![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 12, 2023, 12:28 PM IST
ಈ ಹಿಂದೆ “ಇಂಜಿನಿಯರ್’ ಮತ್ತು “ಗಂಡುಲಿ’ ಸಿನಿಮಾಗಳನ್ನು ನಿರ್ದೇಶಿಸಿದ್ದ ಜೊತೆಗೆ ನಾಯಕ ನಟನಾಗಿ ಅಭಿನಯಿಸಿದ್ದ ವಿನಯ್ ರತ್ನಸಿದ್ದಿ ಈ ಬಾರಿ “ಪ್ರೇಮಂ 2 ಟೂ’ ಎಂಬ ಮತ್ತೂಂದು ಪ್ರೇಮಕಥೆಯೊಂದಿಗೆ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಈಗಾಗಲೇ ಸದ್ದಿಲ್ಲದೆ “ಪ್ರೇಮಂ 2 ಟೂ’ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇತ್ತೀಚೆಗೆ ಸಿನಿಮಾದ ಮೊದಲ ಟ್ರೇಲರ್ ಬಿಡುಗಡೆ ಮಾಡುವ ಮೂಲಕ “ಪ್ರೇಮಂ 2 ಟೂ’ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದೆ.
ಟ್ರೇಲರ್ ಬಿಡುಗಡೆ ಬಳಿಕ “ಪ್ರೇಮಂ 2 ಟೂ’ ಸಿನಿಮಾದ ಬಗ್ಗೆ ಮಾತನಾಡಿದ ನಾಯಕ ಕಂ ನಿರ್ದೇಶಕ ವಿನಯ್ ರತ್ನಸಿದ್ಧಿ, “ಪರಿಶುದ್ದವಾದ ಪ್ರೇಮಕ್ಕೆ ಎಂದೂ ಸಾವಿಲ್ಲ ಎಂಬುದನ್ನು “ಪ್ರೇಮಂ 2 ಟೂ’ ಸಿನಿಮಾದಲ್ಲಿ ಹೇಳಿದ್ದೇವೆ. ಕೋವಿಡ್ ಮೊದಲ ಲಾಕ್‌ಡೌನ್ ನಲ್ಲಿ ಎರಡು ಪಾತ್ರಗಳನ್ನಿಟ್ಟುಕೊಂಡು ಈ ಸಿನಿಮಾವನ್ನು ಪ್ರಾರಂಭಿಸಿದ್ದೆವು. ಇದೀಗ 200 ಪಾತ್ರಗಳಾಗಿದೆ. 2 ಟೂ ಎಂದರೆ 2 ವಿಕ್ಟರಿ, 2 ಥಿಂಕಿಂಗ್ ಏನಾದರೂ ಆಗಬಹುದು. ಸಿನಿಮಾದಲ್ಲಿ ಎರಡು ರೀತಿಯ ಆಲೋಚನೆಗಳ ಬಗ್ಗೆ ಹೇಳಿದ್ದೇವೆ, ಬುದ್ದಿನಂತನಲ್ಲದ, ಹೆಡ್ಡನಂತಿರುವ ನಾಯಕನ ಜೀವನದಲ್ಲಿ ಬರುವ ತಿರುವುಗಳು, ಆತನಗಾಗುವ ಪ್ರೀತಿ, ಆ ಪ್ರೀತಿಯಿಂದಾಗುವ ತೊಳಲಾಟಗಳು, ಅದರಿಂದ ಆತ ಹೇಗೆ ಹೊರಬರುತ್ತಾನೆ ಎನ್ನುವುದೇ ಈ ಸಿನಿಮಾ’ ಎಂದು ಕಥಾಹಂದರದ ಬಗ್ಗೆ ವಿವರಣೆ ನೀಡಿದರು.
“ಪ್ರೇಮಂ 2 ಟೂ’ ಸಿನಿಮಾದಲ್ಲಿ ನಾಯಕ ನಟ ಕಂ ನಿರ್ದೇಶಕ ವಿನಯ್ ರತ್ನಸಿದ್ದಿ ಅವರಿಗೆ ಶಕುಂತಲಾ, ವೈಷ್ಣವಿ, ಸುಶ್ಮಿತಾ, ಮಂಜುಶ್ರೀ, ಕಾವೇರಿ ಹಾಗೂ ಪ್ರಿಯಾಂಕಾ ಎಂಬ ಬರೋಬ್ಬರಿ 6 ಜನ ತೆರೆಮೇಲೆ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಚಂದ್ರಪ್ರಭ, ಲೋಕೇಶ್ ರಾಜಣ್ಣ, ಉಮೇಶ್ ಕಿನ್ನಾಳ, ಶಿವಮೊಗ್ಗ ರಾಮಣ್ಣ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
“ರತ್ನಸಿದ್ದಿ ಫಿಲಂಸ್’ ಬ್ಯಾನರ್ ಮೂಲಕ ಚಂದನ, ಅಮರೇಂದ್ರ ವರದ ಹಾಗೂ ಪ್ರಸಾದ್ ಬಿ. ಜಿ ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ತುಮಕೂರು ಬಳಿಯ ಹೊನ್ನುಡಿಕೆಯಲ್ಲಿ ಬೆಂಗಳೂರು, ವಿಮಾನ ನಿಲ್ದಾಣ ಸೇರಿದಂತೆ ಹಲವು ಕಡೆಗಳಲ್ಲಿ ಸುಮಾರು 70 ದಿನಗಳ ಕಾಲ “ಪ್ರೇಮಂ 2 ಟೂ’ ಸಿನಿಮಾದ ಚಿತ್ರೀಕರಣ ಮಾಡಲಾಗಿದೆ. ಸಿನಿಮಾದ 4 ಹಾಡುಗಳಿಗೆ ಅಜಯ್ ಶ್ರೀನಿವಾಸಮೂರ್ತಿ ಸಂಗೀತ ಸಂಯೋಜನೆಯಿದ್ದು, ಆನಂದ್ ಇಳಯರಾಜಾ, ಅರುಣ್ ಮತ್ತು ಮನು ಛಾಯಾಗ್ರಹಣ ವಿನಯ್ ಸಂಕಲನ ಚಿತ್ರಕ್ಕಿದೆ.
ಸದ್ಯ ಟ್ರೇಲರ್ ಬಿಡುಗಡೆ ಮಾಡಿರುವ “ಪ್ರೇಮಂ 2 ಟೂ’ ಸಿನಿಮಾವನ್ನು ಇದೇ ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ತೆರೆಗೆ ತರಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.