ಅಭಿನಯ ಬ್ರಹ್ಮ ಅನಂತ್ ನಾಗ್ ಗೆ ಪದ್ಮ ಪ್ರಶಸ್ತಿ ನೀಡಿ ಅಭಿಯಾನಕ್ಕೆ ರಕ್ಷಿತ್-ರಿಷಬ್ ಬೆಂಬಲ

Team Udayavani, Jul 13, 2021, 12:47 PM IST

rishab shetty

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಅಭಿನಯ ಬ್ರಹ್ಮ ಅನಂತ್ ನಾಗ್ ಅವರಿಗೆ 2022ರ ಸಾಲಿನ ಪದ್ಮ ಪ್ರಶಸ್ತಿ ನೀಡಬೇಕೆಂದು ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಹಾಗೂ ರಿಷಬ್ ಶೆಟ್ಟಿ ಸೇರಿದಂತೆ ಚಂದನವನದ ಸಾಕಷ್ಟು ಜನರು ಒತ್ತಾಯಿಸಿದ್ದು, ಈ ಕುರಿತು ಟ್ವಿಟರಿನಲ್ಲಿ ಅಭಿಯಾನ ಶುರು ಮಾಡಿದ್ದಾರೆ.

ಈ ವರ್ಷದ ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿಗಳಿಗೆ ಜನರೇ ತಮ್ಮ ನಡುವಿನ ಸಾಧಕರ ಹೆಸರನ್ನು ಶಿಫಾರಸು ಮಾಡಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ #PeoplesPadma ಹ್ಯಾಷ್​ಟ್ಯಾಗ್​ನಡಿ ಅಭಿಯಾನವೊಂದು ಆರಂಭವಾಗಿದ್ದು, ಕನ್ನಡದ ಖ್ಯಾತ ನಟ ಅನಂತ್​ ನಾಗ್ (Anant Nag) ಅವರಿಗೆ ಈ ವರ್ಷದ ಪದ್ಮ ಪ್ರಶಸ್ತಿಯನ್ನು (Padma Awards 2021) ನೀಡಬೇಕೆಂದು ಒತ್ತಾಯಿಸಲಾಗುತ್ತಿದೆ.

#AnanthnagForPadma ಎಂಬ ಹ್ಯಾಷ್​ಟ್ಯಾಗ್​ನಡಿ ಟ್ವಿಟ್ಟರ್​ನಲ್ಲಿ ಅಭಿಯಾನ ನಡೆಯುತ್ತಿದ್ದು, ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ ಕೂಡ ಈ ಅಭಿಯಾನಕ್ಕೆ ಕೈಜೋಡಿಸಿದ್ದಾರೆ. ದೇಶದ ಅತ್ಯುನ್ನತ ಗೌರವಗಳಾದ ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿಗಳಿಗೆ ಸಾಧಕರನ್ನು ಆಯ್ಕೆ ಮಾಡಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಜನತೆಗೆ ಕರೆನೀಡಿದ್ದಾರೆ. ಚಿತ್ರರಂಗದ ಮಹಾನ್ ಪ್ರತಿಭೆಗಳಲ್ಲೊಬ್ಬರಾದ ಅನಂತ್​ನಾಗ್ ಅವರು ಕನ್ನಡ ಭಾಷೆಗೆ, ನಾಡಿಗೆ, ಚಿತ್ರರಂಗಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕೆಂದು ಒತ್ತಾಯಿಸೋಣ. ಕನ್ನಡನಾಡಿನ ಪರವಾಗಿ ಅನಂತ್​ನಾಗ್ ಅವರನ್ನು #PeoplesPadma ಪ್ರಶಸ್ತಿಗೆ ನಾಮನಿರ್ದೇಶನ ಮಾಡೋಣ ಎಂದು ಈ ಕುರಿತು ಟ್ವಿಟ್ಟರ್​ನಲ್ಲಿ ರಿಷಬ್ ಶೆಟ್ಟಿ ಪೋಸ್ಟ್ ಮಾಡಿದ್ದಾರೆ.

