ಏಕಲವ್ಯನ ಸ್ಟಂಟ್ಸ್ ಜೋರು
Team Udayavani, May 28, 2019, 9:53 AM IST
ನಿರ್ದೇಶಕ ಪ್ರೇಮ್ ಕಳೆದವಾರ ಮಹದೇಶ್ವರ ಬೆಟ್ಟದಲ್ಲಿ ತಮ್ಮ ಹೊಸ ಚಿತ್ರ “ಏಕಲವ್ಯ’ ದ ಮುಹೂರ್ತವನ್ನು ನೆರವೇರಿಸಿದ್ದರು. ಸದ್ಯ ಸೆಟ್ಟೇರಿರುವ “ಏಕಲವ್ಯ’ ಚಿತ್ರದ ಚಿತ್ರೀಕರಣ ಇದೀಗ ಆರಂಭವಾಗಿದ್ದು, ಚಿತ್ರದ ಮೊದಲ ಹಂತದಲ್ಲೇ ನಿರ್ದೇಶಕ ಪ್ರೇಮ್ ಆ್ಯಕ್ಷನ್ ದೃಶ್ಯಗಳನ್ನು ಸೆರೆಹಿಡಿಯುತ್ತಿದ್ದಾರೆ.
ಇನ್ನು ರಕ್ಷಿತಾ ಪ್ರೇಮ್ ಅವರ ಸಹೋದರ ಅಭಿಷೇಕ್ ಈ ಚಿತ್ರದ ಮೂಲಕ ರಾಣಾ ಎಂಬ ಹೆಸರಿನೊಂದಿಗೆ ಚಿತ್ರರಂಗಕ್ಕೆ ಪರಿಚಯಗೊಳ್ಳುತ್ತಿದ್ದಾರೆ. ನಿರ್ದೇಶಕ ಪ್ರೇಮ್ ತಮ್ಮ ಭಾವಮೈದುನ ಅಭಿಷೇಕ್ ನಟನೆಯ ಮೊದಲ ಚಿತ್ರವನ್ನು ಅದ್ಧೂರಿಯಾಗಿ ತೆರೆಮೇಲೆ ತರಲು ಪ್ಲಾನ್ ಮಾಡಿಕೊಂಡಿದ್ದು, ಚಿತ್ರದಲ್ಲಿ ಅನೇಕ ಸ್ಟಾರ್ ಕಲಾವಿದರು ಮತ್ತು ತಂತ್ರಜ್ಞರನ್ನು ಇರಲಿದ್ದಾರೆ ಎನ್ನಲಾಗುತ್ತಿದೆ.
ಅದರ ಮೊದಲ ಭಾಗವಾಗಿ, ಈಗ ಅನೇಕ ಸೂಪರ್ ಸ್ಟಾರ್ ಗೆ ಆಕ್ಷನ್-ಕಟ್ ಹೇಳಿರುವ ನಟ ಕಂ ಸಾಹಸ ನಿರ್ದೇಶಕ ಸ್ಟಂಟ್ ಶಿವ “ಏಕ್ ಲವ್ ಯಾ’ ಚಿತ್ರತಂಡವನ್ನು ಸೇರಿಕೊಂಡಿದ್ದು, ಚಿತ್ರದ ಆ್ಯಕ್ಷನ್ ದೃಶ್ಯಗಳನ್ನು ಸಂಯೋಜಿಸುತ್ತಿದ್ದಾರೆ. ಎಸ್.ಎಸ್ ರಾಜಮೌಳಿ ನಿರ್ದೇಶನದ “ಯಮದೊಂಗ’ ಚಿತ್ರದ ಮೂಲಕ ಸಾಹಸ ನಿರ್ದೇಶಕನಾಗಿ ಪರಿಚಯವಾದ ಸ್ಟಂಟ್ ಶಿವ, ತೆಲುಗು, ತಮಿಳು, ಕನ್ನಡ, ಮಲಯಾಳಂ, ಮರಾಠಿ ಚಿತ್ರಗಳಲ್ಲಿ ಬಹುತೇಕ ಸ್ಟಾರ್ ನಟರ
ಚಿತ್ರಗಳಿಗೆ ಸಾಹಸ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಕನ್ನಡದಲ್ಲಿ ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯಿಸಿದ್ದ “ಚಕ್ರವ್ಯೂಹ’ ಚಿತ್ರಕ್ಕೂ ಸ್ಟಂಟ್ ಶಿವ ಸಾಹಸ ಸಂಯೋಜಿಸಿದ್ದರು.
ಇನ್ನು ರಕ್ಷಿತಾ ಸಹೋದರ ರಾಣಾ ಅಭಿನಯದ ಮೊದಲ ಚಿತ್ರ “ಏಕಲವ್ಯ’ವನ್ನು ಸ್ವತಃ ರಕ್ಷಿತಾ ಅವರೇ ನಿರ್ಮಿಸುತ್ತಿದ್ದು, ಸದ್ಯಕ್ಕೆ ನಾಯಕಿ ಯಾರು ಎಂಬುದು ಅಂತಿಮವಾಗಿಲ್ಲ. ಉಳಿದಂತೆ “ಏಕ್ ಲವ್ ಯಾ’ ಚಿತ್ರದ ಹಾಡುಗಳಿಗೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆಯಿದ್ದು, ಚಿತ್ರಕ್ಕೆ ಮಹೇಂದ್ರ ಸಿಂಹ ಛಾಯಾಗ್ರಹಣ, ಶ್ರೀನಿವಾಸ್. ಪಿ ಬಾಬು ಸಂಕಲನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.