ಸವಾರಿಗೆ ಪ್ರೀಮಿಯರ್ ರೆಡಿ
Team Udayavani, Apr 8, 2019, 3:00 AM IST
ಸೆಟ್ಟೇರಿದಾಗಿನಿಂದಲೂ ತನ್ನ ಟೈಟಲ್ ಮತ್ತು ಕಥಾಹಂದರದ ಮೂಲಕ ಸಿನಿ ಪ್ರಿಯರಲ್ಲಿ ಕುತೂಹಲ ಮೂಡಿಸುವಲ್ಲಿ ಯಶಸ್ವಿಯಾಗಿದ್ದ ನವರಸ ನಾಯಕ ಜಗ್ಗೇಶ್ ಅಭಿನಯದ “ಪ್ರೀಮಿಯರ್ ಪದ್ಮಿನಿ’ ಚಿತ್ರ ಅಂತೂ ತೆರೆಗೆ ಬರೋದಕ್ಕೆ ಸಿದ್ಧವಾಗಿದೆ.
ಸದ್ಯ ಶೂಟಿಂಗ್ ಮತ್ತು ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ “ಪ್ರೀಮಿಯರ್ ಪದ್ಮಿನಿ’ ಚಿತ್ರತಂಡ, ಚಿತ್ರದ ಪ್ರಮೋಷನ್ ಕೆಲಸಗಳಿಗೆ ಚಾಲನೆ ಕೊಟ್ಟಿದ್ದು, ಚಿತ್ರದ ಬಿಡುಗಡೆಯ ದಿನಾಂಕವನ್ನು ಘೋಷಿಸಿದೆ.
ಅಂದಹಾಗೆ, “ಪ್ರೀಮಿಯರ್ ಪದ್ಮಿನಿ’ ಚಿತ್ರವು ಇದೇ ಏಪ್ರಿಲ್ 26ರಂದು ಅದ್ದೂರಿಯಾಗಿ ತೆರೆಗೆ ಬರುತ್ತಿದೆ. ಈಗಾಗಲೇ ಚಿತ್ರದ ಪ್ರಚಾರ ಕಾರ್ಯಗಳನ್ನು ಆರಂಭಿಸಿರುವ ಚಿತ್ರತಂಡ, ಈಗಾಗಲೇ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದೆ.
ಕಿರುತೆರೆ ನಟಿ ಕಂ ನಿರ್ಮಾಪಕಿ ಶ್ರುತಿ ನಾಯ್ಡು ಮೊದಲ ಬಾರಿಗೆ “ಪ್ರೀಮಿಯರ್ ಪದ್ಮಿನಿ’ ಚಿತ್ರವನ್ನು ನಿರ್ಮಿಸುವ ಮೂಲಕ ಹಿರಿತೆರೆಗೆ ಎಂಟ್ರಿಯಾಗುತ್ತಿದ್ದು, ಈ ಚಿತ್ರಕ್ಕೆ ರಮೇಶ್ ಇಂದಿರಾ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.
ಚಿತ್ರದ ಹಾಡುಗಳಿಗೆ ಅರ್ಜುನ್ ಜನ್ಯಾ ಸಂಗೀತ ಸಂಯೋಜನೆಯಿದ್ದು, ಯೋಗರಾಜ್ ಭಟ್, ಡಾ. ವಿ. ನಾಗೇಂದ್ರ ಪ್ರಸಾದ್, ಸಾಯಿ ಸರ್ವೇಶ್ ಚಿತ್ರದ ಹಾಡುಗಳಿಗೆ ಸಾಹಿತ್ಯ ಒದಗಿಸಿದ್ದಾರೆ. ಚಿತ್ರಕ್ಕೆ ಅದ್ವೆ„ತ ಗುರುಮೂರ್ತಿ ಛಾಯಾಗ್ರಹಣ, ರಾಜೇಂದ್ರ ಅರಸ್ ಸಂಕಲನ ಕಾರ್ಯವಿದೆ.
“ಪ್ರೀಮಿಯರ್ ಪದ್ಮಿನಿ’ ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ರಮೇಶ್ ಇಂದಿರಾ, “ಸಂಬಂಧಗಳ ಮೇಲೆ ಬದುಕು ಸಾಗಲಿದ್ದು, ಪ್ರತಿಯೊಬ್ಬರ ಬದುಕಿಗೂ ಒಂದೊಂದು ದಾರಿಯಿರುತ್ತದೆ. ಇದೇ ಎಳೆಯ ಮೇಲೆ ಈ ಚಿತ್ರ ಕೂಡ ನಡೆಯುತ್ತದೆ.
ಕಥಾ ನಾಯಕನ ಬಳಿ “ಪ್ರೀಮಿಯರ್ ಪದ್ಮಿನಿ’ ಕಾರು ಇರುತ್ತದೆ. ಆ ಕಾರು ಅವನ ಜೀವನದಲ್ಲಿ ಒಂದು ಪಾತ್ರವನ್ನು ನಿರ್ವಹಿಸುತ್ತಿರುತ್ತದೆ. ಈ ಚಿತ್ರದಲ್ಲೂ ಕೂಡ ಕಾರನ್ನು ಒಂದು ಪಾತ್ರವಾಗಿ ನೋಡಬಹುದು. ಮಧ್ಯಮ ವರ್ಗದ ಸುಖ, ದುಃಖ, ಯುವಜನರ ಆಸೆ-ಆಕಾಂಕ್ಷೆಗಳು ಎಲ್ಲವೂ ಈ ಚಿತ್ರದಲ್ಲಿದೆ’ ಎನ್ನುತ್ತಾರೆ.
ನಟ ಜಗ್ಗೇಶ್ ಅವರಿಗೂ ಇದೊಂದು ಹೊಸ ಬಗೆಯ ಸಿನಿಮಾವಾಗಿ ಪ್ರೇಕ್ಷಕರಿಗೆ ಇಷ್ಟವಾಗುವ ವಿಶ್ವಾಸವಿದೆ. “ಪ್ರೀಮಿಯರ್ ಪದ್ಮಿನಿ’ ಚಿತ್ರವನ್ನು ಬೆಂಗಳೂರು, ಮೈಸೂರು, ಚಿಕ್ಕಮಗಳೂರು ಸುತ್ತಮುತ್ತ ಚಿತ್ರೀಕರಿಸಲಾಗಿದೆ. ಚಿತ್ರದಲ್ಲಿ ಜಗ್ಗೇಶ್ ನಾಯಕನಾಗಿ, ಅವರಿಗೆ ಜೋಡಿಯಾಗಿ ಮಧುಬಾಲ ಕಾಣಿಸಿಕೊಂಡಿದ್ದಾರೆ.
ಉಳಿದಂತೆ ಪ್ರಮೋದ್, ಹಿತಾ ಚಂದ್ರಶೇಖರ್, ಸುಧಾರಾಣಿ, ಜಹಾಂಗೀರ್, ವಿವೇಕ್ ಸಿಂಹ ಮೊದಲಾದವರು ಪ್ರೀಮಿಯರ್ ಪದ್ಮಿನಿಯ ಇತರೆ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಒಟ್ಟಾರೆ ತೆರೆಮೇಲೆ “ಪ್ರೀಮಿಯರ್ ಪದ್ಮಿನಿ’ ಜರ್ನಿ ನೋಡುಗರಿಗೆ ಎಷ್ಟರ ಮಟ್ಟಿಗೆ ಇಷ್ಟವಾಗಲಿದೆ ಅನ್ನೋದು ಇದೇ ತಿಂಗಳಾಂತ್ಯಕ್ಕೆ ಗೊತ್ತಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.