ನವೆಂಬರ್‌ನಲ್ಲಿ “ಪೈಲ್ವಾನ್‌’ ಶುರು


Team Udayavani, Oct 2, 2017, 8:00 PM IST

Phailwan-2.jpg

“ಹೆಬ್ಬುಲಿ’ ನಂತರ ನಿರ್ದೇಶಕ ಕೃಷ್ಣ ಸುದೀಪ್‌ ಅವರಿಗೆ “ಪೈಲ್ವಾನ್‌’ ಚಿತ್ರ ಮಾಡುತ್ತಿರುವ ವಿಚಾರ ನಿಮಗೆ ಗೊತ್ತೇ ಇದೆ. ಈಗಾಗಲೇ ಫ‌ಸ್ಟ್‌ಲುಕ್‌ ಕೂಡಾ ಬಿಡುಗಡೆಯಾಗಿದೆ. ಚಿತ್ರೀಕರಣ ಯಾವಾಗ ಆರಂಭವಾಗುತ್ತದೆ ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ನವೆಂಬರ್‌ ಮೊದಲ ವಾರದಿಂದ “ಪೈಲ್ವಾನ್‌’ ಚಿತ್ರೀಕರಣ ಆರಂಭವಾಗಲಿದೆ. ಸದ್ಯ ಸುದೀಪ್‌ ಬ್ಯಾಂಕಾಕ್‌ನಲ್ಲಿ “ದಿ ವಿಲನ್‌’ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದು, ಅದು ಮುಗಿಸಿಕೊಂಡು ಬಂದು “ಪೈಲ್ವಾನ್‌’ ಆಗಲಿದ್ದಾರೆ.

ನವೆಂಬರ್‌ನಿಂದ ಆರಂಭವಾಗುವ ಚಿತ್ರೀಕರಣ ಸತತವಾಗಿ ನಡೆಯಲಿದೆ. ಹೌದು, ನವೆಂಬರ್‌ನಿಂದ “ಪೈಲ್ವಾನ್‌’ ಚಿತ್ರದ ಚಿತ್ರೀಕರಣವಾಗಲಿದ್ದು, ಇದರ ಜೊತೆಜೊತೆಗೆ “ಕೋಟಿಗೊಬ್ಬ 3′ ಚಿತ್ರದ ಚಿತ್ರೀಕರಣ ನಡೆಯುವ ಸಾಧ್ಯತೆ ಇದೆ. ಈ ಮಧ್ಯೆ, ಕಲಾವಿದರನ್ನು ಆಯ್ಕೆ ಮಾಡುವಲ್ಲಿ ಹಾಗೂ ಡೇಟ್ಸ್‌ ಹೊಂದಿಸುವಲ್ಲಿ ಕೃಷ್ಣ ಬಿಝಿಯಾಗಿದ್ದಾರೆ. ಕೃಷ್ಣ ನಿರ್ದೇಶನದ “ಹೆಬ್ಬುಲಿ’ ಚಿತ್ರದಲ್ಲಿ ಅಮಲಾ ಪೌಲ್‌ ನಾಯಕಿಯಾಗಿದ್ದರು. 

ಈಗ “ಪೈಲ್ವಾನ್‌’ ಚಿತ್ರಕ್ಕೆ ಪರಭಾಷೆಯ ಸ್ಟಾರ್‌ ನಾಯಕಿಯನ್ನು ಕರೆತರಲು ಕೃಷ್ಣ ಪ್ರಯತ್ನಿಸುತ್ತಿದ್ದಾರೆ. ಈಗಾಗಲೇ ಕೆಲವು ಸ್ಟಾರ್‌ ನಟಿಯರ ಜೊತೆ ಮಾತುಕತೆ ನಡೆದಿದ್ದು, ಸದ್ಯದಲ್ಲೇ “ಪೈಲ್ವಾನ್‌’ಗೆ ಜೋಡಿ ಯಾರೆಂಬುದು ಗೊತ್ತಾಗಲಿದೆ.  ಚಿತ್ರದ ಟೈಟಲ್‌ಗೆ ತಕ್ಕಂತೆ ಸುದೀಪ್‌ ಅವರ ಗೆಟಪ್‌ ಬದಲಾಗಲಿದ್ದು, ಈಗಾಗಲೇ ಅದರ ಕಸರತ್ತಿನಲ್ಲಿ ಸುದೀಪ್‌ ತೊಡಗಿದ್ದಾರೆ ಕೂಡಾ.

