Kannada Cinema; ದುಬೈನಲ್ಲಿ ನಡೆಯುತ್ತಿದೆ ‘ಪಿಂಕ್ ನೋಟ್’ ಚಿತ್ರೀಕರಣ
Team Udayavani, Dec 24, 2023, 4:30 PM IST
“ಅಮ್ಮ ಎಂಟರ್‌ಪ್ರೈಸಸ್’ ಲಾಂಛನದಲ್ಲಿ ಹೆಚ್. ಆನಂದಪ್ಪ ನಿರ್ಮಿಸುತ್ತಿರುವ “ಪಿಂಕ್ ನೋಟ್’ ಸಿನಿಮಾದ ಚಿತ್ರೀಕರಣ ದುಬೈನಲ್ಲಿ ಭರದಿಂದ ನಡೆಯುತ್ತಿದೆ.
ಇದೇ ಡಿ. 9 ರಿಂದ ದುಬೈನಲ್ಲಿ “ಪಿಂಕ್ ನೋಟ್’ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿದ್ದು, ಸುಮಾರು 30 ದಿನಗಳ ಕಾಲ ದುಬೈನ ಆಜರ್ ಬಾಯಿ ಜನ್ ಬಾಕು ಸಿಟಿ ಸೇರಿದಂತೆ ವಿವಿಧ ತಾಣಗಳಲ್ಲಿ “ಪಿಂಕ್ ನೋಟ್’ ಸಿನಿಮಾದ ಚಿತ್ರೀಕರಣ ನಡೆಯಲಿದೆ ಎಂದು ಚಿತ್ರತಂಡ ತಿಳಿಸಿದೆ.
“ಪಿಂಕ್ ನೋಟ್’ ಸಿನಿಮಾದಲ್ಲಿ ನೆನಪಿರಲಿ ಪ್ರೇಮ್ ನಾಯಕನಾಗಿದ್ದು, ಭಾವನಾ ಮೆನನ್ (ಜಾಕಿ ಭಾವನಾ) ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಉಳಿದಂತೆ ಶ್ರೀನಿವಾಸ ಪ್ರಭು, ಪದ್ಮಜಾ ರಾವ್, ಗಿರೀಶ್ ಶಿವಣ್ಣ, ಮುನಿ, ಯುಗ ಚಂದ್ರು, ಸಿಂಚನಾ, ಶೈಲಜಾ ಮುಂತಾದ ಕಲಾವಿದರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ಸದ್ಯ ದುಬೈನಲ್ಲಿ ನಡೆಯುತ್ತಿರುವ “ಪಿಂಕ್ ನೋಟ್’ ಸಿನಿಮಾದ ಚಿತ್ರೀಕರಣದಲ್ಲಿ ನಾಯಕ ನೆನಪಿರಲಿ ಪ್ರೇಮ್, ನಾಯಕಿ ಭಾವನಾ ಸೇರಿದಂತೆ ಸಿನಿಮಾದ ಪ್ರಮುಖ ಕಲಾವಿದರು ಭಾಗಿಯಾಗುತ್ತಿದ್ದಾರೆ. ಸಿನಿಮಾದ ಕೆಲವು ದೃಶ್ಯಗಳ ಮಾತಿನ ಚಿತ್ರೀಕರಣ ಮತ್ತು ಎರಡು ಹಾಡುಗಳ ಚಿತ್ರೀಕರಣವನ್ನು ದುಬೈನಲ್ಲಿ ನಡೆಸಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.
“ಪಿಂಕ್ ನೋಟ್’ ಸಿನಿಮಾಕ್ಕೆ ರಕ್ಷಣ್ (ರುದ್ರೇಶ್) ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದು, ಸಿನಿಮಾಕ್ಕೆ ಸೆಲ್ವಂ ಮಾದಪ್ಪನ್ ಛಾಯಾಗ್ರಹಣ, ಕೆ.ಎಂ ಪ್ರಕಾಶ್ ಸಂಕಲನವಿದೆ. ಸಿನಿಮಾದ ಹಾಡುಗಳಿಗೆ ಜೆಸ್ಸಿ ಗಿಫ್ಟ್ ಸಂಗೀತ ಸಂಯೋಜಿಸುತ್ತಿದ್ದಾರೆ. ಸಿನಿಮಾದ ಹಾಡುಗಳಿಗೆ ಧನು ನೃತ್ಯ ಸಂಯೋಜಿಸಿದ್ದು, ಮಾಸ್ ಮಾದ ಸಾಹಸ ಸಂಯೋಜಿಸುತ್ತಿದ್ದಾರೆ. ಚಿತ್ರತಂಡದ ಯೋಜನೆಯಂತೆ, ಮುಂಬರುವ ಏಪ್ರಿಲ್ ಅಥವಾ ಮೇ ವೇಳೆಗೆ “ಪಿಂಕ್ ನೋಟ್’ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆಯಲ್ಲಿದೆ ಚಿತ್ರತಂಡ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.