ಪ್ರೀ ರಿಲೀಸ್‌ ಇವೆಂಟ್‌ ನಲ್ಲಿ ‘ಜಮಾಲಿಗುಡ್ಡ’

Team Udayavani, Dec 27, 2022, 11:10 AM IST

Once upon a time in jamaligudda pre release event

ಧನಂಜಯ್‌ ನಟನೆಯ “ಜಮಾಲಿಗುಡ್ಡ’ ಚಿತ್ರ ಡಿ.30ರಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್‌ ಹಿಟ್‌ ಆಗಿದ್ದು, ಸಿನಿಮಾ ಬಿಡುಗಡೆಗೂ ಮುನ್ನ ಚಿತ್ರತಂಡ ಪ್ರೀ ರಿಲೀಸ್‌ ಇವೆಂಟ್‌ ಮಾಡಿದೆ. ಕಲರ್‌ಫ‌ುಲ್‌ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಟ ಧನಂಜಯ್‌, ನಾಯಕಿ ಅದಿತಿ ಪ್ರಭುದೇವ ಸೇರಿದಂತೆ ಇಡೀ ಚಿತ್ರತಂಡ ಭಾಗಿಯಾಗಿ ಸಿನಿಮಾದ ಅನುಭವ ಹಂಚಿಕೊಂಡಿತು.

ಟೈಟಲ್ಲೇ ಹೇಳುವಂತೆ, “ಜಮಾಲಿ ಗುಡ್ಡ’ ಎಂಬ ಕಾಲ್ಪನಿಕ ಊರಿನಲ್ಲಿ ನಡೆಯುವ ಒಂದಷ್ಟು ಘಟನೆಗಳು, ಪಾತ್ರಗಳ ಸುತ್ತ ಇಡೀ ಸಿನಿಮಾ ನಡೆಯುತ್ತದೆ. ಕೋವಿಡ್‌ ಮೊದಲನೇ ಲಾಕ್‌ಡೌನ್‌ನಲ್ಲಿ ನಿರ್ದೇಶಕ ಕುಶಾಲ್‌ ಗೌಡ ಮಾಡಿಕೊಂಡಿದ್ದ ಕಥೆ ಸುಮಾರು ಎರಡು ವರ್ಷಗಳ ಬಳಿಕ ಸಿನಿಮಾ ರೂಪ ಸಿಕ್ಕಿ ಈಗ ಬಿಡುಗಡೆಯಾಗಿದೆ.

“ಜಮಾಲಿ ಗುಡ್ಡ’ ಚಿತ್ರದ ಟೈಟಲ್‌ಗೆ “ಒನ್ಸ್‌ ಅಪಾನ್‌ ಎ ಟೈಮ್‌’ ಎಂಬ ಟ್ಯಾಗ್‌ ಲೈನ್‌ ಇದ್ದು, 1990ರ ದಶಕದ ಹಿನ್ನೆಲೆಯಲ್ಲಿ ಇಡೀ ಚಿತ್ರದ ಕಥೆ ನಡೆಯುತ್ತದೆ. “”ಜಮಾಲಿ ಗುಡ್ಡ’ ಚಿತ್ರದ ಕಥೆಯಲ್ಲಿ ಇರುವಂಥ ಕಾಲ್ಪನಿಕ ಊರಾದರೂ, ಇಲ್ಲಿ ಒಂದು ವಿಭಿನ್ನ ಸಂಸ್ಕೃತಿ, ವಿಭಿನ್ನ ವ್ಯಕ್ತಿತ್ವಗಳ ಅನಾವರಣ ವಾಗಲಿದೆ. ಇದರಲ್ಲಿ ಒಂದು ಜರ್ನಿ ಇದೆ. ಎಮೋಶನ್ಸ್‌ ಇದೆ. ಅದೆಲ್ಲವನ್ನೂ ದೃಶ್ಯದಲ್ಲಿ ಕಟ್ಟಿಕೊಟ್ಟಿದ್ದೇವೆ. ಜನ ಕೂಡಾ ಇಷ್ಟಪಟ್ಟಿದ್ದಾರೆ’ ಎಂಬುದು ಚಿತ್ರತಂಡದ ಮಾತು.

