ಪುನೀತ್ ಈಗ ಯುವರತ್ನ
Team Udayavani, Nov 3, 2018, 11:12 AM IST
“ರಾಜಕುಮಾರ’ ಚಿತ್ರದ ಬಳಿಕ ಪುನೀತ್ ರಾಜಕುಮಾರ್ ಮತ್ತು ನಿರ್ದೇಶಕ ಸಂತೋಷ್ ಆನಂದರಾಮ್ ಜೋಡಿ ಮತ್ತೂಂದು ಚಿತ್ರ ಮಾಡಲಿದ್ದಾರೆ ಎಂದು ಐದಾರು ತಿಂಗಳ ಹಿಂದೆಯೇ ಘೋಷಣೆಯಾಗಿತ್ತು. ಅದಾಗಲೇ, ಒಂದು ಹಿಟ್ ಚಿತ್ರ ಕೊಟ್ಟ ಈ ಜೋಡಿಯ ಎರಡನೇ ಚಿತ್ರ ಏನಿರಬಹುದು, ಅದರ ಶೀರ್ಷಿಕೆ ಏನು ಎಂಬ ಪ್ರಶ್ನೆಗಳು ಕಳೆದ ಕೆಲ ತಿಂಗಳಿನಿಂದ ಗಾಂಧಿನಗರದಲ್ಲಿ ಹರಿದಾಡುತ್ತಿದ್ದು, ಅದೆಲ್ಲದಕ್ಕೂ ಈಗ ಉತ್ತರ ಸಿಕ್ಕಿದೆ.
ಅಂದಹಾಗೆ, ಪುನೀತ್-ಸಂತೋಷ್ ಆನಂದರಾಮ್ ಜೋಡಿಯ ಹೊಸ ಚಿತ್ರಕ್ಕೆ “ಯುವರತ್ನ’ ಎಂಬ ಶೀರ್ಷಿಕೆ ಇಡಲಾಗಿದೆ. ಈ ಚಿತ್ರಕ್ಕೆ “ಪರಶುರಾಮ’, “ಜ್ವಾಲಾಮುಖೀ’ ಸೇರಿದಂತೆ ಇನ್ನು ಎರಡು-ಮೂರು ಹೆಸರುಗಳು ಇಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದರೂ, ಅದೆಲ್ಲವನ್ನು ಬದಿಗಿಟ್ಟು ಚಿತ್ರತಂಡ “ಯುವರತ್ನ’ ಎಂಬ ಶೀರ್ಷಿಕೆಯನ್ನೆ ಅಂತಿಮಗೊಳಿಸಿದೆ. “ರಾಜ ಕುಮಾರ’ ಚಿತ್ರವನ್ನು ನಿರ್ಮಿಸಿದ್ದ “ಹೊಂಬಾಳೆ ಫಿಲಂಸ್’ ಬ್ಯಾನರ್‌ನಲ್ಲಿ ಈ ಚಿತ್ರ ನಿರ್ಮಾಣವಾಗಲಿದ್ದು, ಚಿತ್ರದ ಉಳಿದ ಕಲಾವಿದರು, ತಂತ್ರಜ್ಞರ ಬಗ್ಗೆ ಇನ್ನಷ್ಟೇ ಮಾಹಿತಿಗಳು ಹೊರಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್ ಬಗ್ಗೆ ರಮ್ಯಾ ಮಾತು
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.