Prajwal Devaraj: ತೆಲುಗಿನಲ್ಲೂ ರಿಲೀಸ್ ಆಗುತ್ತಿದೆ ʼರಾಕ್ಷಸʼ
Team Udayavani, Jan 12, 2025, 1:07 PM IST
ಪ್ರಜ್ವಲ್ ದೇವರಾಜ್ ನಟನೆಯ ರಾಕ್ಷಸ ಚಿತ್ರ ಫೆ.26ರಂದು ತೆರೆಗೆ ಬರುತ್ತಿದೆ. ಈಗ ಚಿತ್ರತಂಡದಿಂದ ಹೊಸ ಅಪ್‌ಡೇಟ್ ಸಿಕ್ಕಿದೆ. ಈ ಚಿತ್ರ ತೆಲುಗಿನಲ್ಲಿಯೂ ಬಿಡುಗಡೆಯಾಗುತ್ತಿದ್ದು, ಈ ಚಿತ್ರದ ಥಿಯೇಟರ್ ಹಕ್ಕನ್ನು ಕಂಚಿ ಕಾಮಾಕ್ಷಿ ಕೋಲ್ಕತಾ ಕಾಳಿ ಕ್ರಿಯೇಷನ್ ತನ್ನದಾಗಿಸಿಕೊಂಡಿದೆ. ಅಖಂಡ ತೆಲುಗು ಪ್ರೇಕ್ಷಕರಿಗೆ ರಾಕ್ಷಸ ಸಿನಿಮಾವನ್ನು ಈ ಸಂಸ್ಥೆ ತಲುಪಿಸಲಿದೆ.
ಈ ಕುರಿತು ಖುಷಿ ಹಂಚಿಕೊಳ್ಳುವ ನಿರ್ಮಾಪಕರು, “ಇತ್ತೀಚೆಗೆ ಕನ್ನಡ ಸಿನಿಮಾಗಳು ವ್ಯಾಪಾರವಾಗ್ತಿರುವುದೇ ಕಡಿಮೆ. ಹೀಗಿದ್ದರೂ ಈಗಾಗಲೇ ಕನ್ನಡ ಥಿಯೇಟರ್ ರೈಟ್ಸ್ ಮಾರಾಟವಾಗಿದೆ. ಈಗ ಬರೀ ಟೀಸರ್, ಟ್ರೇಲರ್, ಕಂಟೆಂಟ್ ನೋಡಿಯೇ ಕಂಚಿ ಕಾಮಾಕ್ಷಿ ಕೋಲ್ಕತಾ ಕಾಳಿ ಕ್ರಿಯೇಷನ್ ಒಳ್ಳೆ ಮೊತ್ತಕ್ಕೆ ಹಕ್ಕನ್ನು ತಮ್ಮದಾಗಿಸಿಕೊಂಡಿದೆ. ಹಲವಾರು ಹೊಸತನಗಳನ್ನು ಹೊಂದಿರುವ ಈ ಸಿನಿಮಾ ಮೇಲೆ ಭರವಸೆಯಿಟ್ಟೇ ವಿತರಣೆ ಹಕ್ಕನ್ನು ಪಡೆದುಕೊಂಡಿದೆ. ಇದು ಸಂತಸ ತಂದಿದೆ’ ಎನ್ನುತ್ತಾರೆ.
ಇದು ಟೈಮ್ ಲೂಪ್ ಕಾನ್ಸೆಪ್ಟ್ ಇರುವ ಚಿತ್ರ. ಲೋಹಿತ್ ರಾಕ್ಷಸ ಚಿತ್ರ ನಿರ್ದೇಶನ ಮಾಡಿದ್ದಾರೆ. ಪ್ರಜ್ವಲ್ ಅವರು ಭಿನ್ನ ಗೆಟಪ್ ತಾಳಿರುವ ಈ ಸಿನಿಮಾದ ಪಾತ್ರವರ್ಗದಲ್ಲಿ ಶೋಭಾರಾಜ್, ವತ್ಸಲಾ ಮೋಹನ್, ಸಿದ್ಲಿಂಗು ಶ್ರೀಧರ್ ಮುಂತಾದ ಕಲಾವಿದರು ನಟಿಸಿದ್ದಾರೆ. ಚಿತ್ರದ ಶೇಕಡ 80ರಷ್ಟು ಚಿತ್ರೀಕರಣ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಮಾಡಲಾಗಿದೆ. ಇನ್ನುಳಿದ ದೃಶ್ಯಗಳ ಚಿತ್ರೀಕರಣವನ್ನು ರಾಮೇಶ್ವರಂ, ಗೋವಾ ಹಾಗೂ ಬೆಂಗಳೂರಿನಲ್ಲಿ ನಡೆಸಲಾಗಿದೆ.
ದೀಪು ಬಿ.ಎಸ್. ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ನವೀನ್ ಮತ್ತು ಮಾನಸಾ ಕೆ. ಕೂಡ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ಜೇಬಿನ್ ಪಿ. ಜೋಕಬ್ ಅವರು ಈ ಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದಾರೆ. ವಿನೋದ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.