ವೀರಂ ಹಿಂದೆ ಪ್ರಜ್ವಲ್
ಶೀರ್ಷಿಕೆ, ಮೋಷನ್ ಪೋಸ್ಟರ್‌ಗೆ ದರ್ಶನ್ ಚಾಲನೆ
Team Udayavani, Sep 19, 2019, 3:03 AM IST
ಇತ್ತೀಚೆಗಷ್ಟೇ ಪ್ರಜ್ವಲ್ ದೇವರಾಜ್ ಅವರು ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದು, ಆ ಚಿತ್ರವನ್ನು “ಡಾಟರ್ ಆಫ್ ಪಾರ್ವತಮ್ಮ’ ಚಿತ್ರದ ನಿರ್ಮಾಪಕ ಶಶಿಧರ್ ಕೆ.ಎಂ. ನಿರ್ಮಿಸಲಿದ್ದಾರೆ ಎಂದು ಇದೇ “ಬಾಲ್ಕನಿ’ಯಲ್ಲಿ ಹೇಳಲಾಗಿತ್ತು. ಆಗ ಆ ಹೊಸ ಚಿತ್ರಕ್ಕಿನ್ನೂ ನಾಮಕರಣ ಮಾಡಿರಲಿಲ್ಲ. ಈಗ ಚಿತ್ರಕ್ಕೆ “ವೀರಂ’ ಎಂದು ಹೆಸರಿಟ್ಟಿದ್ದು, ನಟ ದರ್ಶನ್ ಅವರು ಸೆ.18 ರ ವಿಷ್ಣುವರ್ಧನ್ ಅವರ ಹುಟ್ಟುಹಬ್ಬದ ದಿನದಂದೇ ಚಿತ್ರದ ಶೀರ್ಷಿಕೆ ಹಾಗೂ ಮೋಷನ್ ಪೋಸ್ಟರ್ ಲಾಂಚ್ ಮಾಡುವ ಮೂಲಕ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ಹೌದು, ಪ್ರಜ್ವಲ್ ದೇವರಾಜ್ ಅಭಿನಯದ ಹೊಸ ಚಿತ್ರಕ್ಕೆ “ವೀರಂ’ ಎಂದು ಹೆಸರಿಡಲಾಗಿದೆ. ಶೀರ್ಷಿಕೆ ಹೇಳುವಂತೆ ಇದೊಂದು ಪಕ್ಕಾ ಮಾಸ್ ಫೀಲ್ ಇರುವ ಚಿತ್ರ. ವಿಷ್ಣುವರ್ಧನ್ ಅವರ ಹುಟ್ಟುಹಬ್ಬದಂದೇ ಚಿತ್ರದ ಶೀರ್ಷಿಕೆ ಮತ್ತು ಮೋಷನ್ ಪೋಸ್ಟರ್ ಬಿಡುಗಡೆ ಮಾಡಲು ಕಾರಣವಿದೆ. “ವೀರಂ’ ಚಿತ್ರದಲ್ಲಿ ನಾಯಕ ಪ್ರಜ್ವಲ್ ಅವರು ವಿಷ್ಣುವರ್ಧನ್ ಅವರ ಅಭಿಮಾನಿಯಾಗಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಹಾಗಾಗಿ, ವಿಷ್ಣುವರ್ಧನ್ ಅವರ ಜನ್ಮದಿನದಂದೇ ಟೈಟಲ್, ಪೋಸ್ಟರ್ ಲಾಂಚ್ ಮಾಡಲಾಗಿದೆ ಎಂಬುದು ಚಿತ್ರತಂಡದ ಮಾತು.
ಈಗಾಗಲೇ ಹಲವು ಚಿತ್ರಗಳಲ್ಲಿ ಹೀರೋ ವಿಷ್ಣುವರ್ಧನ್ ಅವರ ಅಭಿಮಾನಿಯಾಗಿ ನಟಿಸಿದ್ದಾರೆ. ಯಶ್ “ರಾಮಾಚಾರಿ’ಯಲ್ಲಿ ವಿಷ್ಣುವರ್ಧನ್ ಫ್ಯಾನ್ ಆಗಿದ್ದರೆ, ಗುರುರಾಜ್ ಜಗ್ಗೇಶ್ “ವಿಷ್ಣು ಸರ್ಕಲ್’ ಚಿತ್ರದಲ್ಲಿ ವಿಷ್ಣುವರ್ಧನ್ ಅಭಿಮಾನಿ, ಇನ್ನು, ಕೆ.ಮಂಜು ಪುತ್ರ ಶ್ರೇಯಸ್ ಅಭಿನಯದ “ಪಡ್ಡೆ ಹುಲಿ’ ಚಿತ್ರದಲ್ಲೂ ವಿಷ್ಣು ಅಭಿಮಾನಿಯಾಗಿ ಕಾಣಿಸಿಕೊಂಡಾಗಿದೆ. ಈಗ “ವೀರಂ’ ಚಿತ್ರದಲ್ಲಿ ಪ್ರಜ್ವಲ್ ವಿಷ್ಣುವರ್ಧನ್ ಅವರ ಫ್ಯಾನ್. ಇದಷ್ಟೇ ಅಲ್ಲ, ವಿಷ್ಣುವರ್ಧನ್ ಅವರ ಚಿತ್ರಗಳ ಶೀರ್ಷಿಕೆ ಚಿತ್ರದಲ್ಲೂ ಸ್ಟಾರ್ ನಟರು ನಟಿಸಿದ್ದಾರೆ.
“ಕೋಟಿಗೊಬ್ಬ’, “ಯಜಮಾನ’ ಚಿತ್ರಗಳ ಶೀರ್ಷಿಕೆ ಮರುಬಳಕೆಯಾಗಿ, ಸಕ್ಸಸ್ ಕಂಡಿದ್ದು ಕಣ್ಣ ಮುಂದೆಯೇ ಇದೆ. ಅದೇನೆ ಇರಲಿ, “ವೀರಂ’ ಒಂದು ಸಂಸ್ಕೃತ ಪದವಾಗಿದ್ದು, ಆ ಹೆಸರಲ್ಲಿ ಈಗ ಪಕ್ಕಾ ಕಮರ್ಷಿಯಲ್ ಸಿನಿಮಾ ಮಾಡಲು ಚಿತ್ರತಂಡ ಅಣಿಯಾಗುತ್ತಿದೆ. ಖದರ್ ಕುಮಾರ್ ನಿರ್ದೇಶನವಿದೆ. ನಿರ್ಮಾಣದಲ್ಲಿ ರಘು ಸಿಂಗಂ ಸಾಥ್ ನೀಡುತ್ತಿದ್ದಾರೆ. ಸದ್ಯಕ್ಕೆ ಹೀರೋ ಹೊರತಾಗಿ, ನಾಯಕಿ, ತಂತ್ರಜ್ಞರ ಆಯ್ಕೆ ನಡೆದಿಲ್ಲ. ಎಲ್ಲಾ ಅಂದುಕೊಂಡಂತೆ ನಡೆದರೆ ಡಿಸೆಂಬರ್‌ನಲ್ಲಿ ಚಿತ್ರೀಕರಣಕ್ಕೆ ಚಾಲನೆ ಸಿಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Election: ಆಪ್ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್ ಮೈತ್ರಿ: ಕೇಜ್ರಿವಾಲ್
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.