ಈ ಚಿತ್ರಕ್ಕಾಗಿ ಅವರು ಬಾಡಿ ಟೋನ್‌ ಮಾಡುತ್ತಿದ್ದು, ಹೊಸ ರೀತಿ ಅಭಿಮಾನಿಗಳಿಗೆ ದರ್ಶನ ನೀಡಲಿದ್ದಾರೆ. ಈ ಹಿಂದೆ ಕಾಣಿಸಿಕೊಳ್ಳದಂತಹ ಹೊಸ ಬಗೆಯ ಪಾತ್ರ ಇದಾದ ಕಾರಣ ಸುದೀಪ್‌ ಅವರು ಕೂಡಾ, ಪಾತ್ರಕ್ಕೆ ಬೇಕಾದ ಪೂರ್ವ ಸಿದ್ಧತೆಯಲ್ಲಿ ತೊಡಗಿದ್ದಾರೆ. ಇನ್ನು, ಚಿತ್ರಕ್ಕೆ ಅರ್ಜುನ್‌ ಜನ್ಯಾ ಸಂಗೀತ ನೀಡುತ್ತಿದ್ದು, ಅಕ್ಟೋಬರ್‌ 20ರಿಂದ ಹಾಡುಗಳ ದ್ವನಿಮುದ್ರಣ ಕಾರ್ಯ ಆರಂಭವಾಗಲಿದೆ.

“ಪೈಲ್ವಾನ್‌’ ಚಿತ್ರವನ್ನು ಆರ್‌.ಆರ್‌.ಆರ್‌. ಮೋಷನ್‌ ಪಿಕ್ಚರ್ ಬ್ಯಾನರ್‌ನಡಿ ಸ್ವಪ್ನ ಕೃಷ್ಣ ಮತ್ತು ಕೃಷ್ಣ ನಿರ್ಮಿಸುತ್ತಿದ್ದಾರೆ. ಇನ್ನು ನಿರ್ದೇಶನ ಮಾಡುವ ಜೊತೆಗೆ ಕಥೆ ಹಾಗೂ ಚಿತ್ರಕಥೆಯನ್ನು ಕೃಷ್ಣ ರಚಿಸಿದ್ದಾರೆ. ಈ ಚಿತ್ರಕ್ಕಾಗಿ ದಾವಣಗೆರೆ, ಹುಬ್ಬಳ್ಳಿ ಸುತ್ತಮುತ್ತ ಚಿತ್ರದ ಪ್ರಮುಖ ದೃಶ್ಯಗಳ ಚಿತ್ರೀಕರಣ ನಡೆಯಲಿದೆ. ಕರುಣಾಕರನ್‌ ಅವರು ಛಾಯಾಗ್ರಹಣ ಮಾಡಲಿದ್ದಾರೆ. 

ಟಾಪ್ ನ್ಯೂಸ್

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

ಸಿ.ಟಿ.ರವಿ

chikkamagaluru: ಹೆಬ್ಬಾಳ್ಕರ್‌ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ

Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ

Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

ulock

Sandalwood: ಅನ್‌ಲಾಕ್‌ ರಾಘವದಿಂದ ಲಾಕ್‌ ಸಾಂಗ್‌ ಬಂತು

yogaraj bhat song in Manada kadalu movie

Manada Kadalu: ಭಟ್ರು ಬರೆದ ಅನರ್ಥ ಹಾಡು: ಮನದ ಕಡಲಿನಲ್ಲಿ ತುರ್ರಾ…

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

12-bng

Bengaluru: ಅಂಗಡಿ ಮಾಲಿಕನಿಗೆ ಹಲ್ಲೆ: ಇಬ್ಬರ ಸೆರೆ

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

11-bng

Bengaluru:1 ಕಿ.ಮೀ. ಬೆನ್ನಟ್ಟಿ ಕಾಡುಪ್ರಾಣಿ ಬೇಟೆಗಾರರ ಬಂಧಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

10-bng

Bengaluru: ನಾಯಿ ಕಚ್ಚಿ 4 ವರ್ಷದ ಬಾಲಕನಿಗೆ ಗಾಯ: ಶ್ವಾನ ಮಾಲಿಕನ ವಿರುದ್ಧ ಪ್ರಕರಣ ದಾಖಲು

ಸಿ.ಟಿ.ರವಿ

chikkamagaluru: ಹೆಬ್ಬಾಳ್ಕರ್‌ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.