ನಾಯಕಿಯ ಹುಡುಕಾಟದಲ್ಲಿ ‘ಕಥಾನಾಯಕ’

Team Udayavani, Mar 13, 2021, 12:16 PM IST

kathanayaka

ಯಾವುದೇ ಚಿತ್ರದಲ್ಲಿ ಒಂದು ಕಥೆ ಇರುತ್ತದೆ. ಆ ಕಥೆಗೆ ಒಬ್ಬ “ಕಥಾ ನಾಯಕ’ ಇರುತ್ತಾನೆ. ಆ “ಕಥಾನಾಯಕ’ನ ಸುತ್ತ ಆ ಚಿತ್ರ ನಡೆಯುತ್ತದೆ. ಆ ಕಥೆಗೆ ಮತ್ತು “ಕಥಾ ನಾಯಕ’ನಿಗೆ ಒಂದು ಹೆಸರು ಇರುತ್ತದೆ. ಅಂಥ ಕಥೆ ಅಥವಾ ನಾಯಕನ ಹೆಸರನ್ನೇ ಸಾಮಾನ್ಯವಾಗಿ ಆ ಚಿತ್ರಕ್ಕೆ ಇಡುವುದನ್ನ ಚಿತ್ರರಂಗದಲ್ಲಿ ನೋಡಿರುತ್ತೀರಿ. ಆದರೆ ಇಲ್ಲೊಂದು ಚಿತ್ರತಂಡ, ತಮ್ಮ ಚಿತ್ರಕ್ಕೆ “ಕಥಾ ನಾಯಕ’ ಅಂತಲೇ ಹೆಸರಿಟ್ಟಿದೆ. ಅದಕ್ಕೆ ಕಾರಣ ಚಿತ್ರದ ಕಥೆಯೇ ಹಾಗಿದೆಯಂತೆ!

ಅಂದಹಾಗೆ, ನವ ನಿರ್ದೇಶಕ ವಿನಾಯಕ ಜ್ಯೋತಿ “ಕಥಾ ನಾಯಕ’ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ಮಾಣ ಮತ್ತು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ವಿನಾಯಕ ಜ್ಯೋತಿ, “ಇದೊಂದು ಸಸ್ಪೆನ್ಸ್‌-ಥ್ರಿಲ್ಲರ್‌ ಕಥಾಹಂದರ ಹೊಂದಿರುವ ಸಿನಿಮಾ. ನಾಯಕಿಯ ಹುಟುಕಾಟದ ಸುತ್ತ ಇಡೀ ಸಿನಿಮಾದ ಕಥೆ ನಡೆಯುತ್ತದೆ. ಸಿನಿಮಾದ ಕಥೆ ಮತ್ತು ನಿರೂಪಣೆ ಅನೇಕ ಟರ್ನ್, ಟ್ವಿಸ್ಟ್‌ಗಳನ್ನು ತೆಗೆದುಕೊಳ್ಳುತ್ತ ಸಾಗುತ್ತದೆ.

ಇದನ್ನೂ ಓದಿ:ಮುಂದಿನ ವಾರದಿಂದ ಶುರು “ಮುಂದುವರೆದ ಅಧ್ಯಾಯ”

ಸಿನಿಮಾದಲ್ಲಿ ಮೂವರು ನಾಯಕರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಒಂದೊಂದು ಆಯಾಮದಲ್ಲಿ ಒಬ್ಬೊಬ್ಬರು ಕಥಾನಾಯಕನಾಗಿ ಕಾಣಿಸಿಕೊಳ್ಳುತ್ತಾರೆ. ನಿಜವಾದ ನಾಯಕ ಯಾರು ಅನ್ನೋದು ಸಿನಿಮಾದಲ್ಲೇ ನೋಡಬೇಕು’ ಎನ್ನುತ್ತಾರೆ.

ಈ ಚಿತ್ರದಲ್ಲಿ ಪ್ರವೀಣ್‌ ತೇಜ್‌, ಅರ್ಜುನ್‌ ಕಾಪಿಕಾಡ್‌, ಅಭಿಷೇಕ್‌, ಸಪ್ತಾ ಪಾವೂರ್‌, ಧನುಶ್‌ ಮೊದಲಾದವರು “ಕಥಾ ನಾಯಕ’ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಅಂದಹಾಗೆ, “ಕಥಾ ನಾಯಕ’ ಚಿತ್ರದ ನಾಯಕಿಯ ಹೆಸರನ್ನು ಚಿತ್ರತಂಡ ಇನ್ನೂ ಬಹಿರಂಗಪಡಿಸಿಲ್ಲ. ಅದಕ್ಕೆ ಕಾರಣ ಇಡೀ ಚಿತ್ರದ ಕಥೆ ನಾಯಕಿಯ ಹುಡುಕಾಟದ ಸುತ್ತ ನಡೆಯುತ್ತಿರುವುದಂತೆ. ಹಾಗಾಗಿ ಚಿತ್ರದ ನಾಯಕಿಯ ಹೆಸರನ್ನು ತೆರೆಮೇಲೆ ರಿವೀಲ್‌ ಮಾಡಲಿದ್ದೇವೆ ಎನ್ನುತ್ತದೆ ಚಿತ್ರತಂಡ.

ಇದನ್ನೂ ಓದಿ: ರಕ್ಷಿತ್‌ ಶೆಟ್ಟಿ ಪ್ರೇಮ ಪುರಾಣ: ಸಪ್ತಸಾಗರದಾಚೆ ಇಂಟೆನ್ಸ್‌ ಲವ್‌ಸ್ಟೋರಿ!

“ಕಥಾ ನಾಯಕ’ ಚಿತ್ರದ ಹಾಡುಗಳಿಗೆ ಬಿ. ಅಜನೀಶ್‌ ಲೋಕನಾಥ್‌ ಸಂಗೀತ ಸಂಯೋಜನೆಯಿದೆ. ಚಿತ್ರಕ್ಕೆ ಕಾರ್ತಿಕ್‌ ಎಸ್‌ ಛಾಯಾಗ್ರಹಣ, ಉಜ್ವಲ್‌ ಚಂದ್ರ ಸಂಕಲನವಿದೆ. ವಿಕ್ರಂ ಮೋರ್‌ ಸಾಹಸವಿದೆ. ಬೆಂಗಳೂರು, ದೆಹಲಿ ಸುತ್ತಮುತ್ತ ಸುಮಾರು 50ಕ್ಕೂ ಹೆಚ್ಚು ದಿನಗಳ ಕಾಲ “ಕಥಾ ನಾಯಕ’ ಚಿತ್ರದ ಶೂಟಿಂಗ್‌ಗೆ ಚಿತ್ರತಂಡ ಪ್ಲಾನ್‌ ಹಾಕಿಕೊಂಡಿದೆ. “ವಿನಾಯಕ ಜ್ಯೋತಿ ಚಲನಚಿತ್ರ’ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ರಾಜೇಗೌಡ, ಶ್ರೀನಾಥ್‌ ಸಹ ನಿರ್ಮಾಪಕರಾಗಿದ್ದಾರೆ.

ಟಾಪ್ ನ್ಯೂಸ್

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.