ಮುಕ್ತಾಯದ ಹಂತಕ್ಕೆ ಬಂತು ಪೃಥ್ವಿ- ಅಂಕಿತಾ ನಟನೆಯ ’ಅಬ ಜಬ ದಬ’
Team Udayavani, Oct 17, 2022, 3:45 PM IST
ಮಯೂರ ರಾಘವೇಂದ್ರ ನಿರ್ದೇಶನದ, ಅನಂತ ಕೃಷ್ಣ ನಿರ್ಮಾಣದ, ಪೃಥ್ವಿ ಅಂಬರ್ ಹಾಗೂ ಅಂಕಿತಾ ಅಮರ್ ನಾಯಕ-ನಾಯಕಿಯಾಗಿ ನಟಿಸುತ್ತಿರುವ “ಅಬ ಜಬ ದಬ’ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ನಡೆಯುತ್ತಿದೆ. ಇನ್ನು ಹತ್ತು ದಿನಗಳ ಚಿತ್ರೀಕರಣವಾದರೆ ಚಿತ್ರೀಕರಣ ಮುಕ್ತಾಯವಾಗಲಿದೆ.
“”ಕನ್ನಡ್ ಗೊತ್ತಿಲ್ಲ’ ಚಿತ್ರದ ನಂತರ ನಾನು ರಚಿತಾ ರಾಮ್ ಅವರಿಗೊಂದು ಸಿನಿಮಾ ಮಾಡಬೇಕಿತ್ತು. ಅದು ದೊಡ್ಡ ಬಜೆಟ್ ನ ಚಿತ್ರವಾಗಿರುವುದರಿಂದ ಸ್ವಲ್ಪ ತಡವಾಯಿತು. ಅಷ್ಟರಲ್ಲಿ ಈ ಔಟ್ ಎಂಡ್ ಔಟ್ ಕಾಮಿಡಿಯಿರುವ ಈ ಚಿತ್ರದ ಕಥೆ ಸಿದ್ಧವಾಯಿತು. ಕಥೆಗೆ ಒಳ್ಳೆಯ ಟೈಟಲ್ ಬೇಕಿತ್ತು. ಮನೆಯಲ್ಲಿ ನನ್ನ ಅಣ್ಣ, ಅವಳ ಮಗಳಿಗೆ ಅದೇನು ಹೇಳುತ್ತಾಳ್ಳೋ ಗೊತ್ತೆ ಆಗಲ್ಲ “ಅಬ ಜಬ ದಬ’ ಅಂತಾಳೆ ಎಂದ. ನಾನು ತಕ್ಷಣ ಈ ಶೀರ್ಷಿಕೆ ಚೆನ್ನಾಗಿದೆ ಅಂತ ಅದೇ ಇಟ್ಟಿದ್ದೀನಿ. ಆನಂತರ ಸ್ನೇಹಿತ ಅನಂತ ಕೃಷ್ಣ ನಿರ್ಮಾಣಕ್ಕೆ ಮುಂದಾದರು. ಪೃಥ್ವಿ ಅಂಬರ್ – ಅಂಕಿತ ಅಮರ್ ನಾಯಕ – ನಾಯಕಿ ಅಂತ ನಿಗದಿಯಾದರು. ಅಚ್ಯುತ್ ಕುಮಾರ್, ಸುಧಾರಾಣಿ, ಹಿರಿಯ ನಟಿ ಊರ್ವಶಿ, ಬಾಬು ಹಿರಣ್ಣಯ್ಯ, ಸಂಗೀತಾ ಭಟ್ ನಮ್ಮ ಚಿತ್ರದಲ್ಲಿ ಅಭಿನಯಿಸಲು ಒಪ್ಪಿದ್ದರು. ಗಿರಿಧರ್ ದಿವಾನ್ ಛಾಯಾಗ್ರಹಣ ಮಾಡುತ್ತಿದ್ದಾರೆ. ಸಮೀರ ಸಿಂಹ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಎಲ್ಲರ ಸಹಕಾರದಿಂದ “ಅಬ ಜಬ ದಬ’ ಒಳ್ಳೆಯ ಚಿತ್ರವಾಗಿ ಹೊರಹೊಮ್ಮಲಿದೆ’ ಎಂದರು ನಿರ್ದೇಶಕ ಮಯೂರ ರಾಘವೇಂದ್ರ.
“ನನಗೆ ಮಯೂರ ರಾಘವೇಂದ್ರ ಕಥೆ ಇಷ್ಟವಾಯಿತು. ಇದು ಬರೀ ಕಾಮಿಡಿ ಸಿನಿಮಾ ಅಲ್ಲ. ಫ್ಯಾಂಟಸಿ ಕಾಮಿಡಿ ಸಿನಿಮಾ. ಚಿತ್ರದ ಹಾಡುಗಳು ಚೆನ್ನಾಗಿದೆ. ಊರ್ವಶಿ ಅವರಂತಹ ಹಿರಿಯ ನಟರೊಂದಿಗೆ ನಟಿಸಿದ್ದು ಸಂತೋಷವಾಗಿದೆ. ಚಿತ್ರದಲ್ಲಿ ನಟಿಸಿರುವ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ’ ಎನ್ನುವುದು ಪೃಥ್ವಿ ಅಂಬರ್ ಮಾತು.
“ಇದು ನಾನು ಬಣ್ಣ ಹಚ್ಚಿದ ಮೊದಲ ಚಿತ್ರ. ಪ್ರಿಯ ನನ್ನ ಪಾತ್ರದ ಹೆಸರು. ನಾನು ಈ ಚಿತ್ರದಲ್ಲಿ ಗಾಯಕಿ. ಎಸ್.ಪಿ.ಬಿ ಅವರ ಅಭಿಮಾನಿ’ ಎಂದು ತಮ್ಮ ಪಾತ್ರದ ಬಗ್ಗೆ ನಾಯಕಿ ಅಂಕಿತಾ ಅಮರ್ ಮಾಹಿತಿ ನೀಡಿದರು. ನಿರ್ಮಾಪಕ ಅನಂತ ಕೃಷ್ಣ, ಛಾಯಾಗ್ರಾಹಕ ಗಿರಿಧರ್ ದಿವಾನ್ ಹಾಗೂ ನಟ ಬಾಬು ಹಿರಣ್ಣಯ್ಯ ಚಿತ್ರದ ಕುರಿತು ಮಾತನಾಡಿದರು. ಸತೀಶ್ ರಘುನಾಥನ್ ಈ ಚಿತ್ರದ ಸಂಗೀತ ನಿರ್ದೇಶಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.