Kannada Cinema: ‘ಆನ್‌ಲೈನ್‌ ಮದುವೆ ಆಫ್ಲೈನ್‌ ಶೋಭನ’ ಟ್ರೇಲರ್‌ ಬಿಡುಗಡೆ

Team Udayavani, Dec 28, 2023, 6:00 PM IST

online maduve offline shobana movie trailer out

ಕಿರುತೆರೆ ನಟ ಜಗ್ಗಪ್ಪ ಹಾಗೂ ಸುಶ್ಮಿತಾ ಜೋಡಿಯಾಗಿ ಅಭಿನಯಿಸಿರುವ “ಆನ್‌ಲೈನ್‌ ಮದುವೆ ಆಫ್ಲೈನ್‌ ಶೋಭನ’ ಸಿನಿಮಾದ ಟ್ರೇಲರ್‌ ಮತ್ತು ಹಾಡುಗಳು ಇತ್ತೀಚೆಗೆ ಬಿಡುಗಡೆಯಾಯಿತು.

ಲವ್‌ ಕಂ ಕಾಮಿಡಿ ಶೈಲಿಯಲ್ಲಿ ತೆರೆಮೇಲೆ ಬರುತ್ತಿರುವ “ಆನ್‌ ಲೈನ್‌ ಮದುವೆ ಆಫ್ಲೈನ್‌ ಶೋಭನ’ ಸಿನಿಮಾಕ್ಕೆ ವೇಂಪಲ್ಲಿ ಬಾವಾಜಿ ಕಥೆ, ಚಿತ್ರಕಥೆ, ಸಾಹಿತ್ಯ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.

ಸಿನಿಮಾದ ಟ್ರೇಲರ್‌ ಮತ್ತು ಹಾಡುಗಳ ಬಿಡುಗಡೆ ವೇಳೆ ಮಾತನಾಡಿದ ನಿರ್ದೇಶಕ ವೇಂಪಲ್ಲಿ ಬಾವಾಜಿ, “ಇದೊಂದು ಪೂರ್ಣ ಪ್ರಮಾಣದ ಮನರಂಜನಾತ್ಮಕ ಕಥಾಹಂದರವಿರುವ ಸಿನಿಮಾ. ಆರಂಭದಲ್ಲಿ ಈ ಕಥೆಗೆ ಯಾರು ಸೂಕ್ತ ಎಂದು ಹುಡುಕಿದಾಗ ಸೋಶಿಯಲ್‌ ಮೀಡಿಯಾದಲ್ಲಿ ಒಂದಷ್ಟು ಫೇಮಸ್‌ ಆಗಿದ್ದ ಜಗಪ್ಪ, ಸುಶ್ಮಿತಾ ಸಿಕ್ಕರು. ಇಡೀ ಸಿನಿಮಾದಲ್ಲಿ ನಗದೇ ಇರೋದಕ್ಕೆ ಎಲ್ಲೂ ಗ್ಯಾಪ್‌ ಕೊಟ್ಟಿಲ್ಲ, ನಗದೇ ಇರುವವರಿಗೆ ಲಕ್ಷ ರೂಪಾಯಿ ಬಹುಮಾನ ಕೊಡುತ್ತೇವೆ. ಅಷ್ಟರ ಮಟ್ಟಿಗೆ ನಗುವಿನ ಕಚಗುಳಿ ಸಿನಿಮಾದಲ್ಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಸಿನಿಮಾದ ಹೆಸರೇ ಹೇಳುವಂತೆ, ಆನ್‌ ಲೈನ್‌ ಆ್ಯಪ್‌ ಮೂಲಕ ಪರಿಚಯ ವಾದ ಹುಡುಗ-ಹುಡುಗಿಯ ಪ್ರೇಮ ಪುರಾಣ ಹೇಗಿರುತ್ತದೆ ಎಂಬುದನ್ನು ಹಾಸ್ಯಭರಿತವಾಗಿ ಈ ಸಿನಿಮಾದಲ್ಲಿ ಹೇಳಲಾಗಿದೆ. ಸೋಶಿಯಲ್‌ ಮೀಇಯಾದಲ್ಲಿ ಸಕ್ರಿಯವಾಗಿರುವ ಇಂದಿನ ಯೂಥ್ಸ್ ಮನಸ್ಥಿತಿ, ಮದುವೆ ಬಗ್ಗೆ ಅವರಿಗಿರುವ ಕಲ್ಪನೆಯ ಬಗ್ಗೆ ಸಿನಿಮಾದಲ್ಲಿ ಹೇಳಲಾಗಿದೆ. ಆನ್‌ಲೈನ್‌ನಲ್ಲಿ ಪರಿಚಯವಾದ ನಾಯಕ, ನಾಯಕಿ ಹೇಗೆ ಮದುವೆಯಾಗುತ್ತಾರೆ ಎಂಬುದನ್ನು ಸಿನಿಮಾದಲ್ಲಿ ಹೇಳಿದ್ದೇವೆ’ ಎಂಬುದು ಚಿತ್ರತಂಡದ ಮಾತು.

ಜಗಪ್ಪ, ಸುಶ್ಮಿತಾ ಅವರೊಂದಿಗೆ ಸೀರುಂಡೆ ರಘು, ಗಜೇಂದ್ರ, ಯಶಸ್ವಿನಿ, ಚಂದನ, ಶರಣ್ಯ ರೆಡ್ಡಿ, ದಯಾನಂದ್‌, ರಾಘವಿ ಸೇರಿದಂತೆ “ಗಿಚ್ಚಿ ಗಿಲಿಗಿಲಿ’, “ಮಜಾಭಾರತ’, “ಕಾಮಿಡಿ ಕಿಲಾಡಿಗಳು’ ಮೊದಲಾದ ರಿಯಾಲಿಟಿ ಶೋ ಕಾರ್ಯಕ್ರಮದ ಅನೇಕ ಕಲಾವಿದರು ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

“ಅಪ್ಸರ ಮೂವೀಸ್‌’ ಬ್ಯಾನರ್‌ನಲ್ಲಿ ನಿರ್ದೇಶಕ ವೇಂಪಲ್ಲಿ ಬಾವಾಜಿ ಅವರೇ ಈ ಸಿನಿಮಾಕ್ಕೆ ಬಂಡವಾಳ ಹೂಡಿ ನಿರ್ಮಾಣ ಮಾಡಿದ್ದಾರೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರದ ಅತ್ತಿಬೆಲೆ ಸುತ್ತಮುತ್ತ ಸಿನಿಮಾದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ.

ಅರುಣ್‌ ಪ್ರಸಾದ್‌ ಸಂಗೀತ ನಿರ್ದೇಶನವಿದ್ದು, ಬಾಲು ಛಾಯಾಗ್ರಹಣ, ರೋಹಿತ್‌ ಸಂಕಲನವಿದೆ. ಈಗಾಗಲೇ ಸೆನ್ಸಾರ್‌ ಮಂಡಳಿಯಿಂದ “ಯು/ಎ’ ಸರ್ಟಿಫಿಕೇಟ್‌ ಪಡೆದುಕೊಂಡಿರುವ “ಆನ್‌ಲೈನ್‌ ಮದುವೆ ಆಫ್ಲೈನ್‌ ಶೋಭನ’ ಸಿನಿಮಾವನ್ನು ಜನವರಿ ಅಂತ್ಯದೊಳಗೆ ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ ಚಿತ್ರತಂಡ.

ಟಾಪ್ ನ್ಯೂಸ್

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.