ಕೋವಿಡ್ ವೈರಸ್ ಹರಡದಂತೆ ಮುನ್ನೆಚ್ಚರಿಕೆ; ಪುತ್ರ ವಿನೋದ್ ರಾಜ್ ಕಾರ್ಯಕ್ಕೆ ತಾಯಿ ಮೆಚ್ಚುಗೆ
ತಮ್ಮ ಗ್ರಾಮದ ಸುರಕ್ಷತೆಗೆ ಮುಂದಾಗಿದ್ದಾರೆ. ಹಿರಿಯ ನಟಿ ಡಾ.ಲೀಲಾವತಿ ಸಹ ಇದಕ್ಕೆ ಕೈ ಜೋಡಿಸಿದ್ದಾರೆ.
Team Udayavani, Apr 1, 2020, 4:27 PM IST
Actor Vinodraj
ಬೆಂಗಳೂರು: ಕೋವಿಡ್ 19 ವೈರಸ್ ಹರಡದಂತೆ ಎಚ್ಚರ ವಹಿಸುವುದರ ಭಾಗವಾಗಿ ನಟ ವಿನೋದ್ ರಾಜ್ ತಮ್ಮ ಹಳ್ಳಿಯನ್ನು ಕಾಪಾಡಲು ಮುಂದಾಗಿದ್ದು, ಇಡೀ ಗ್ರಾಮದ ರಸ್ತೆ ಹಾಗೂ ಮನೆಯ ಗೋಡೆಗಳಿಗೆ ರಾಸಾಯನಿಕ ಸಿಂಪಡಣೆ ಮಾಡಿದ್ದಾರೆ.
ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತಮ್ಮ ಸ್ವಗ್ರಾಮದಲ್ಲಿ ನಟ ವಿನೋದ್ ರಾಜ್ ರಾಸಾಯನಿಕ ಸಿಂಪಡಣೆ ಮಾಡಿಸಿದ್ದು, ಈ ಮೂಲಕ ತಮ್ಮ ಗ್ರಾಮದ ಸುರಕ್ಷತೆಗೆ ಮುಂದಾಗಿದ್ದಾರೆ. ಹಿರಿಯ ನಟಿ ಡಾ.ಲೀಲಾವತಿ ಸಹ ಇದಕ್ಕೆ ಕೈ ಜೋಡಿಸಿದ್ದಾರೆ. ನಟ ವಿನೋದ್ ರಾಜ್ ತಮ್ಮ ತೋಟದಲ್ಲಿ ಬಳಸುವ ಮಿನಿ ಟ್ರ್ಯಾಕ್ಟರ್ ಹಾಗೂ ಪಂಪ್ ಸಹಾಯದಿಂದ ಕ್ರಿಮಿನಾಶಕ ಸಿಂಪಡಣೆ ಮಾಡಿದ್ದಾರೆ. ಸ್ವತಃ ಕ್ರಿಮಿನಾಶಕ ಗನ್ ಹಿಡಿದು ಗ್ರಾಮಕ್ಕೆ ವೈರಸ್ ಕಾಲಿಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಔಷಧಿಯನ್ನು ಸಿಂಪಡಣೆ ಮಾಡಿಸಿದ್ದಾರೆ.
ಗ್ರಾಮದ ಬೀದಿ, ಮನೆಗಳ ಗೋಡೆಗಳಿಗೆ ರಾಸಾಯನಿಕ ಸಿಂಪಡಣೆ ಮಾಡಲಾಗಿದೆ. ವಿನೋದ್ ರಾಜ್ ಅವರ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಡೀ ಗ್ರಾಮವೇ ನಟ ವಿನೋದ್ ರಾಜ್ ಮತ್ತು ಲೀಲಾವತಿ ಅವರ ಬೆಂಬಲಕ್ಕೆ ನಿಂತು ಗ್ರಾಮದ ಸ್ವಚ್ಛತೆಗೆ ಮುಂದಾಗಿದೆ.
ಈ ವೇಳೆ ಮಾತನಾಡಿದ ಹಿರಿಯ ನಟಿ ಲೀಲಾವತಿ, ಎಲ್ಲರೂ ಚೆನ್ನಾಗಿ ಬಾಳಬೇಕು ಅಂತ ಇಲ್ಲಿ ಬಂದವರು. ಆದರೆ ದೇವರು ಕಷ್ಟ ಕೊಟ್ಟಿದ್ದಾನೆ. ಕೋವಿಡ್ ವೈರಸ್ ನಮ್ಮ ಕರ್ಮ ಆಗಿಬಿಟ್ಟಿದೆ. ಸರ್ಕಾರದ ಕಾನೂನು ಮೀರಬೇಡಿ, ಮನೆಯಲ್ಲೇ ಇದ್ದು ಸಹಕರಿಸಿ. ನಿಮ್ಮ ಮನೆ, ಜಾಗವನ್ನು ಶುದ್ಧವಾಗಿ ಇಟ್ಟುಕೊಳ್ಳಬೇಕು. ಪೊಲೀಸರು ಹೊಡೆದರು ಎಂದು ಹೇಳುವ ಬದಲು ಹೊಡೆಯದ ಹಾಗೆ ಇರಿ. ಮಾಸ್ಕ್ ಧರಿಸಿ ಶುಚಿತ್ವ ಕಾಪಾಡಿ ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.