Kannada cinema; ಪೃಥ್ವಿ ಶಾಮನೂರು ಈಗ ‘ಉಡಾಳ’ ಹುಡುಗ
Team Udayavani, Feb 4, 2024, 4:30 PM IST
ಪದವಿ ಪೂರ್ವ’ ಸಿನಿಮಾದ ಮೂಲಕ ನಾಯಕ ನಟನಾಗಿ ಚಿತ್ರರಂಗಕ್ಕೆ ಪರಿಚಯವಾಗಿದ್ದ ಯುವ ನಟ ಪೃಥ್ವಿ ಶಾಮನೂರು ಈ ಬಾರಿ ಉತ್ತರ ಕರ್ನಾಟಕದ “ಉಡಾಳ’ ಹುಡುಗನಾಗಿ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ.
ಹೌದು, ಸುಮಾರು ಎರಡು ವರ್ಷಗಳ ನಂತರ ಪೃಥ್ವಿ ಶಾಮನೂರು ನಾಯಕನಾಗಿ ಅಭಿನಯಿಸುತ್ತಿರುವ ಹೊಸ ಸಿನಿಮಕ್ಕೆ “ಉಡಾಳ’ ಎಂದು ಹೆಸರಿಡಲಾಗಿದ್ದು, ಇದೀಗ ಈ ಸಿನಿಮಾದ ಟೈಟಲ್ ಅಧಿಕೃತವಾಗಿ ಅನೌನ್ಸ್ ಆಗಿದೆ. ಯೋಗರಾಜ್ ಭಟ್ ಹಾಗೂ ರವಿ ಶಾಮನೂರು ನಿರ್ಮಾಣದ “ಉಡಾಳ’ ಸಿನಿಮಾವನ್ನು ಅಮೋಲ್ ಪಾಟೀಲ್ ನಿರ್ದೇಶನ ಮಾಡುತ್ತಿದ್ದು, ಹೃತಿಕಾ ಶ್ರೀನಿವಾಸ್ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.
ಇತ್ತೀಚೆಗೆ ನಡೆದ ಸಮಾರಂಭದಲ್ಲಿ ನಟ ಡಾಲಿ ಧನಂಜಯ “ಉಡಾಳ’ ಸಿನಿಮಾದ ಟೈಟಲ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಇದೇ ವೇಳೆ ಮಾತನಾಡಿದ ನಿರ್ದೇಶಕ ಅಮೋಲ್ ಪಾಟೀಲ್, “ಇದೊಂದು ಪಕ್ಕಾ ಉತ್ತರ ಕರ್ನಾಟಕದ ಶೈಲಿಯ ಸಿನಿಮಾ. ಈ ತಿಂಗಳ ಕೊನೆಗೆ ವಿಜಯಪುರದಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಸಿನಿಮಾದ ಹೆಚ್ಚಿನ ಚಿತ್ರೀಕರಣ ಉತ್ತರ ಕರ್ನಾಟಕ ಭಾಗದಲ್ಲೇ ನಡೆಯಲಿದೆ. ಲವ್, ಆ್ಯಕ್ಷನ್ ಎಲ್ಲ ಥರದ ಮನರಂಜನಾತ್ಮಕ ಅಂಶಗಳೂ “ಉಡಾಳ’ ಸಿನಿಮಾದಲ್ಲಿದೆ’ ಎಂದು ಕಥಾಹಂದರದ ಬಗ್ಗೆ ಮಾಹಿತಿ ನೀಡಿದರು.
“ನಾನು ಈ ಸಿನಿಮಾದಲ್ಲಿ ಉತ್ತರ ಕರ್ನಾಟದ ಹುಡುಗನಾಗಿ ಪಕ್ಯ ಎಂಬ “ಉಡಾಳ’ ಹುಡುಗನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ವಿಜಯಪುರದಲ್ಲಿ ಟೂರಿಸ್ಟ್ ಗೈಡ್ ಆಗಿ ಕೆಲಸ ಮಾಡುತ್ತಿರುತ್ತೇನೆ. ಪಕ್ಯನ ಜೀವನ, ಅವನ ತರಲೆ, ತುಂಟಾಟಗಳ ಸುತ್ತ ಇಡೀ ಸಿನಿಮಾ ಸಾಗುತ್ತದೆ’ ಎಂದು ತಮ್ಮ ಪಾತ್ರದ ಬಗ್ಗೆ ವಿವರಣೆ ನೀಡಿದರು ನಾಯಕ ನಟ ಪೃಥ್ವಿ ಶಾಮನೂರು.
ವೇದಿಕೆಯಲ್ಲಿದ್ದ ನಟಿ ಹೃತಿಕಾ ಶ್ರೀನಿವಾಸ್ ತಮ್ಮ ಪಾತ್ರ ಪರಿಚಯ ಮಾಡಿ ಕೊಟ್ಟರು. ಕಾರ್ಯಕ್ರಮದಲ್ಲಿ ಹಾಜರಿದ್ದ ನಿರ್ದೇಶಕ ಯೋಗರಾಜ್ ಭಟ್, ನಿರ್ಮಾಪಕ ರವಿ ಶಾಮನೂರು, ಸಂಗೀತ ನಿರ್ದೇಶಕ ಚೇತನ್ ಹಾಗೂ ಛಾಯಾಗ್ರಾಹಕ ಶಿವಶಂಕರ್ ಮತ್ತಿತ ರರು “ಉಡಾಳ’ ಸಿನಿಮಾದ ಬಗ್ಗೆ ಒಂದಷ್ಟು ನಿರೀಕ್ಷೆಯ ಮಾತುಗಳನ್ನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.