ರಾಮನ ಬಳಗದಲ್ಲಿ ಪ್ರಣೀತಾ


Team Udayavani, Dec 18, 2018, 11:27 AM IST

pranetha.jpg

ಕೆಲ ದಿನಗಳ ಹಿಂದಷ್ಟೇ ಟೈಟಲ್‌ ಟೀಸರ್‌ ಮೂಲಕ ಹೊರಬಂದು, ಒಂದಷ್ಟು ಕುತೂಹಲಕ್ಕೆ ಕಾರಣವಾಗಿರುವ “ರಾಮನ ಅವತಾರ’ ಚಿತ್ರತಂಡದ ಕಡೆಯಿಂದ ಮತ್ತೂಂದು ಸುದ್ದಿ ಹೊರಬಿದ್ದಿದೆ. ಅದೇನಪ್ಪ ಅಂದ್ರೆ, ರಿಷಿ, ರಾಜ್‌. ಬಿ ಶೆಟ್ಟಿ ಮತ್ತು ಡ್ಯಾನಿಶ್‌ ಸೇಠ್ ಇರುವ ರಾಮನ ಬಳಗಕ್ಕೆ ಮತ್ತೂಂದು ಹೊಸ ಎಂಟ್ರಿಯಾಗಿದೆ. ಅದೇ ಪ್ರಣೀತಾ ಸುಭಾಷ್‌.

ಹೌದು, ಕಳೆದ ಒಂದೂವರೆ ತಿಂಗಳಿನಿಂದ ರಾಮನ ಅವತಾರ ಚಿತ್ರಕ್ಕೆ ನಾಯಕಿಯ ಹುಡುಕಾಟದಲ್ಲಿದ್ದ ಚಿತ್ರತಂಡಕ್ಕೆ ಕೊನೆಗೂ ಪ್ರಣೀತಾ ನಾಯಕಿಯಾಗಿ ಸಿಕ್ಕಿದ್ದಾರೆ. ಚಿತ್ರದಲ್ಲಿ ನಟ ರಿಷಿ ಅವರಿಗೆ ನಾಯಕಿಯಾಗಿ ಪ್ರಣೀತಾ ಜೋಡಿಯಾಗಲಿದ್ದು, “ಇಲ್ಲಿಯವರೆಗೂ ಸಿಕ್ಕಿರದಂಥ ಪಾತ್ರ ಈ ಚಿತ್ರದಲ್ಲಿ ನನಗೆ ಸಿಕ್ಕಿದೆ’ ಎನ್ನುತ್ತಾರೆ ಪ್ರಣೀತಾ. 

“ಸಾಮಾನ್ಯವಾಗಿ ಬಹುತೇಕ ಸಿನಿಮಾಗಳಲ್ಲಿ ಹೀರೋಯಿನ್‌ ಅಂದ್ರೆ ಹೀರೋಗೆ ಜೋಡಿಯಾಗಿ ಒಂದೆರಡು ಹಾಡುಗಳಲ್ಲಿ ಅವರ ಜೊತೆ ಹೆಜ್ಜೆ ಹಾಕೋದಕ್ಕಷ್ಟೇ ಸೀಮಿತವಾಗಿರುತ್ತದೆ. ಆದ್ರೆ ಕೆಲವೊಂದು ಸಿನಿಮಾಗಳಲ್ಲಿ ಪಾತ್ರಗಳು ಅದಕ್ಕಿಂತಲೂ ವಿಭಿನ್ನವಾಗಿರುತ್ತದೆ. ಹೊಸದೇನಾದರೂ ಬಯಸುವಂತಿರುತ್ತವೆ. ಅಂಥದ್ದೇ ಪಾತ್ರ ಈ ಚಿತ್ರದಲ್ಲೂ ಸಿಕ್ಕಿದೆ.

ಇದರಲ್ಲಿ ನನ್ನದು ಇಂಡಿಪೆಂಡೆಂಟ್‌ ಹುಡುಗಿಯ ಪಾತ್ರ, ಚಿತ್ರದಲ್ಲಿ ನನ್ನ ಪಾತ್ರ ಅನೇಕ ತಿರುವುಗಳಿಗೆ ಕಾರಣವಾಗುತ್ತದೆ. ಚಿತ್ರದಲ್ಲಿ ಬರುವ ಪ್ರತಿಯೊಂದು ಪಾತ್ರಗಳನ್ನೂ ವಿಭಿನ್ನವಾಗಿ ತೋರಿಸಬೇಕು ಎಂಬ ಉದ್ದೇಶದಿಂದ ಹೊಸತರನಾಗಿ ಪಾತ್ರಗಳನ್ನು ಹಣೆಯಲಾಗಿದೆ. ಪ್ರತಿ ಪಾತ್ರಗಳೂ ಆಡಿಯನ್ಸ್‌ಗೆ ಹೊಸದಾಗಿ ಕಾಣುತ್ತವೆ. ಪಾತ್ರದ ಬಗ್ಗೆ ಇನ್ನೂ ಹೆಚ್ಚೇನಾದರೂ ಹೇಳಿದ್ರೆ, ಅದರ ಗುಟ್ಟು ರಟ್ಟಾಗಬಹುದು.

