Wolf movie: ಟೀಸರ್ ನಲ್ಲಿ ವುಲ್ಫ್ ದರ್ಶನ
Team Udayavani, Aug 6, 2023, 6:35 PM IST
ಬಹುಭಾಷಾ ನಟ ಪ್ರಭುದೇವ ಅಭಿನಯದ “ವುಲ್ಫ್’ ಸಿನಿಮಾದ ಮೊದಲ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿ ಹೊರಗೆ ಬಂದಿದೆ. “ಸಂದೇಶ್ ಪ್ರೊಡಕ್ಷನ್’ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ “ವುಲ್ಫ್’ ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ತಯಾರಾಗುತ್ತಿದೆ.
“ವುಲ್ಫ್’ ಸಿನಿಮಾದಲ್ಲಿ ಪ್ರಭುದೇವ ಅವರೊಂದಿಗೆ ವಸಿಷ್ಠ ಸಿಂಹ, ಅನುಸೂಯ ಭಾರದ್ವಾಜ್, ಲಕ್ಷ್ಮೀ ರೈ, ಅಂಜು ಕುರಿಯನ್ ಮುಂತಾದ ಕಲಾವಿದರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ಈಗಾಗಲೇ ಸದ್ದಿಲ್ಲದೆ “ವುಲ್ಫ್’ ಸಿನಿಮಾದ ಚಿತ್ರೀಕರಣ ಪೂರ್ಣಗೊಳಿಸಿರುವ ಚಿತ್ರತಂಡ, ಸದ್ಯ ಸಿನಿಮಾದ ಅಂತಿಮ ಹಂತದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿದೆ.
ಇದೇ ವೇಳೆ ನಿಧಾನವಾಗಿ ಸಿನಿಮಾದ ಪ್ರಚಾರ ಕಾರ್ಯಗಳಿಗೂ ಚಾಲನೆ ನೀಡಿರುವ ಚಿತ್ರತಂಡ, ಮೊದಲ ಹಂತದಲ್ಲಿ “ವುಲ್ಫ್’ ಸಿನಿಮಾದ ಮೊದಲ ಟೀಸರ್ ಅನ್ನು ಬಿಡುಗಡೆಗೊಳಿಸಿದೆ.
ಇನ್ನು ಇದೇ ಮೊದಲ ಬಾರಿಗೆ ತಮಿಳು ನಟ ವಿಜಯ್ ಸೇತುಪತಿ “ವುಲ್ಫ್’ ಸಿನಿಮಾದ ಗೀತೆಯೊಂದಕ್ಕೆ ಧ್ವನಿಯಾಗಿದ್ದು, ಈ ಗೀತೆಯನ್ನು ಇದೇ ತಿಂಗಳು ಬಿಡುಗಡೆ ಮಾಡುವ ಯೋಜನೆಯಲ್ಲಿದೆ ಚಿತ್ರತಂಡ.
“ವುಲ್ಫ್’ ಸಿನಿಮಾಕ್ಕೆ ವಿನು ವೆಂಕಟೇಶ್ ನಿರ್ದೇಶನವಿದ್ದು, ಅರುಳ್ ವಿನ್ಸೆಂಟ್ ಛಾಯಾಗ್ರಹಣವಿದೆ. ಖ್ಯಾತ ತಾರೆ ಜಯಸುಧಾ ಅವರ ಪುತ್ರ ಹಾಗೂ ಖ್ಯಾತ ಸಂಗೀತ ನಿರ್ದೇಶಕ ಅಮರೀಶ್ “ವುಲ್ಫ್’ ಸಿನಿಮಾದ ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ಅಂದಹಾಗೆ, ಇದೇ ಸೆಪ್ಟೆಂಬರ್ ವೇಳೆಗೆ “ವುಲ್ಫ್’ ಸಿನಿಮಾ ತೆರೆಗೆ ಬರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
Pani movie: ಕನ್ನಡದಲ್ಲಿ ಜೋಜು ಜಾರ್ಜ್ ಪಣಿ
Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!
Border-Gavaskar Trophy: ತುರ್ತು ವೈಯಕ್ತಿಕ ಕಾರಣ: ಕೋಚ್ ಗಂಭೀರ್ ಭಾರತಕ್ಕೆ
BJP: ಬಸನಗೌಡ ಪಾಟೀಲ್ ಯತ್ನಾಳ್ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ
Fraud Case: ಎಪಿಕೆ ಫೈಲ್ ಕಳುಹಿಸಿ 1.31 ಲ.ರೂ. ವಂಚನೆ
Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.