KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್
Team Udayavani, May 10, 2024, 2:01 PM IST
ಯಶ್ ನಟನೆಯ “ಕೆಜಿಎಫ್’ ಹಾಗೂ “ಕೆಜಿಎಫ್-2′ ಚಿತ್ರಗಳು ದೊಡ್ಡ ಮಟ್ಟದಲ್ಲಿ ಹಿಟ್ ಆಗಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಅದರಲ್ಲೂ “ಕೆಜಿಎಫ್-2′ ಸಿನಿಮಾದ ಕೊನೆಯಲ್ಲಿ ಚಿತ್ರದ ಮೂರನೇ ಭಾಗ ಬರುವ ಸುಳಿವು ನೀಡಲಾಗಿತ್ತು. ಆ ದಿನದಿಂದಲೇ ಅಭಿಮಾನಿಗಳಲ್ಲಿ ಈ ಚಿತ್ರ ಯಾವಾಗ ಸೆಟ್ಟೇರುತ್ತದೆ ಎಂಬ ಕುತೂಹಲ ಆರಂಭವಾಗಿತ್ತು. ಆದರೆ, ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಯಶ್ ಇಬ್ಬರೂ ಬೇರೆ ಬೇರೆ ಪ್ರಾಜೆಕ್ಟ್‌ನಲ್ಲಿ ಬಿಝಿಯಾಗಿದ್ದಾರೆ. ಹೀಗಾಗಿ ಮುಂದೆ “ಕೆಜಿಎಫ್-3′ ಬರುತ್ತಾ, ಇಲ್ವಾ ಎಂಬ ಪ್ರಶ್ನೆ ಸಿನಿಮಾ ಪ್ರೇಮಿಗಳ ಮನಸ್ಸಲ್ಲಿತ್ತು. ಈಗ ಈ ಪ್ರಶ್ನೆಗೆ ಪ್ರಶಾಂತ್ ನೀಲ್ ಉತ್ತರಿಸಿದ್ದಾರೆ.
ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನಲ್ಲಿ “ಕೆಜಿಎಫ್-3′ ಬರುವುದು ಪಕ್ಕಾ ಎಂದಿದ್ದಾರೆ. “ಕೆಜಿಎಫ್-3 ಬಂದೇ ಬರುತ್ತದೆ. ಅದರ ಸ್ಕ್ರಿಪ್ಟ್ ಕೂಡಾ ರೆಡಿ ಇದೆ. ಒಂದು ವೇಳೆ ಸ್ಕ್ರಿಪ್ಟ್ ಸಿದ್ಧವಾಗದೇ ಇರುತ್ತಿದ್ದರೆ “ಕೆಜಿಎಫ್-2′ ಕೊನೆಯಲ್ಲಿ ಪಾರ್ಟ್-3 ಬಗ್ಗೆ ಸುಳಿವೇ ನೀಡುತ್ತಿರಲಿಲ್ಲ’ ಎಂದಿದ್ದಾರೆ. ಈ ಮೂಲಕ ಚಿತ್ರಪ್ರೇಮಿಗಳ ಆಸೆಗೆ ಹೊಸ ಜೋಶ್ ತುಂಬಿದ್ದಾರೆ.
ಸದ್ಯ ಪ್ರಶಾಂತ್ ನೀಲ್ ತೆಲುಗಿನಲ್ಲಿ ಬೇಡಿಕೆ ಗಿಟ್ಟಿಸಿಕೊಂಡಿದ್ದು, ಜೂ.ಎನ್ ಟಿಆರ್ ಸಿನಿಮಾ ಜೊತೆಗೆ ಇನ್ನೂ ಕೆಲವು ಸಿನಿಮಾಗಳ ಕಮಿಟ್‌ಮೆಂಟ್ ಮಾಡಿಕೊಂಡಿದ್ದಾರೆನ್ನಲಾಗಿದೆ. ಇತ್ತ ಕಡೆ ಯಶ್ “ಟಾಕ್ಸಿಕ್’ ಹಾಗೂ “ರಾಮಾಯಣ’ದಲ್ಲಿ ಬಿಝಿಯಾಗಿದ್ದಾರೆ. ಹಾಗಾಗಿ, “ಕೆಜಿಎಫ್-3′ ಆರಂಭ ತಡವಾಗುವುದರಲ್ಲಿ ಎರಡು ಮಾತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.