ಹಾಗಾಗಿ ಸದ್ಯಕ್ಕೆ ಇದಕ್ಕಿಂತ ಹೆಚ್ಚಾಗಿ ಚಿತ್ರದ ಬಗ್ಗೆಯಾಗಲಿ, ನನ್ನ ಪಾತ್ರದ ಬಗ್ಗೆಯಾಗಲಿ ಗುಟ್ಟು ಬಿಟ್ಟು ಕೊಡಲಾರೆ’ ಎನ್ನುತ್ತಾರೆ ಪ್ರಣೀತಾ. ಚಿತ್ರದ ಬಗ್ಗೆ ಮಾತನಾಡುವ ಪ್ರಣೀತಾ, “ನನಗೆ ಅನಿಸುವಂತೆ ಈ ಚಿತ್ರದ ನಿರೂಪಣೆ ಬೇರೆಯ ಶೈಲಿಯಲ್ಲಿರುವುದರಿಂದ, ನನಗೆ ಸಿಕ್ಕಿರುವ ಪಾತ್ರ ನನ್ನ ವೃತ್ತಿ ಬದುಕಿಗೆ ಹೊಸ ಆಯಾಮವನ್ನು ತಂದುಕೊಡಲಿದೆ ಎಂಬ ನಿರೀಕ್ಷೆಯಲ್ಲಿದ್ದೇನೆ.

ಇಡೀ ಟೀಮ್‌ ಯಂಗ್‌ ಆ್ಯಂಡ್‌ ಎನರ್ಜಿಟಿಕ್‌ ಅಗಿರುವುದರಿಂದ, ಚಿತ್ರದಲ್ಲಿ ಕೂಡ ಅದೇ ಎನರ್ಜಿ ಇರಲಿದೆ ಎನ್ನುವುದು ನನ್ನ ಭಾವನೆ’ ಎನ್ನುತ್ತಾರೆ. ಕಳೆದ ವರ್ಷ ತೆರೆಕಂಡ “ಮಾಸ್‌ ಲೀಡರ್‌’ ಚಿತ್ರದ ಬಳಿಕ ಪ್ರಣೀತಾ ಯಾವುದೇ ಕನ್ನಡ ಚಿತ್ರಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಸುಮಾರು ಒಂದು ವರ್ಷದ ಬಳಿಕ ಮತ್ತೆ ಕಂ ಬ್ಯಾಕ್‌ ಆಗುತ್ತಿರುವ ಪ್ರಣೀತಾ,”ರಾಮನ ಅವತಾರ’ದಲ್ಲಿ ಎಷ್ಟರ ಮಟ್ಟಿಗೆ ಪ್ರೇಕ್ಷರಿಗೆ ಇಷ್ಟವಾಗಲಿದ್ದಾರೆ ಅನ್ನೋದು ಚಿತ್ರ ತೆರೆಗೆ ಬಂದ ಮೇಲಷ್ಟೇ ಗೊತ್ತಾಗಲಿದೆ. 

ಟಾಪ್ ನ್ಯೂಸ್

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagavalli Bangale Movie

Nagavalli Bangale Movie: ಸೆನ್ಸಾರ್‌ ಪಾಸಾದ ನಾಗವಲ್ಲಿ

shreyas manju’s Vishnupriya movie releasing on Feb 21

ಫೆ.21ರಂದು ತೆರೆಗೆ ಬರಲಿದೆ ʼವಿಷ್ಣು ಪ್ರಿಯಾʼ

31 days kannada movie

Kannada Movie: ನಿರಂಜನ್‌ ಶೆಟ್ಟಿಯ ʼ31 ಡೇಸ್‌ʼ ಚಿತ್ರ

kuladalli keelyavudo movie

Sandalwood: ಫಸ್ಟ್‌ಲುಕ್‌ನಲ್ಲಿ”ಕುಲದಲ್ಲಿ ಕೀಳ್ಯಾವುದೋ’

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.