ಹೊಸಬರ ‘ಪ್ರೇಮನ್’ ಟೀಸರ್ ಔಟ್
Team Udayavani, Jan 28, 2021, 3:36 PM IST
ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸಿರುವ “ಪ್ರೇಮನ್’ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಕೆಲ ವರ್ಷಗಳ ಹಿಂದೆ ಬೆಂಗಳೂರಿನ ಪ್ರತಿಷ್ಟಿತ ಕಾಲೇಜ್ ಒಂದರಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿ ಸಸ್ಪೆನ್ಸ್ – ಥ್ರಿಲ್ಲರ್ ಶೈಲಿಯಲ್ಲಿ ಈ ಚಿತ್ರವನ್ನು ತೆರೆಮೇಲೆ ತರಲಾಗುತ್ತಿದ್ದು, ಶಿವರಾಜ್ ಮಧುಗಿರಿ ಚಿತ್ರಕ್ಕೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.
“ಪ್ರೇಮನ್’ ಚಿತ್ರಕ್ಕೆ ವಿಷ್ಣು ತೇಜ ಚಿತ್ರಕತೆ, ಸಂಭಾಷಣೆ ಬರೆದು ತೆರೆಮೇಲೆ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಪದ್ಮಶ್ರೀ, ಯಶಸ್ವಿನಿ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ.
ಉಳಿದಂತೆ ಪಾರ್ಥ, ನಾಗೇಂದ್ರ ಷಾ, ರಮೇಶ್ ಪಂಡಿತ್, ಸುನೇತ್ರಾ ಪಂಡಿತ್, ರವಿ ಭಟ್, ಚಿಲ್ಲರ್ ಮಂಜು, ಧನಿಕಾ ಮುಂತಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಸದ್ಯ ಬಿಡುಗಡೆಯಾಗಿರುವ “ಪ್ರೇಮನ್’ ಟೀಸರ್‌ಗೆ ಸೋಶಿಯಲ್ ಮೀಡಿಯಾಗಳಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ನಿಧಾನವಾಗಿ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇದೇ ಮಾರ್ಚ್ ವೇಳೆಗೆ “ಪ್ರೇಮನ್’ ಚಿತ್ರವನ್ನು ತೆರೆಗೆ ತರುವ ಯೋಚನೆಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.