ಪದ್ಮಿನಿಗೆ ಪವರ್ ಸಾಥ್
ಟ್ರೇಲರ್ ಮೆಚ್ಚಿದ ಪುನೀತ್
Team Udayavani, Apr 23, 2019, 3:26 AM IST
ಜಗ್ಗೇಶ್ ಅಭಿನಯದ “ಪ್ರೀಮಿಯರ್ ಪದ್ಮಿನಿ’ ಚಿತ್ರ ಈ ವಾರ (ಏ.26) ತೆರೆಕಾಣುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದಿದೆ. ಈಗ ನಟ ಪುನೀತ್‌ರಾಜಕುಮಾರ್ ಕೂಡಾ ಚಿತ್ರದ ಟ್ರೇಲರ್ ನೋಡಿ ಖುಷಿ ಪಟ್ಟಿದ್ದಾರೆ.
ತನಗೆ ಇಷ್ಟವಾದ ಸಿನಿಮಾಗಳಿಗೆ ಬೆನ್ನುತಟ್ಟುತ್ತಲೇ ಬರುತ್ತಿರುವ ಪುನೀತ್ ಈ ಬಾರಿ “ಪ್ರೀಮಿಯರ್ ಪದ್ಮಿನಿ’ ಚಿತ್ರದ ಟ್ರೇಲರ್ ಅನ್ನು ಮೆಚ್ಚಿಕೊಂಡಿದ್ದಾರೆ. “ಫ್ಯಾಮಿಲಿ ಆಡಿಯನ್ಸ್‌ಗೆ ಬೇಕಾದ ಎಲ್ಲಾ ಅಂಶಗಳು ಈ ಸಿನಿಮಾದಲ್ಲಿವೆ’ ಎಂದಿರುವ ಪುನೀತ್, “ಇವತ್ತು ಕನ್ನಡದಲ್ಲಿ ಹೊಸ ಬಗೆಯ ಸಿನಿಮಾಗಳು ನಾನಾ ಕಾರಣಗಳಿಗಾಗಿ, ಪ್ರೇಕ್ಷಕರನ್ನು ಸೆಳೆಯುತ್ತಿವೆ.
“ಪ್ರೀಮಿಯರ್ ಪದ್ಮಿನಿ’ ಕೂಡಾ ಅದೇ ಸಾಲಿನಲ್ಲಿರುವ ಚಿತ್ರ ಎಂಬ ವಿಶ್ವಾಸವಿದೆ’ ಎಂದಿದ್ದಾರೆ. ಈ ಚಿತ್ರವನ್ನು ಶ್ರುತಿ ನಾಯ್ಡು ನಿರ್ಮಿಸಿದ್ದಾರೆ. ಕಿರುತೆರೆಯಲ್ಲಿ ವಿಭಿನ್ನ ಧಾರವಾಹಿಗಳನ್ನು ನೀಡುವ ಮೂಲಕ ಮನೆಮಂದಿಯ ಮನಗೆದ್ದಿರುವ ಶ್ರುತಿ ನಾಯ್ಡು ಮೊದಲ ಬಾರಿಗೆ ಹಿರಿತೆರೆಗೆ ಎಂಟ್ರಿಕೊಟ್ಟಿದ್ದಾರೆ. ಹಿರಿತೆರೆಯ ಪ್ರೇಕ್ಷಕರಿಗೂ ಈ ಸಿನಿಮಾ ಇಷ್ಟವಾಗುತ್ತದೆ ಎಂಬ ವಿಶ್ವಾಸ ಅವರಿಗಿದೆ.
ಅಂದಹಾಗೆ, ರಮೇಶ್ ಇಂದಿರಾ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಕುಟುಂಬವೊಂದರ ಸಮಸ್ಯೆಯನ್ನಿಟ್ಟುಕೊಂಡು ಕಥೆ ಹೆಣೆಯಲಾಗಿದೆ. ಇವತ್ತು ವಿಶಾಲವಾಗಿವಾಗಿ ಯೋಚಿಸುವುದನ್ನು ಬಿಟ್ಟು, ಸಂಕುಚಿತ ಮನಸ್ಥಿತಿಯಿಂದ ಸಣ್ಣಪುಟ್ಟ ಸಮಸ್ಯೆಗಳಿಗೂ ಕೋರ್ಟ್, ಡೈವೋರ್ಸ್ ಎನ್ನುವ ಮಂದಿಗೆ ಈ ಚಿತ್ರ ಒಂದು ಪಾಠವಾಗಬಲ್ಲದು ಎಂಬ ವಿಶ್ವಾಸ ನಿರ್ದೇಶಕರಿಗಿದೆ.
ಚಿತ್ರದಲ್ಲಿ ಕಾಮಿಡಿ ಜೊತೆಗೆ ಭಾವನಾತ್ಮಕ ಸಂಬಂಧಕ್ಕೂ ಒತ್ತು ನೀಡಲಾಗಿದೆಯಂತೆ. ಹಿರಿಯ ಮತ್ತು ಕಿರಿಯ ಕಲಾವಿದರ ಸಂಗಮವೇ ಸಿನಿಮಾದಲ್ಲಿದ್ದು, ಎರಡು ತಲೆಮಾರಿನ ಕಥೆ ಕೂಡ ಈ ಚಿತ್ರದಲ್ಲಿದೆ. ಜಗ್ಗೇಶ್ ಈ ಸಿನಿಮಾದಲ್ಲಿ ಕಾರು ಮಾಲೀಕರಾಗಿ ನಟಿಸಿದ್ದು, ಪ್ರಮೋದ್ ಡ್ರೈವರ್ ಪಾತ್ರ ಮಾಡಿದ್ದಾರೆ. ಉಳಿದಂತೆ ಮಧುಬಾಲ, ಸುಧಾರಾಣಿ, ದತ್ತಣ್ಣ ಹೀಗೆ ಅನುಭವಿ ಕಲಾವಿದರ ದಂಡೇ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.