ಅಪ್ಪು ʼಗಂಧದ ಗುಡಿʼ ಮೆಚ್ಚಿದ ಮೋದಿ: ಅಶ್ವಿನಿ ಪುನೀತ್ ಕುಮಾರ್ ಟ್ವೀಟ್ ಗೆ ಪ್ರತಿಕ್ರಿಯೆ
Team Udayavani, Oct 9, 2022, 1:15 PM IST
ಬೆಂಗಳೂರು: ಪವರ್ ಸ್ಟಾರ್ ಅಪ್ಪು ಅವರ ʼಗಂಧದ ಗುಡಿʼ ಟ್ರೇಲರ್ ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ವೈರಲ್ ಆಗಿದೆ. ಅಮೋಘ, ಅದ್ಭುತ ಜೀವ ವೈವಿಧ್ಯಮಯ ಜಗತ್ತಿನ ದೃಶ್ಯವನ್ನು ಟ್ರೇಲರ್ ನಲ್ಲಿ ತೋರಿಸಲಾಗಿದೆ.
ಅದ್ಧೂರಿ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಸೇರಿದಂತೆ ಹಲವರು ಗಣ್ಯರು ಭಾಗಿಯಾಗಿದ್ದರು. ಟ್ರೇಲರ್ ಬಿಡುಗಡೆಗೊಂಡ ಬಳಿಕ ಅಪ್ಪು ಅವರ ಡ್ರೀಮ್ ಪ್ರಾಜೆಕ್ಟ್ ʼಗಂಧದ ಗುಡಿʼಯ ಲಿಂಕ್ ನೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ಯಾಗ್ ಮಾಡಿ ಟ್ವಿಟರ್ ನಲ್ಲಿ ಹಾಕಿದ್ದರು. ಅದಕ್ಕೆ ಮೋದಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.
“ನಮಸ್ತೆ ಮೋದಿ ಅವರೇ, ಇಂದು ತುಂಬಾ ಭಾವನಾತ್ಮಕ ದಿನ, ಅಪ್ಪು ಅವರ ಹೃದಯಕ್ಕೆ ಹತ್ತಿರವಾದ ʼಗಂಧದ ಗುಡಿʼ ಟ್ರೇಲರ್ ರಿಲೀಸ್ ಮಾಡಿದ್ದೇವೆ. ಅಪ್ಪು ಸದಾ ನಿಮ್ಮೊಂದಿಗಿನ ಮಾತುಗಳನ್ನು ಸ್ಮರಿಸುತ್ತಿದ್ದರು. ನಿಮ್ಮೊಂದಿಗೆ ವೈಯಕ್ತಿಕವಾಗಿ ಹಂಚಿಕೊಳ್ಳಲು ಇಷ್ಟಪಡುತ್ತಿದ್ದರು” ಎಂದು ಟ್ವೀಟ್ ಮಾಡಿದ್ದರು.
ಈ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿ ಕನ್ನಡದಲ್ಲಿ “ಅಪ್ಪು ಜಗತ್ತಿನಾದ್ಯಂತ ಲಕ್ಷಾಂತರ ಹೃದಯಗಳಲ್ಲಿ ನೆಲೆಸಿದ್ದಾರೆ. ಅವರು ತೇಜಸ್ಸಿನ ಪ್ರತೀಕ, ಚೈತನ್ಯದ ಚಿಲುಮೆ ಮತ್ತು ಸರಿಸಾಟಿಯಿಲ್ಲದ ಪ್ರತಿಭಾವಂತರಾಗಿದ್ದರು. #GandhadaGudi ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯ ಹಾಗು ಪರಿಸರ ಸಂರಕ್ಷಣೆಗೆ ಸಲ್ಲಿಸಲಾದ ಗೌರವ. ಈ ಪ್ರಯತ್ನಕ್ಕೆ ನನ್ನ ಶುಭ ಹಾರೈಕೆಗಳು ಎಂದಿದ್ದಾರೆ.
ಇದರೊಂದಿಗೆ ಪ್ರಧಾನಿ ಈ ಹಿಂದೆ ಅಪ್ಪು ಹಾಗೂ ಅಶ್ವಿನಿ ಅವರು ತೆಗೆಸಿಕೊಂಡ ಫೋಟೋಗಳನ್ನು ರೀಟ್ವೀಟ್ ಮಾಡಿದ್ದಾರೆ.
ಅಮೋಘವರ್ಷ ನಿರ್ದೇಶನ ಮಾಡಿರುವ, ʼಗಂಧದ ಗುಡಿʼ ಅಕ್ಟೋಬರ್ 25 ರಂದು ರಿಲೀಸ್ ಆಗಲಿದೆ.
ಅಪ್ಪು ಜಗತ್ತಿನಾದ್ಯಂತ ಲಕ್ಷಾಂತರ ಹೃದಯಗಳಲ್ಲಿ ನೆಲೆಸಿದ್ದಾರೆ. ಅವರು ತೇಜಸ್ಸಿನ ಪ್ರತೀಕ, ಚೈತನ್ಯದ ಚಿಲುಮೆ ಮತ್ತು ಸರಿಸಾಟಿಯಿಲ್ಲದ ಪ್ರತಿಭಾವಂತರಾಗಿದ್ದರು. #GandhadaGudi ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯ ಹಾಗು ಪರಿಸರ ಸಂರಕ್ಷಣೆಗೆ ಸಲ್ಲಿಸಲಾದ ಗೌರವ. ಈ ಪ್ರಯತ್ನಕ್ಕೆ ನನ್ನ ಶುಭ ಹಾರೈಕೆಗಳು. https://t.co/VTimdGmDAM
— Narendra Modi (@narendramodi) October 9, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.