ಕಲೈ ಮಾಸ್ಟರ್ ನಿರ್ದೇಶನದ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್
Team Udayavani, Jul 24, 2023, 3:27 PM IST
ಕನ್ನಡ ಚಿತ್ರರಂಗದಲ್ಲಿ ಸುಮಾರು 23 ವರ್ಷಗಳಿಂದ ಸಕ್ರಿಯವಾಗಿರುವ ಚಿನ್ನಿ ಪ್ರಕಾಶ್, ತ್ರಿಭುವನ್, ಮದನ್-ಹರಿಣಿ, ಫೈವ್ ಸ್ಟಾರ್ ಗಣೇಶ್ ಸೇರಿದಂತೆ ಅನೇಕ ಹಿರಿಯ ನೃತ್ಯ ನಿರ್ದೇಶಕರೊಂದಿಗೆ ಕೆಲಸ ಮಾಡಿದ ಅನುಭವವಿರುವ ನೃತ್ಯ ನಿರ್ದೇಶಕ ಕಲೈ ಮಾಸ್ಟರ್ ಈಗ ಸಿನಿಮಾ ನಿರ್ದೇಶಕನಾಗುವತ್ತ ಅಡಿಯಿಡುತ್ತಿದ್ದಾರೆ.
ಹೌದು, ಕನ್ನಡ ಚಿತ್ರರಂಗದಲ್ಲಿ ಇಲ್ಲಿಯವರೆಗೆ ಸುಮಾರು 300ಕ್ಕೂ ಹೆಚ್ಚು ಹಾಡಿಗೆ ನೃತ್ಯ ನಿರ್ದೇಶನ ಮಾಡಿರುವ ಕಲೈ, ಇದೇ ಮೊದಲ ಬಾರಿಗೆ ಪ್ರಜ್ವಲ್ ದೇವರಾಜ್ ಅಭಿನಯದ ಸಿನಿಮಾಕ್ಕೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಈಗಾಗಲೇ ಸದ್ದಿಲ್ಲದೆ ಈ ಸಿನಿಮಾದ ಪ್ರೀ-ಪ್ರೊಡಕ್ಷನ್ ಕೆಲಸಗಳು ಅಂತಿಮ ಹಂತದಲ್ಲಿದ್ದು, ಇದೇ ಅಕ್ಟೋಬರ್ ತಿಂಗಳಿನಿಂದ ಸಿನಿಮಾದ ಚಿತ್ರೀಕರಣ ಆರಂಭವಾಗಲಿದೆ.
“ರಾಜಲಕ್ಷ್ಮೀ ಎಂಟರ್‌ಟೈನ್ಮೆಂಟ್’ ಬ್ಯಾನರಿನಲ್ಲಿ ಮಂಗಳೂರು ಮೂಲದ ಪ್ರತಿಭಾ ನಿರ್ಮಾಣ ಮಾಡುತ್ತಿರುವ ನಿರ್ಮಿಸುತ್ತಿರುವ ಮೂರನೇ ಸಿನಿಮಾ ಇದಾಗಿದ್ದು, ಸಾಮಾಜಿಕ ಕಳಕಳಿ ಹೊಂದಿರುವ ಕಥಾಹಂದರವನ್ನು ತೆರೆಮೇಲೆ ತರುವ ಯೋಜನೆ ಹಾಕಿಕೊಂಡಿದೆ ಚಿತ್ರತಂಡ.
ಸದ್ಯ ಸಿನಿಮಾದ ಟೈಟಲ್, ನಾಯಕಿ ಮತ್ತು ಇತರ ಪ್ರಮುಖ ಕಲಾವಿದರ ಆಯ್ಕೆ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲಿಯೇ ಸಿನಿಮಾದ ಬಗ್ಗೆ ಇನ್ನಷ್ಟು ಮಾಹಿತಿ ಹೊರಬರುವ ಸಾಧ್ಯತೆಯಿದೆ. ಸುಮಾರು 80 ದಿನಗಳ ಕಾಲ ಈ ಸಿನಿಮಾದ ಚಿತ್ರೀಕರಣ ನಡೆಯಲಿದ್ದು, ಸಿನಿಮಾಕ್ಕಾಗಿ ಅದ್ಧೂರಿ ಸೆಟ್‌ಗಳನ್ನು ಹಾಕಲಾಗುತ್ತಿದೆ. ಸಿನಿಮಾದಲ್ಲಿ ಅರು ಭರ್ಜರಿ ಫೈಟ್ಸ್ ಮತ್ತು ಆರು ಹಾಡುಗಳಿದ್ದು, ಶಂಕರ್ ಹಾಗೂ ಚಂದ್ರಮೌಳಿ (ಕೆಜಿಎಫ್) ಈ ಚಿತ್ರಕ್ಕೆ ಸಂಭಾಷಣೆ ಬರೆಯುತ್ತಿದ್ದಾರೆ,
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.