ರೌಡಿ ಫೆಲೋ ಜೊತೆ ಪ್ರೇಮ್
Team Udayavani, Sep 23, 2020, 2:16 PM IST
ಆರ್‌ಜೆ ರೋಹಿತ್ “ರೌಡಿ ಫೆಲೋ’ ಎಂಬ ಸಿನಿಮಾವನ್ನು ನಿರ್ದೇಶಿಸಿ, ನಟಿಸುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರಕ್ಕೆ ಹೊಸ ಸೇರ್ಪಡೆಯಾಗಿದೆ. ಅದು ಪ್ರೇಮ್. ಹೌದು, “ನೆನಪಿರಲಿ’ ಪ್ರೇಮ್ “ರೌಡಿ ಫೆಲೋ’ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಅವರು ಪೊಲೀಸ್ ಆಫೀಸರ್ ಆಗಿ ಕಾಣಿಸಿಕೊಂಡಿದ್ದು,ಕಥೆಗೆ ಟ್ವಿಸ್ಟ್ ಕೊಡುವ ಪಾತ್ರವಂತೆ.
ಅಂದಹಾಗೆ, ರೋಹಿತ್ ನಿರ್ದೇಶನದ ಈ ಚಿತ್ರದ ಹಿಂದೆ “ಕೆಜಿಎಫ್’ ಖ್ಯಾತಿಯ ಪ್ರಶಾಂತ್ ನೀಲ್ ಇದ್ದಾರೆ. ಇಡೀ ಸಿನಿಮಾದ ಸ್ಕ್ರಿಪ್ಟ್ ಕೆಲಸ ಪ್ರಶಾಂತ್ ನೀಲ್ ಅವರ ಸಮ್ಮುಖದಲ್ಲೇ ಆಗಿದೆ. ಅವರ ಮಾರ್ಗದರ್ಶನದಲ್ಲೇ, ಸ್ಕ್ರಿಪ್ಟ್ ರೆಡಿಯಾಗಿದ್ದು, ಇದೀಗ “ರೌಡಿ ಫೆಲೋ’ ಮೂಲಕ ನಿರ್ದೇಶನದಲ್ಲೂ ತಮ್ಮ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ ರೋಹಿತ್.
ಈ ಹಿಂದೆ “ಕರ್ವ’ ಸಿನಿಮಾ ಮೂಲಕ ಸುದ್ದಿಯಾಗಿದ್ದ ರೋಹಿತ್ ಆ ಬಳಿಕ ಅವರು”ಬಕಾಸುರ’ ಚಿತ್ರದಲ್ಲಿ ನಟಿಸಿದ್ದರು. ರವಿಚಂದ್ರನ್ ಜೊತೆ ಮಾಡಿದ ಎರಡನೇ ಸಿನಿಮಾ ಅದಾಗಿತ್ತು.ರೋಹಿತ್‌ಗೆ ಈ ಚಿತ್ರದಲ್ಲಿ ವಿದ್ಯಾ ಪ್ರದೀಪ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇನ್ನು, ಈ ಚಿತ್ರ ಪದ್ಮಾವತಿ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿದೆ. ಲವಿತ್ ಕುಮಾರ್ ಛಾಯಾಗ್ರಹಣವಿದೆ. ನಕುಲ್ ಅಭಯಂಕರ್ ಅವರ ಸಂಗೀತವಿದೆ. ರವಿ ಬಸ್ರೂರು ಅವರು ಹಿನ್ನೆಲೆ ಸಂಗೀತ ನೀಡುತ್ತಿದ್ದಾರೆ. ಚಿತ್ರದಲ್ಲಿ ರೋಹಿತ್ ಅವರು ಆ್ಯಂಗ್ರಿ ಯಂಗ್ ಮ್ಯಾನ್ ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.