ಟ್ರೆಂಡಿಂಗ್‌ನಲ್ಲಿ ಒರಿಜಿನಲ್ “ಏನಮ್ಮಿ ಏನಮ್ಮಿ’ ಸಾಂಗ್: Watch
Team Udayavani, Sep 11, 2018, 4:05 PM IST
ಸತೀಶ್ ನೀನಾಸಂ, ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿನಯದ ಬಹುನಿರೀಕ್ಷಿತ “ಅಯೋಗ್ಯ’ ಚಿತ್ರ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿದ್ದರೆ, ಇತ್ತ ಚಿತ್ರದ “ಏನಮ್ಮಿ ಏನಮ್ಮಿ’ ಒರಿಜಿನಲ್ ವಿಡೀಯೋ ಸಾಂಗ್ ಬಿಡುಗಡೆಯಾಗಿದೆ. ಸದ್ಯ ಯೂಟ್ಯೂಬ್‌ನಲ್ಲಿ ಈ ಹಾಡು ಧೂಳೆಬ್ಬಿಸುತ್ತಿದ್ದು ಟ್ರೆಂಡಿಂಗ್‌ನಲ್ಲಿದೆ.
ಈಗಾಗಲೇ ಚಿತ್ರ ಕೂಡಾ ಚಿತ್ರಮಂದಿರಗಳಲ್ಲಿ 25 ದಿನ ಪೂರೈಸಿ ಮುನ್ನುಗ್ಗುತ್ತಿದ್ದು, ಇದೇ ಸಂತಸದಲ್ಲಿ ಚಿತ್ರತಂಡ “ಏನಮ್ಮಿ ಏನಮ್ಮಿ’ ಹಾಡಿನ ವಿಡಿಯೋ ಕೂಡಾ ಬಿಡುಗಡೆ ಮಾಡಿದೆ. ಸಿನಿಮಾ ಬಿಡುಗಡೆಗೂ ಮುನ್ನವೇ “ಏನಮ್ಮಿ ಏನಮ್ಮಿ’ ಹಾಡು ಎಲ್ಲರ ಬಾಯಲ್ಲೂ ತೇಲಿಬರ್ತಿತ್ತು. ಈ ಹಾಡಿಗೆ ಮನಸೋತು ಅದೆಷ್ಟೋ ಮಂದಿ ಡಬ್ ಸ್ಮ್ಯಾಶ್ ಮಾಡಿದ್ದರು. ಆದರೆ ಸದ್ಯ ಹಾಡಿನ ವಿಡಿಯೋ ಕೂಡಾ ಬಿಡುಗಡೆಯಾಗಿದ್ದು, ಬಿಡುಗಡೆಯಾದ ಮೂರೇ ದಿನಕ್ಕೆ ಯೂಟ್ಯೂಬ್ ನಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಹಿಟ್ಸ್ ಪಡೆದುಕೊಂಡಿದೆ.
ಸಿನಿಮಾ ಯಶಸ್ವಿಯಾಗಿ ಪ್ರದರ್ಶನ ಕಾಣ್ತಿರೋ ಬೆನ್ನಲ್ಲೇ ಯೂಟ್ಯೂಬ್‌ನಲ್ಲೂ ಹಾಡು ಕೂಡಾ ಟ್ರೆಂಡಿಗ್ನಲ್ಲಿರೋದಕ್ಕೆ ಸಿನಿಮಾ ತಂಡ ಸಂತಸ ವ್ಯಕ್ತಪಡಿಸಿದೆ. ಇನ್ನು ಈ ಹಾಡಿಗೆ ಭರ್ಜರಿ ಚೇತನ್ ಸಾಹಿತ್ಯ ಬರೆದಿದ್ದು, ಅರ್ಜುನ್ ಜನ್ಯಾ ಸಂಗೀತ ಸಂಯೋಜನೆ, ವಿಜಯ್ ಪ್ರಕಾಶ್ ಹಾಗೂ ಪಲಕ್ ಮುಚ್ಚಲ್ ಕಂಠಸಿರಿಯಲ್ಲಿ ಮೂಡಿಬಂದಿದೆ. ಚಿತ್ರದಲ್ಲಿ ಸಖತ್ ರಗಡ್ ಲುಕ್ ಹಾಗೂ ಗ್ರಾಮ ಪಂಚಾಯ್ತಿ ಸದಸ್ಯನ ಪಾತ್ರದಲ್ಲಿ ಸತೀಶ್ ನೀನಾಸಂ ಕಾಣಿಸಿಕೊಂಡಿದ್ದು, ರಚಿತಾ ರಾಮ್ ಮೊದಲ ಬಾರಿಗೆ ಹಳ್ಳಿ ಹುಡುಗಿಯಾಗಿ ಮಿಂಚಿದ್ದಾರೆ.
ಖಡಕ್ ವಿಲನ್ ಬಚ್ಚೇಗೌಡನಾಗಿ ರವಿಶಂಕರ್ ನಟಿಸಿದ್ದಾರೆ. ಚಿತ್ರಕ್ಕೆ ಯೋಗರಾಜ್ ಭಟ್ ಶಿಷ್ಯ ಮಹೇಶ್ ಕುಮಾರ್ ಕಥೆ ಬರೆದು ನಿರ್ದೇಶಿಸಿದರೆ, ಟಿ.ಆರ್. ಚಂದ್ರಶೇಖರ್ ಚಿತ್ರವನ್ನು ನಿರ್ಮಿಸಿದ್ದಾರೆ. ಅಲ್ಲದೇ ಶರತ್ ಚಕ್ರವರ್ತಿ ಸಂಭಾಷಣೆ, ಹರಿಕೃಷ್ಣ ಅವರ ಸಂಗೀತ ಚಿತ್ರಕ್ಕಿದ್ದು, ಪ್ರೀತಮ್ ತೆಗ್ಗಿನಮನೆ ಛಾಯಾಗ್ರಹಣ ಮಾಡಿದ್ದಾರೆ. ಚಿತ್ರದಲ್ಲಿ ಚಿಕ್ಕಣ್ಣ, ಶಿವರಾಜ್ ಕೆ.ಆರ್. ಪೇಟೆ, ಸರಿತ, ರವಿಶಂಕರ್, ರಂಗಾಯಣ ರಘು, ತಬಲಾ ನಾಣಿ, ಸಾಧು ಕೋಕಿಲ, ಬುಲೆಟ್ ಪ್ರಕಾಶ್, ಕುರಿ ಪ್ರತಾಪ್ ಸೇರಿದಂತೆ ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.