ರೊಮ್ಯಾಂಟಿಕ್ ‘ಪ್ರಣಯಂ’ ಟೀಸರ್ ರಿಲೀಸ್


Team Udayavani, Mar 3, 2023, 1:45 PM IST

pranayam kannada movie

ನಟ ರಾಜವರ್ಧನ್‌ ಮತ್ತು ನೈನಾ ಗಂಗೂಲಿ ಜೋಡಿಯಾಗಿ ಅಭಿನಯಿಸಿರುವ ರೊಮ್ಯಾಂಟಿಕ್‌, ಕ್ರೈಂ-ಥ್ರಿಲ್ಲರ್‌ ಕಥಾಹಂದರದ “ಪ್ರಣಯಂ’ ಸಿನಿಮಾ ತೆರೆಗೆ ಬರಲು ಸಿದ್ದವಾಗಿದೆ. ಸದ್ಯ “ಪ್ರಣಯಂ’ ಸಿನಿಮಾದ ಅಂತಿಮ ಹಂತದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಲ್ಲಿ ನಿರತವಾಗಿರುವ ಚಿತ್ರತಂಡ, ಇತ್ತೀಚೆಗೆ ಸಿನಿಮಾದ ಫ‌ಸ್ಟ್‌ಲುಕ್‌ ಟೀಸರ್‌ ಬಿಡುಗಡೆ ಮಾಡಿದೆ.

“ಪಿ2 ಪ್ರೊಡಕ್ಷನ್ಸ್‌’ ಮತ್ತು “ಮಾನ್ಸಿ ವೆಂಚರ್’ ಬ್ಯಾನರಿನಲ್ಲಿ ಪರಮೇಶ್‌ ನಿರ್ಮಿಸಿರುವ “ಪ್ರಣಯಂ’ ಚಿತ್ರಕ್ಕೆ ಎಸ್‌. ದತ್ತಾತ್ರೇಯ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

ಇದೇ ವೇಳೆ ಮಾತನಾಡಿದ ನಿರ್ಮಾಪಕ ಪರಮೇಶ್‌, “ಎಂಗೇಜ್ಮೆಂಟ್‌ ಆದಾಗಿನಿಂದ ಮದುವೆಯಾಗು ವವರೆಗೆ ಒಂದು ಯುವ ಜೋಡಿ ಅನುಭವವನ್ನು ಇಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಇದೊಂದು ಲವ್‌, ರೊಮ್ಯಾಂಟಿಕ್‌ ಮತ್ತು ಕ್ರೈಂ-ಥ್ರಿಲ್ಲರ್‌ ಕಥಾಹಂದರದ ಸಿನಿಮಾ. ಹೊಸತರದಲ್ಲಿ ಹೇಳಿರುವ ಕಥೆ ಪ್ರೇಕ್ಷಕರಿಗೆ ಇಷ್ಟವಾಗಲಿದೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ:ಕುಷ್ಟಗಿ: ಆಮ್ ಆದ್ಮಿ‌ ಪಕ್ಷಕ್ಕೆ ಕುಷ್ಟಗಿ ಘಟಕ ಸಾಮೂಹಿಕ ರಾಜಿನಾಮೆ

ನಟ ರಾಜವರ್ಧನ್‌ ಸಿನಿಮಾದಲ್ಲಿ ವಿದೇಶದಿಂದ ಬಂದಿರುವ ಹುಡುಗನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. “ಇದೊಂದು ಯೂಥ್‌ಫ‌ುಲ್‌ ಸಬೆjಕ್ಟ್ ಸಿನಿಮಾ. ಇಂದಿನ ಆಡಿಯನ್ಸ್‌ಗೆ ಇಷ್ಟವಾಗುವಂಥ ಕಥೆ, ನಿರೂಪಣೆ, ಸಾಂಗ್ಸ್‌ ಎಲ್ಲವೂ ಸಿನಿಮಾದಲ್ಲಿದೆ. ಚಿತ್ರತಂಡದ ಸಹಕಾರದಿಂದ ಒಂದೊಳ್ಳೆ ಸಿನಿಮಾ ಮಾಡಿದ್ದೇವೆ’ ಎಂದರು.

“ಇಡೀ ಸಿನಿಮಾ ಮಳೆ ಮತ್ತು ಮಂಜಿನ ನಡುವೆ ಸಾಗುತ್ತದೆ. ಕಥೆಗೆ ತಕ್ಕಂತ ಲೊಕೇಶನ್‌ ಹುಡುಕಿ ಸಿನಿಮಾ ಮಾಡಿದ್ದೇವೆ. ಕೊಡಗು, ಚಿಕ್ಕಮಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ’ ಎನ್ನುವುದು ನಿರ್ದೇಶಕ ಎಸ್‌. ದತ್ತಾತ್ರೇಯ ಮಾಹಿತಿ. ಕಲಾವಿದರಾದ ಗೋವಿಂದೇ ಗೌಡ (ಜಿ.ಜಿ), ಪ್ರಶಾಂತ್‌ ನಟನ, ಪ್ರಿಯಾ ತರುಣ್‌, ಸಮೀಕ್ಷಾ, ಮಂಥನಾ ಮೊದಲಾದವರು “ಪ್ರಣಯಂ’ ಸಿನಿಮಾದ ಅನುಭವಗಳನ್ನು ಹಂಚಿಕೊಂಡರು.

“ಪ್ರಣಯಂ’ ಸಿನಿಮಾದ ಆರು ಹಾಡುಗಳಿಗೆ ಮನೋಮೂರ್ತಿ ಸಂಗೀತ ಸಂಯೋಜಿಸಿದ್ದಾರೆ. ಚಿತ್ರಕ್ಕೆ ವಿ. ನಾಗೇಶ ಆಚಾರ್ಯ ಛಾಯಾಗ್ರಹಣ, ಕೆ. ಗಿರೀಶ ಕುಮಾರ್‌ ಸಂಕಲನವಿದೆ.

ಟಾಪ್ ನ್ಯೂಸ್

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arest

Kundapura: ಅಂಬರ್‌ ಗ್ರೀಸ್‌ ಮಾರಾಟ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

7

Kasaragod: ಅಂಗಡಿಗೆ ನುಗ್ಗಿದ ಕಾಡು ಹಂದಿ

5

Kadaba: ಮೇಯಲು ಬಿಟ್ಟ ದನದ ಕಾಲು ಕಡಿದ ವ್ಯಕ್ತಿ; ದೂರು

dw

Siddapura: ವಿದ್ಯುತ್‌ ಲೈನಿಗೆ ಕೊಕ್ಕೆ ತಾಗಿ ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.