ಪಾರು ಮದುವೆ ಸಂಭ್ರಮ
Team Udayavani, Apr 18, 2019, 3:00 AM IST
ಕಿರುತೆರೆಯ ಜೀ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ “ಪಾರು’ ಧಾರಾವಾಹಿಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈಗ “ಪಾರು’ಗೆ ಮದುವೆ ಸಂಭ್ರಮ. ಪಾರುಗೆ ಅಖೀಲಾಂಡೇಶ್ವರಿಯ ಹಿರಿಯ ಮಗ ಆದಿತ್ಯ ಗ್ರೂಪ್ ಆಫ್ ಕಂಪನೀಸ್ ಒಡೆಯ ಆದಿತ್ಯನೊಂದಿಗೆ ಮದುವೆಯ ಯೋಗ ಕೂಡಿಬಂದಿದೆ.
ಧಾರಾವಾಹಿಯಲ್ಲಿ ಆದಿತ್ಯ ಮತ್ತು ಪಾರು ಇಬ್ಬರ ಮದುವೆ ಅದ್ದೂರಿಯಾಗಿ ಚಿತ್ರಿಸಲಾಗಿದ್ದು, ಮದುವೆಯ ಎಲ್ಲಾ ಶಾಸ್ತ್ರ ಸಂಪ್ರದಾಯಗಳನ್ನು ಚಾಚೂ ತಪ್ಪದೆ ತೆರೆಮೇಲೆ ತೆರೆದಿಡಲು ಜೀ ವಾಹಿನಿ ಪ್ಲಾನ್ ಮಾಡಿಕೊಂಡಿದೆ. ಅಖೀಲಾಂಡೇಶ್ವರಿಯನ್ನು ಸದಾ ದೇವತೆಯಂತೆ ಆರಾಧಿಸುವ, ಅವರ ಮಾತನ್ನು ವೇದವಾಕ್ಯದಂತೆ ಪಾಲಿಸುವ ಪಾರು
-ಅಖೀಲಾಂಡೇಶ್ವರಿಯ ಮಗನನ್ನು ಮದುವೆಯಾಗಲು ಹೇಗೆ ಸಾಧ್ಯವಾಯಿತು ಎನ್ನುವ ವೀಕ್ಷಕರ ಪ್ರಶ್ನೆಗಳಿಗೆ ಮುಂದಿನನದಿನಗಳಲ್ಲಿ ಉತ್ತರ ಸಿಗುವುದಂತೂ ಪಕ್ಕಾ. ಅಂದಹಾಗೆ, ಪಾರು ಧಾರಾವಾಹಿ ಜೀ ಕನ್ನಡ ವಾಹಿನಿಯಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9.30ಕ್ಕೆ ಪ್ರಸಾರವಾಗುತ್ತಿದೆ.
ಒಟ್ಟಾರೆ ತನ್ನ ಕಾರ್ಯಕ್ರಮಗಳಲ್ಲಿ ಹೊಸ ಪ್ರಯೋಗಗಳ ಮೂಲಕ ಪ್ರೇಕ್ಷಕರ ಮನಗೆಲ್ಲುತ್ತಿರುವ ಜೀ ವಾಹಿನಿಯ ಈ ಹೊಸ ಪ್ರಯೋಗ ಕಿರುತೆರೆ ಪ್ರೇಕ್ಷಕರಿಗೆ ಎಷ್ಟರ ಮಟ್ಟಿಗೆ ಇಷ್ಟವಾಗಲಿದೆ ಅನ್ನೋದು ಶೀಘ್ರದಲ್ಲೇ ಗೊತ್ತಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.