ಇನ್ನುರಕ್ಷಿತ್ ಶೆಟ್ಟಿಯವರು ಟ್ವೀಟ್ ಮಾಡಿ ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದು, ಅಪ್ರತಿಮ ನಟನಿಗೆ ಅತ್ಯುನ್ನತ ಪ್ರಶಸ್ತಿಯೊಂದು ಗುಡಿಯ ಮೇಲೆ ಕಲಶವಿಟ್ಟಂತೆ. ಹಿರಿಯ ನಟ ಅನಂತ ನಾಗ್ ಅವರಿಗೆ ಪದ್ಮಪ್ರಶಸ್ತಿ ನೀಡಬೇಕೆಂಬುದು ನನ್ನ ಹಾಗೂ ಕನ್ನಡಿಗರ ಆಶಯ. ಈ ಪ್ರಯತ್ನಕ್ಕೆ ನಾವೆಲ್ಲರೂ ಒಂದಾಗಿ ಬೆಂಬಲ ಸೂಚಿಸೋಣ ಎಂದಿದ್ದಾರೆ.

ಇನ್ನು ಭಾರತದಲ್ಲಿ ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರತಿಭಾವಂತರಿದ್ದಾರೆ. ಅವರನ್ನು ಮುನ್ನೆಲೆಗೆ ತಂದು ಅವರ ಸಾಧನೆಯನ್ನು ದೇಶಕ್ಕೆ ಪರಿಚಯಿಸುವ ಉದ್ದೇಶದಿಂದ ತೆರಮರೆಯಲ್ಲಿರುವ ಸಾಧಕರನ್ನು ಪದ್ಮ ಪ್ರಶಸ್ತಿಗೆ ಜನರೇ ಶಿಫಾರಸು ಮಾಡಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. #PeoplesPadma ಹ್ಯಾಷ್​ಟ್ಯಾಗ್​ನಡಿ ಜನರೇ ತಮ್ಮ ನಡುವಿನ ಸಾಧಕರನ್ನು ನಾಮನಿರ್ದೇಶನ ಮಾಡುವ ಅವಕಾಶ ನೀಡಲಾಗಿದೆ. ಸೆಪ್ಟೆಂಬರ್ 15ರವರೆಗೆ ಈ ಹ್ಯಾಷ್​ಟ್ಯಾಗ್​ನಡಿ ನಾಮಿನೇಟ್ ಮಾಡಲು ಅವಕಾಶ ಇರುತ್ತದೆ. ಆ ನಾಮನಿರ್ದೇಶನಗಳಲ್ಲಿ ಅತ್ಯುತ್ತಮವಾದವರನ್ನು ಆಯ್ಕೆ ಮಾಡಿ ಪದ್ಮ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಟಾಪ್ ನ್ಯೂಸ್

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

Maryade Prashne movie trailer out

Maryade Prashne: ಪ್ರಶ್ನೆ ಕೇಳಲು ಬಂದ ಮರ್ಯಾದಸ್ತರು

ShivaRajkumar: ʼಘೋಸ್ಟ್‌ʼ ಬಳಿಕ ಮತ್ತೆ ಶ್ರೀನಿ ಜತೆ ಶಿವಣ್ಣ ಸಿನಿಮಾ; ಟೈಟಲ್‌ ರಿವೀಲ್

ShivaRajkumar: ʼಘೋಸ್ಟ್‌ʼ ಬಳಿಕ ಮತ್ತೆ ಶ್ರೀನಿ ಜತೆ ಶಿವಣ್ಣ ಸಿನಿಮಾ; ಟೈಟಲ್‌ ರಿವೀಲ್

5

Sandalwood: ಮುಹೂರ್ತದಲ್ಲಿ ‘ದಿ ಟಾಸ್ಕ್’

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1

Sullia: ಬಿಎಸ್ಸೆನ್ನೆಲ್‌ ಟವರ್‌ಗೆ ಸೋಲಾರ್‌ ಪವರ್‌!

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.