ಫ್ಯಾಂಟಮ್ ಸ್ಪೆಷೆಲ್ ಸಾಂಗ್ : ಸುದೀಪ್ ಜೊತೆ ಬಾಲಿವುಡ್ ಬೆಡಗಿ ಕತ್ರಿನಾ ಸ್ಟೆಪ್?
Team Udayavani, Nov 29, 2020, 10:00 PM IST
ಕಿಚ್ಚ ಸುದೀಪ್ ವಿಕ್ರಾಂತ್ ರೋಣನಾಗಿ ಕಾಣಿಸಿಕೊಳ್ಳುತ್ತಿರುವ ಸ್ಯಾಂಡಲ್ ವುಡ್ ನ ಬಹು ನಿರೀಕ್ಷಿತ ಚಿತ್ರ ಫ್ಯಾಂಟಮ್. ಈಗಾಗಲೇ ಫ್ಯಾಂಟಮ್ ತಂಡ ಹೈದರಾಬಾದ್ ನಲ್ಲಿ ಚಿತ್ರೀಕರಣವನ್ನು ಪೂರ್ತಿಗೊಳಿಸಿ, ಅಂತಿಮ ಹಂತದ ಚಿತ್ರೀಕರಣದ ಯೋಜನೆಯಲ್ಲಿ ಬ್ಯುಸಿಯಾಗಿದೆ.
ಇದೇ ಡಿಸೆಂಬರ್ ಮೊದಲವಾರದಿಂದ “ಫ್ಯಾಂಟಮ್’ ಚಿತ್ರದ ಕೊನೆಯ ಹಂತದ ಚಿತ್ರೀಕರಣ ಪ್ರಾರಂಭವಾಗಲಿದೆ. ಈ ಚಿತ್ರೀಕರಣದಲ್ಲಿ ಚಿತ್ರದಲ್ಲಿ ಬರುವ ಸ್ಪೆಷಲ್ ಸಾಂಗ್ ಒಂದನ್ನು ಅದ್ಧೂರಿ ಸೆಟ್ನಲ್ಲಿ ಚಿತ್ರೀಕರಿಸಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ. ಇನ್ನು ಈ ಸ್ಪೆಷಲ್ ಸಾಂಗ್ಗೆ ಹೆಜ್ಜೆ ಹಾಕಲು ಬಾಲಿವುಡ್ ಬೆಡಗಿ ಕತ್ರಿನಾ ಕೈಫ್ ಅವರನ್ನು ತರೆತರುವ ಯೋಚನೆಯಲ್ಲಿದೆ ಚಿತ್ರತಂಡ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚಿತ್ರತಂಡ, “ಸಿನಿಮಾದಲ್ಲಿ ಬರುವ ಸ್ಪೆಷಲ್ ಹಾಡೊಂದನ್ನು ವಿಶೇಷವಾಗಿ ಚಿತ್ರೀಕರಿಸಲು ಪ್ಲಾನ್ ಮಾಡಿ ಕೊಂಡಿರುವುದು ನಿಜ. ಆದರೆ ಈ ಹಾಡಿನಲ್ಲಿ ಸುದೀಪ್ ಅವರ ಜೊತೆ ಯಾರು ನೃತ್ಯ ಮಾಡಲಿದ್ದಾರೆ ಅನ್ನೋದು ಇನ್ನೂ ಖಚಿತವಾಗಿಲ್ಲ. ಕತ್ರಿನಾಕೈಫ್ ಅವರೊಂದಿಗೂ ಮಾತುಕತೆ ನಡೆಸಲಾಗಿದೆ.ಕತ್ರಿನಾ ಡೇಟ್ ಹೊಂದಾಣಿಕೆ ಆಗದಿದ್ದರೆ, ನೋರಾ ಫತೇಹಿ ಅವರನ್ನು ಕರೆತರಲು ಪ್ರಯತ್ನ ಮಾಡುತ್ತಿದ್ದೇವೆ’ ಎಂದಿದೆ.
ಅನೂಪ್ ಭಂಡಾರಿ ಫ್ಯಾಂಟಮ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಅಜನೀಶ್ ಲೋಕ್ ನಾಥ್ ಮ್ಯೂಸಿಕ್ ಚಿತ್ರಕ್ಕಿದೆ. ಶಾಲಿನಿ ಮಂಜುನಾಥ್ ಹಾಗೂ ಜ್ಯಾಕ್ ಮಂಜು ನಿರ್ಮಾಣದ ಹೊಣೆಯನ್ನು ಹೊತ್ತಿದ್ದಾರೆ. ಸುದೀಪ್ ನೊಂದಿಗೆ, ನಿರೂಪ್ ಭಂಡಾರಿ,ನೀತಾ ಅಶೋಕ್ ಹಾಗೂ ಇತರ ಕಲಾವಿದರು ಪ್ರಮುಖರ ಕಾಣಿಸಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.