ಚಿಕ್ಕಮಗಳೂರು, ಕುದುರೆಮುಖ, ಕನಕಪುರ, ಹೊನ್ನಾವರ, ಗೋಕರ್ಣ, ಕಾರವಾರ ಮತ್ತು ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ನಿರ್ದೇಶಕರು ಸಾಕಷ್ಟು ತಿಳಿದುಕೊಂಡಿದ್ದಾರೆ. ಜಗತ್ತಿನ ಬೇರೆ ಬೇರೆ ಸಿನಿಮಾ, ಪುಸ್ತಕಗಳನ್ನು ಓದಿಕೊಂಡಿದ್ದಾರೆ. ಈ ಸಿನಿಮಾವನ್ನು ತುಂಬಾ ನೀಟಾಗಿ ಕಟ್ಟಿಕೊಟ್ಟಿದ್ದಾರೆ. ಹಾಗಾಗಿ, ಜನ ಇಷ್ಟಡುತ್ತಿದ್ದಾರೆ. ಇದೊಂದು ಫೀಲ್‌ ಇರುವ ಸಿನಿಮಾ. ಇಡೀ ಸಿನಿಮಾ ಪ್ರಯಾಣದ ಹಾದಿಯಲ್ಲೇ ಸಾಗುತ್ತದೆ. ನನ್ನ ಪಾತ್ರ ಕೂಡಾ ತುಂಬಾ ಸೊಗಸಾಗಿದೆ ಎನ್ನುವುದು ನಾಯಕ ಧನಂಜಯ್‌ ಮಾತು.

ನಟ ಡಾಲಿ ಧನಂಜಯ್‌, ಅದಿತಿ ಪ್ರಭುದೇವ, ಪ್ರಕಾಶ್‌ ಬೆಳವಾಡಿ, ಭಾವನಾ ರಾಮಣ್ಣ, ಪ್ರಾಣ್ಯಾ ಪಿ. ರಾವ್‌, ನಂದಗೋಪಾಲ್‌, ಯಶ್‌ ಶೆಟ್ಟಿ, ಸತ್ಯಣ್ಣ, ತ್ರಿವೇಣಿ ರಾವ್‌ ಮೊದಲಾದ ಕಲಾವಿದರು “ಜಮಾಲಿ ಗುಡ್ಡ’ ಚಿತ್ರದ ಪ್ರಮುಖ ಪಾತ್ರಗಳಲ್ಲಿ ತೆರೆಮೇಲೆ ಕಾಣಿಸಿಕೊಂಡಿದ್ದಾರೆ. ಚಿತ್ರದ ಮೂರು ಹಾಡುಗಳಿಗೆ ಅರ್ಜುನ್‌ ಜನ್ಯಾ ಸಂಗೀತ ಸಂಯೋಜಿಸಿದ್ದು, ಯೋಗರಾಜ್‌ ಭಟ್‌, ಜಯಂತ ಕಾಯ್ಕಿಣಿ, ಕುಶಾಲ್‌ ಗೌಡ ಹಾಡುಗಳಿಗೆ ಸಾಹಿತ್ಯ ರಚಿಸಿದ್ದಾರೆ. ಸೋನು ನಿಗಮ್‌, ಶ್ರೇಯಾ ಘೋಷಾಲ್‌, ವಿಜಯ್‌ ಯೇಸುದಾಸ್‌ ಮೊದಲಾದವರು ಚಿತ್ರದ ಹಾಡುಗಳಿಗೆ ಧ್ವನಿಯಾಗಿದ್ದಾರೆ.

“ಜಮಾಲಿ ಗುಡ್ಡ’ದ ದೃಶ್ಯಗಳಿಗೆ ಮಾಸ್ತಿ ಮತ್ತು ಕುಶಾಲ್‌ ಗೌಡ ಸಂಭಾಷಣೆ ಬರೆದಿದ್ದಾರೆ. ಚಿತ್ರಕ್ಕೆ ಕಾರ್ತಿಕ್‌ ಎಸ್‌. ಛಾಯಾಗ್ರಹಣ, ಹರೀಶ್‌ ಕೊಮ್ಮೆ ಸಂಕಲನವಿದೆ.

ಟಾಪ್ ನ್ಯೂಸ್

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

Bantwal ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಮಂಜು ಮ್ಯಾಚ್ ಫಿಕ್ಸಿಂಗ್ ಗೇಮ್: ಮೋಕ್ಷಿತಾ, ಗೌತಮಿ ಫ್ರೆಂಡ್ಸ್ ಶಿಪ್ ಬ್ರೇಕ್

BBK11: ಮಂಜು ಮ್ಯಾಚ್ ಫಿಕ್ಸಿಂಗ್ ಗೇಮ್: ಮೋಕ್ಷಿತಾ ,ಗೌತಮಿ ಜತೆ ಫ್ರೆಂಡ್ಸ್ ಶಿಪ್ ಬ್ರೇಕ್

Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ

Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ

45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!

45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!

6

Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.