“ಚೇಸ್’ ಟೀಸರ್‌ಗೆ ಮೆಚ್ಚುಗೆ
ಇಷ್ಟರಲ್ಲೇ ಪ್ರೇಕ್ಷಕರ ಮುಂದೆ ಚಿತ್ರ
Team Udayavani, Nov 27, 2019, 6:01 AM IST
ನವ ಪ್ರತಿಭೆ ವಿಲೋಕ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾಗಿರುವ “ಚೇಸ್’ ಚಿತ್ರದ ಮೊದಲ ಟೀಸರ್ ಇತ್ತೀಚೆಗೆ ಹೊರಬಂದಿದ್ದು, ಇದೀಗ ಟೀಸರ್ ನಿಧಾನವಾಗಿ ಸಿನಿಪ್ರಿಯರನ್ನು ಸೆಳೆಯಲು ಯಶಸ್ವಿಯಾಗುತ್ತಿದೆ. ಮಹಿಳೆಯರು ರಾತ್ರಿ ಹೊತ್ತು ಕ್ಯಾಬ್‌ಗಳಲ್ಲಿ ಪ್ರಯಾಣಿಸುವುದು ಅದೆಷ್ಟು ಸೂಕ್ತ ಎಂಬ ವಿಷಯವನ್ನು ಇಟ್ಟುಕೊಂಡು ತಯಾರಾಗಿರುವ ಸಸ್ಪೆನ್ಸ್-ಥ್ರಿಲ್ಲರ್ ಕಥಾಹಂದರ ಹೊಂದಿರುವ “ಚೇಸ್’ ಚಿತ್ರದ ಪ್ರಮುಖ ಪಾತ್ರಗಳಲ್ಲಿ ರಾಧಿಕಾ ನಾರಾಯಣ್, ಅವಿನಾಶ್ ನರಸಿಂಹರಾಜು, ಶೀತಲ್ ಶೆಟ್ಟಿ, ಅರ್ಜುನ್ ಯೋಗಿ, ಅರವಿಂದ ರಾವ್, ಪ್ರಮೋದ್ ಶೆಟ್ಟಿ, ರಾಜೇಶ್ ನಟರಂಗ, ರೆಹಮಾನ್ ಹಾಗೂ ಬಾಲಿವುಡ್‌ನ “ಎಬಿಸಿಡಿ’ ಚಿತ್ರದಲ್ಲಿ ನಟಿಸಿದ ಸುಶಾಂತ್ ಪೂಜಾರಿ ಮೊದಲಾದವರು ನಟಿಸಿದ್ದಾರೆ.
ಸದ್ಯ ಚಿತ್ರದ ಟೀಸರ್‌ಗೆ ಸಿಗುತ್ತಿರುವ ಪ್ರತಿಕ್ರಿಯೆಗಳ ಬಗ್ಗೆ ಮಾತನಾಡುವ ನಿರ್ದೇಶಕ ವಿಲೋಕ್ ಶೆಟ್ಟಿ, “ಇದೊಂದು ಕ್ರೈಂ, ಥ್ರಿಲ್ಲರ್, ಮಿಸ್ಟ್ರಿ ಕಥಾನಕ ಹೊಂದಿರುವ ಚಿತ್ರ. ನಮ್ಮ ತಂಡದ 2 ವರ್ಷಗಳ ಪ್ರಯತ್ನದ ಫಲವಾಗಿ ಚಿತ್ರ ಮೂಡಿಬಂದಿದೆ. ನಮ್ಮ ಚಿತ್ರದ ಟೀಸರನ್ನು ಕನ್ನಡದ ಹಿರಿಯ ನಿರ್ದೇಶಕರಿಂದ ಬಿಡುಗಡೆ ಮಾಡಿಸಿದ್ದೆವು. ಈಗ ಚಿತ್ರದ ಟೀಸರ್‌ಗೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಬಹಳಷ್ಟು ಕಲಾವಿರು ಈ ಚಿತ್ರದಲ್ಲಿ ಅಭಿನಯಿಸಿರುವುದರಿಂದ ಅವರೆಲ್ಲರ ಡೇಟ್ಸ್ ಹೊಂದಿಸಿಕೊಂಡು ಶೂಟ್ ಮಾಡುವುದು ಸ್ವಲ್ಪ ತಡವಾಯಿತು. ಆದಷ್ಟು ಬೇಗ ಚಿತ್ರವನ್ನು ತೆರೆಮೇಲೆ ತರುವ ಯೋಚನೆ ಇದೆ’ ಎನ್ನುತ್ತಾರೆ. ಇನ್ನು “ಚೇಸ್’ ಚಿತ್ರಕ್ಕೆ ಕಾರ್ತಿಕ್ ಆಚಾರ್ಯ ಅವರ ಸಂಗೀತವಿದ್ದು, ಅನಂತರಾಜ ಅರಸ್ ಛಾಯಾಗ್ರಹಣ ಕಾರ್ಯ ನಿರ್ವಹಿಸಿದ್ದಾರೆ. “ಸಿಂಪ್ಲಿಫನ್ ಮೀಡಿಯಾ ನೆಟ್‌ವರ್ಕ್’ ಮೂಲಕ ಮನೋಹರ್ ಸುವರ್ಣ, ಪ್ರದೀಪ್ ಶೆಟ್ಟಿ, ಪ್ರಶಾಂತ್ ಶೆಟ್ಟಿ ಜಂಟಿಯಾಗಿ “ಚೇಸ್’ ಚಿತ್ರವನ್ನು ನಿರ್ಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.