ಕಾರ್ಕಿ ತಂಡದಲ್ಲಿ ಪಾವನಾ
ಬೋಲ್ಡ್ ಹುಡುಗಿ ಪಾತ್ರ
Team Udayavani, Apr 30, 2019, 3:00 AM IST
“ಬೊಂಬೆಗಳ ಲವ್’ ಚಿತ್ರದ ಮೂಲಕ ಸ್ಯಾಂಡಲ್‌ವುಡ್ ಸಿನಿಪ್ರಿಯರ ಗಮನ ಸೆಳೆದಿದ್ದ ನವನಟಿ ಪಾವನಾ, ನಿಧಾನವಾಗಿ ಚಿತ್ರರಂಗದಲ್ಲಿ ಒಂದರ ಹಿಂದೊಂದು ಚಿತ್ರದಲ್ಲಿ ಬ್ಯುಸಿಯಾಗುತ್ತಿದ್ದಾರೆ.
“ಬೊಂಬೆಗಳ ಲವ್’ ಚಿತ್ರದ ನಂತರ, “ಮೈಸೂರು ಡೈರೀಸ್’, “ರುದ್ರಿ’, “ಪ್ರಭುತ್ವ’ ಹೀಗೆ ಕೆಲವು ಚಿತ್ರಗಳಲ್ಲಿ ಬಣ್ಣ ಹಚ್ಚಿರುವ ಪಾವನಾ, ಸದ್ಯ ರೋಜರ್ ನಾರಾಯಣ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿರುವ “ಕಾರ್ಕಿ’ ಚಿತ್ರಕ್ಕೂ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
ಅಂದಹಾಗೆ, “ಕಾರ್ಕಿ’ ಚಿತ್ರದಲ್ಲಿ ಒಟ್ಟು ಮೂವರು ನಾಯಕಿಯರಿದ್ದು, ಅದರಲ್ಲಿ ಒಂದು ಪಾತ್ರವನ್ನು ಪಾವನಾ ನಿರ್ವಹಿಸುತ್ತಿದ್ದಾರೆ. ಚಿತ್ರರಂಗದಲ್ಲಿ ತಮಗೆ ಸಿಗುತ್ತಿರುವ ಅವಕಾಶಗಳ ಬಗ್ಗೆ ಮಾತನಾಡುವ ಪಾವನಾ, “ಬೊಂಬೆಗಳ ಲವ್’ ಚಿತ್ರದ ಬಳಿಕ ಸಾಕಷ್ಟು ಉತ್ತಮ ಅವಕಾಶಗಳು ಚಿತ್ರರಂಗದಿಂದ ಬರುತ್ತಿವೆ.
ಅದರಲ್ಲಿ ನನಗೆ ಇಷ್ಟವಾದಂತ, ನಾನು ಮಾಡಬಲ್ಲೆ ಎಂಬ ಪಾತ್ರಗಳನ್ನು ಮಾತ್ರ ಒಪ್ಪಿಕೊಳ್ಳುತ್ತಿದ್ದೇನೆ. ಸದ್ಯ ಈಗಾಗಲೇ ಮೂರ್‍ನಾಕ್ಕು ಚಿತ್ರಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದು, ಆ ಎಲ್ಲಾ ಚಿತ್ರಗಳು ಬಿಡುಗಡೆಯ ಹಂತದಲ್ಲಿವೆ.
ಈ ವರ್ಷದ ಕೊನೆಗೆ ನಾನು ಅಭಿನಯಿಸಿರುವ ಕೆಲವು ಚಿತ್ರಗಳು ಬಿಡುಗಡೆಯಾಗಲಿವೆ’ ಎನ್ನುತ್ತಾರೆ. ಇನ್ನು “ಕಾರ್ಕಿ’ ಚಿತ್ರದಲ್ಲಿ ಪಾವನಾ, ಪೂರ್ವಿ ಎನ್ನುವ ಹೆಸರಿನ ಬೋಲ್ಡ್ ಗರ್ಲ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ.
“ಕಾರ್ಕಿ’ ಚಿತ್ರದಲ್ಲಿ ಮೂವರು ನಾಯಕಿಯರಿದ್ದು, ಮೂವರ ಪಾತ್ರಗಳಿಗೂ ಅದರದ್ದೇಯಾದ ಪ್ರಾಮುಖ್ಯತೆ ಇದೆ. ಹಾಗಾಗಿ ಈ ಪಾತ್ರವನ್ನು ಒಪ್ಪಿಕೊಂಡೆ. ಬೋಲ್ಡ್ ಗರ್ಲ್ ಅಂದ ಕೂಡಲೇ ನಾನು ತೊಡುವ ಬಟ್ಟೆಯಲ್ಲಿ ಅಂತಲ್ಲ.
ಸ್ವಭಾವದಲ್ಲಿ ಬೋಲ್ಡ್ ಎನ್ನಬಹುದು. ತುಂಬಾ ಪ್ರಾಕ್ಟಿಕಲ್ ಆಗಿ ಯೋಚಿಸುವ ಹುಡುಗಿ ಏನೇನು ಮಾಡುತ್ತಾಳೆ ಅನ್ನೋದು ನನ್ನ ಪಾತ್ರ’ ಎಂದು ಪಾತ್ರದ ಬಗ್ಗೆ ವಿವರಣೆ ಕೊಡುತ್ತಾರೆ.
ಸದ್ಯ ಕನ್ನಡದ ಭರವಸೆಯ ನಾಯಕ ನಟಿಯರ ಸಾಲಿನಲ್ಲಿ ಗುರುತಿಸಿಕೊಳ್ಳುತ್ತಿರುವ ಪಾವನಾಗೆ “ಕಾರ್ಕಿ’ ಚಿತ್ರದ, ಹೊಸ ಪಾತ್ರ ಸಿನಿಕೆರಿಯರ್‌ನಲ್ಲಿ ಎಷ್ಟರ ಮಟ್ಟಿಗೆ ಮೈಲೇಜ್ ತಂದುಕೊಡುತ್ತದೆ ಎಂಬುದು ಚಿತ್ರ ಬಿಡುಗಡೆಯಾದ ಮೇಲಷ್ಟೇ ಗೊತ್ತಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.