ಪ್ರಜ್ವಲ್ ದೇವರಾಜ್ ಈಗ ‘ಗಣ’ ನಾಯಕ
Team Udayavani, Jan 2, 2022, 10:48 AM IST
ಪ್ರಜ್ವಲ್ ದೇವರಾಜ್ ನಟನೆಯ “ಅರ್ಜುನ್ ಗೌಡ’ ಚಿತ್ರ ತೆರೆಕಂಡು ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ನಡುವೆಯೇ ಸದ್ದಿಲ್ಲದೇ ಪ್ರಜ್ವಲ್ ಅವರ ಹೊಸ ಸಿನಿಮಾಕ್ಕೆ ಮುಹೂರ್ತ ನಡೆದಿದೆ. ಅದು “ಗಣ’.
ಇತ್ತೀಚೆಗೆ ಆರ್‌ಪಿಸಿ ಲೇಔಟ್‌ನ ಸಂಕಷ್ಟಹರ ಗಣಪತಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ನೆರವೇರಿತು. ಮೊದಲ ಸನ್ನಿವೇಶಕ್ಕೆ ವಿತರಕ ದೇವೇಂದ್ರ ರೆಡ್ಡಿ ಆರಂಭಫಲಕ ತೋರಿದರು. ಪ್ರಜ್ವಲ್ ಪತ್ನಿ ರಾಗಿಣಿ ಚಂದ್ರನ್ ಕ್ಯಾಮೆರಾ ಚಾಲನೆ ಮಾಡಿದ್ದಾರೆ.
ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಹರಿ ಪ್ರಸಾದ್ ಜಕ್ಕ ನಿರ್ದೇಶಿಸುತ್ತಿದ್ದಾರೆ. ತೆಲುಗಿನಲ್ಲಿ ಮೂರು ಚಿತ್ರಗಳನ್ನು ನಿರ್ದೇಶಿಸಿರುವ ಹರಿಪ್ರಸಾದ್ ಅವರಿಗೆ ಕನ್ನಡದಲ್ಲಿ ಮೊದಲ ಚಿತ್ರ .
ಇದನ್ನೂ ಓದಿ:ಬೈಕ್ ನಂಬರ್ ಪ್ಲೇಟ್ ನ್ನು ಅಕ್ರಮವಾಗಿ ಬಳಸಿದ್ದಾರೆಂದು ವಿಕ್ಕಿ ಕೌಶಲ್- ಸಾರಾ ವಿರುದ್ಧ ದೂರು
“ಚರಿ ಕ್ರಿಯೇಷನ್ಸ್’ ಲಾಂಛನದಲ್ಲಿ ಪಾರ್ಥು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರ ಶ್ರೀನಿವಾಸ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮೂರು ಹಾಡುಗಳಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ನೀಡುತ್ತಿದ್ದಾರೆ. ಜೈ ಆನಂದ್ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಸಂಕಲನ ಈ ಚಿತ್ರಕ್ಕಿದೆ.
ಪ್ರಜ್ವಲ್ ಅವರಿಗೆ ನಾಯಕಿಯಾಗಿ ಸಾರಾ ಹರೀಶ್ ನಟಿಸುತ್ತಿದ್ದಾರೆ. ಸಂಪತ್ ಕುಮಾರ್, ರವಿ ಕಾಳೆ, ಶಿವರಾಜ್ ಕೆ ಆರ್ ಪೇಟೆ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಫೆಬ್ರವರಿ ಮೊದಲ ವಾರದಿಂದ ಬೆಂಗಳೂರಿನಲ್ಲಿ ಚಿತ್ರೀಕರಣ ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ
Belagavi; ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
Kabaddi: ಇಂದು ಸೀನಿಯರ್ ಕಬಡ್ಡಿ ತಂಡದ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.