ಶಿವಣ್ಣನ ಹುಟ್ಟುಹಬ್ಬಕ್ಕೆ ಭರ್ಜರಿ ತಯಾರಿ: ದಿನಪೂರ್ತಿ ಕಾರ್ಯಕ್ರಮ


Team Udayavani, Jul 11, 2023, 11:23 AM IST

shivarajkumar

ಕನ್ನಡ ಚಿತ್ರರಂಗದ ಹ್ಯಾಟ್ರಿಕ್‌ ಹೀರೊ ಖ್ಯಾತಿಯ ನಟ ಶಿವರಾಜಕುಮಾರ್‌ ಇದೇ ಜು. 12ರಂದು 62ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಇನ್ನು ತಮ್ಮ ನೆಚ್ಚಿನ ನಟನ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಲು ಅಭಿಮಾನಿಗಳು ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದು, ಶಿವಣ್ಣ ಜನ್ಮದಿನಕ್ಕೆ ಕ್ಷಣಗಣನೆ ಶುರುವಾಗಿದೆ.

ಕೋವಿಡ್‌ ಆತಂಕ ಆನಂತರ ನಟ ಪುನೀತ್‌ ರಾಜಕುಮಾರ್‌ ಅವರ ಅಗಲಿಕೆಯ ದುಃಖದಿಂದಾಗಿ ನಟ ಶಿವರಾಜಕುಮಾರ್‌, ಸುಮಾರು ನಾಲ್ಕು ವರ್ಷಗಳಿಂದ ಅದ್ಧೂರಿ ಬರ್ತ್‌ಡೇ, ಸಂಭ್ರಮಾಚರಣೆಗಳಿಂದ ದೂರ ಉಳಿದಿದ್ದರು. ಆದರೆ ಈ ಬಾರಿ ಅಭಿಮಾನಿಗಳ ಒತ್ತಾಯದ ಮೇರೆಗೆ ಸಾರ್ವಜನಿಕವಾಗಿ ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳಲು ಶಿವರಾಜಕುಮಾರ್‌ ಸಮ್ಮತಿಸಿದ್ದು, ಅದಕ್ಕಾಗಿ ತಯಾರಿ ಕೂಡ ಜೋರಾಗಿ ನಡೆಯುತ್ತಿದೆ.

ದಿನಪೂರ್ತಿ ಕಾರ್ಯಕ್ರಮ:  ಜು. 11ರ ಸಂಜೆಯಿಂದಲೇ ಶಿವರಾಜಕುಮಾರ್‌ ಅವರ ಹುಟ್ಟುಹಬ್ಬ ಕಾರ್ಯಕ್ರಮ ಆರಂಭವಾಗಲಿದ್ದು, ಬೆಂಗಳೂರಿನ ನಾಗವಾರದಲ್ಲಿರುವ ಶಿವಣ್ಣ ನಿವಾಸದಲ್ಲಿ ರಾತ್ರಿ 12 ಗಂಟೆಗೆ ಬೃಹತ್‌ ಕೇಕ್‌ ಕತ್ತರಿಸಲಾಗುತ್ತಿದ್ದು, ಬಳಿಕ ಸಿಡಿಮದ್ದು ಸಂಭ್ರಮಾಚರಣೆ ನಡೆಯಲಿದೆ.

ಜು. 12ರಂದು ಬೆಳಿಗ್ಗೆ 8 ಗಂಟೆಯಿಂದ 10 ಗಂಟೆಯವರೆಗೆ ತಮ್ಮ ಸ್ವಗೃಹದಲ್ಲಿ ನಟ ಶಿವರಾಜಕುಮಾರ್‌ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿರುವ ಅಭಿಮಾನಿಗಳ ಜೊತೆಗೆ ಕೇಕ್‌ ಕತ್ತರಿಸಿ, ಸಂಭ್ರಮಾಚರಣೆ ಮಾಡಲಿದ್ದಾರೆ. ಬಳಿಕ 10.30ಕ್ಕೆ “ಕಂಠೀರವ ಸ್ಟುಡಿಯೋ’ದಲ್ಲಿರುವ ವರನಟ ಡಾ. ರಾಜಕುಮಾರ್‌ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಲಿದ್ದಾರೆ. ಅದಾದ ನಂತರ 11.15ಕ್ಕೆ ಕೆ. ಜಿ ರಸ್ತೆಯಲ್ಲಿರುವ ಸಂತೋಷ್‌ ಚಿತ್ರಮಂದಿರದಲ್ಲಿ ಶಿವರಾಜಕುಮಾರ್‌ ಬರ್ತ್‌ಡೇ ಪ್ರಯುಕ್ತ “ಘೋಸ್ಟ್‌’ ಸಿನಿಮಾದ ಸ್ಪೆಷಲ್‌ ಟೀಸರ್‌ ಮತ್ತು ಸಾಂಗ್‌ ಬಿಡುಗಡೆಯಾಗಲಿದ್ದು, ಶಿವಣ್ಣ ಚಿತ್ರತಂಡ ಮತ್ತು ಅಭಿಮಾನಿಗಳ ಜೊತೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ನಾಗವಾರದಲ್ಲಿರುವ ಶಿವಣ್ಣ ಅವರ ಸ್ವಗೃಹದಲ್ಲಿ ಅಭಿಮಾನಿಗಳಿಗೆ ಬಿರಿಯಾನಿ ವಿತರಣೆ ನಡೆಯಲಿದೆ. ಇದರ ಜೊತೆ ರಕ್ತದಾನ ಶಿಬಿರ ಸೇರಿದಂತೆ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಭರದಿಂದ ನಡೆದಿದೆ ತಯಾರಿ:  ಇನ್ನು ಶಿವರಾಜಕುಮಾರ್‌ ಅವರ ಜನ್ಮದಿನದ ಪ್ರಯುಕ್ತ ಎರಡು ವಾರಗಳಿಂದಲೇ ಅಭಿಮಾನಿಗಳು ಭರದಿಂದ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಹೊಸ ಸಿನಿಮಾಗಳ ಅಪ್ಡೇಟ್‌ ಇನ್ನು ಶಿವರಾಜಕುಮಾರ್‌ ಅವರ ಜನ್ಮದಿನದ ಪ್ರಯುಕ್ತ ಮುಂಬರಲಿರುವ ಅವರ ಹೊಸ ಸಿನಿಮಾಗಳ ಒಂದಷ್ಟು ಅಪ್ಡೆàಟ್‌ ಸಿಗಲಿದೆ. ಮೂಲಗಳ ಪ್ರಕಾರ, ಶಿವಣ್ಣ ಅಭಿನಯದ ಮುಂಬರಲಿರುವ ಮೂರು-ನಾಲ್ಕು ಹೊಸ ಸಿನಿಮಾಗಳು ಅನೌನ್ಸ್‌ ಆಗಲಿದೆ. ಇದರ ಜೊತೆಗೆ ಈಗಾಗಲೇ ಚಿತ್ರೀಕರಣ ಪೂರೈಸಿರುವ “ಜೈಲರ್‌’, “ಕ್ಯಾಪ್ಟನ್‌ ಮಿಲ್ಲರ್‌’ ಸೇರಿದಂತೆ ಕೆಲ ಸಿನಿಮಾಗಳ ಸ್ಪೆಷಲ್‌ ಲುಕ್‌ ಕೂಡ ಬಿಡುಗಡೆಯಾಗುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.