ್ ಮಂಜು ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಚಿತ್ರದಲ್ಲಿ ಅಂಬರೀಶ್ ಜೋಡಿಯಾಗಿ ಸುಹಾಸಿನಿ ನಟಿಸುತ್ತಿದ್ದಾರೆ. ಅಂದಹಾಗೆ, “ಅಂಬಿ ನಿಂಗೆ ವಯಸ್ಸಾಯ್ತೋ’ ತಮಿಳಿನ “ಪಾ ಪಾಂಡಿ’ ಚಿತ್ರದ ರೀಮೇಕ್. ಅಲ್ಲಿ ರಾಜ್‌ಕಿರಣ್ ಮಾಡಿದ ಪಾತ್ರವನ್ನು ಇಲ್ಲಿ ಅಂಬರೀಶ್ ಮಾಡುತ್ತಿದ್ದಾರೆ. ಚಿತ್ರದಲ್ಲಿ ಅಂಬರೀಶ್ ಅವರ ಯೌವ್ವನದ ದಿನಗಳ ಪಾತ್ರದಲ್ಲಿ ಸುದೀಪ್ ಕಾಣಿಸಿಕೊಳ್ಳಲಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯಾ ಸಂಗೀತ, ಜೆಬಿನ್ ಜಾಕೋಬ್ ಛಾಯಾಗ್ರಹಣ ಚಿತ್ರಕ್ಕಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.