ಡಿ.6ಕ್ಕೆ ಪುನೀತ್‌ ರಾಜ್ ಕುಮಾರ್ ಡ್ರೀಮ್‌ ಪ್ರಾಜೆಕ್ಟ್ ಟೀಸರ್‌ ಬಿಡುಗಡೆ

Team Udayavani, Dec 4, 2021, 9:26 AM IST

puneethಡಿ.6ಕ್ಕೆ ಪುನೀತ್‌ ರಾಜ್ ಕುಮಾರ್ ಡ್ರೀಮ್‌ ಪ್ರಾಜೆಕ್ಟ್ ಟೀಸರ್‌ ಬಿಡುಗಡೆ

ಎಲ್ಲ ಅಂದುಕೊಂಡಂತೆ ನಡೆದಿದ್ದರೆ, ಇದೇ ನವೆಂಬರ್‌ 1ರಂದು ಪವರ್‌ಸ್ಟಾರ್‌ ಪುನೀತ್‌ ರಾಜಕುಮಾರ್‌ ತಮ್ಮ “ಪಿಆರ್‌ಕೆ ಪ್ರೊಡಕ್ಷನ್ಸ್‌’ ನಿಂದ ಮಹತ್ವದ ಘೋಷಣೆಯೊಂದನ್ನು ನೀಡುವ ಸಿದ್ಧತೆಯಲ್ಲಿದ್ದರು. ತಮ್ಮ ಪ್ರೊಡಕ್ಷನ್ಸ್‌ ನಲ್ಲಿ ಕರ್ನಾಟಕದ ಬಗ್ಗೆ ಒಂದು ಡಾಕ್ಯುಮೆಂಟರಿ ಮಾಡಿದ್ದ ಪುನೀತ್‌ ರಾಜಕುಮಾರ್‌, ತಮ್ಮ ಹೊಸ ಯೋಜನೆಯ ಅಧಿಕೃತ ಘೋಷಣೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿಯೂ ಮಾಹಿತಿಯನ್ನು ಹಂಚಿಕೊಂಡಿದ್ದರು. “ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು. ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು. ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ’ ಎಂದು ಪುನೀತ್‌ ಪೋಸ್ಟ್‌ ಮಾಡಿದ್ದರು.

ಆದರೆ ನಂತರ ನಡೆದ ವಿಧಿಯಾಟ ಬೇರೆಯದೇ ಆಗಿತ್ತು. ಪುನೀತ್‌ ರಾಜಕುಮಾರ್‌ ಅವರ ಕನಸಿನ ಘೋಷಣೆಗೂ ಮುನ್ನವೇ ಅಕಾಲಿಕ ಮೃತ್ಯು ಅವರನ್ನು ತನ್ನತ್ತ ಕರೆಸಿಕೊಂಡಿತ್ತು. ಹೀಗಾಗಿ ಪುನೀತ್‌ ರಾಜಕುಮಾರ್‌ ಅವರ “ಪಿಆರ್‌ಕೆ ಪ್ರೊಡಕ್ಷನ್ಸ್‌’ನ ಹೊಸ ಘೋಷಣೆಯನ್ನು ಎದುರು ನೋಡುತ್ತಿದ್ದ ಅಭಿಮಾನಿಗಳು, ಅವರಿಲ್ಲದ ದುಃಖವನ್ನು ಭರಿಸಬೇಕಾಯಿತು. ಆದರೆ ಪುನೀತ್‌ ರಾಜಕುಮಾರ್‌ ದೈಹಿಕವಾಗಿ ಇಲ್ಲದಿದ್ದರೂ, ಅವರ ಕನಸುಗಳನ್ನು ನನಸು ಮಾಡಲು ಪುನೀತ್‌ ರಾಜಕುಮಾರ್‌ ಕುಟುಂಬ ಮತು “ಪಿಆರ್‌ಕೆ ಪ್ರೊಡಕ್ಷನ್ಸ್‌’ ಟೊಂಕಕಟ್ಟಿ ನಿಂತಿದೆ.

ಇತ್ತೀಚೆಗೆ ಈ ಬಗ್ಗೆ ಟ್ವೀಟ್‌ ಮಾಡಿದ್ದ ಅಶ್ವಿ‌ನಿ ಪುನೀತ್‌ ರಾಜಕುಮಾರ್‌, “ಅಪ್ಪು ಅವರ ಕನಸೊಂದು 01.11.2021 ರಂದು ಬೆಳಕು ಕಾಣಬೇಕಿತ್ತು. ಆದರೆ ಅ ಕನಸಿಗಿದು ಅಲ್ಪವಿರಾಮವಷ್ಟೇ, ಅದನ್ನು ಅವರಿಷ್ಟದಂತೆಯೇ ನಿಮ್ಮೆದುರು ನನಸಾಗಿಸುವ ಜವಾಬ್ದಾರಿ ನಮ್ಮದು. ಇಲ್ಲಿಯ ತನಕ ನೀವು ತೋರಿದ ಸಂಯಮ ಮತ್ತು ಸಹಕಾರಕ್ಕೆ ನಾವು ಆಭಾರಿ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ಟೈಟಲ್‌ ಟ್ರ್ಯಾಕ್‌ನಲ್ಲಿ ರಚ್ಚು ಮೆಚ್ಚು

ಇದೀಗ ಅದರ ಭಾಗವಾಗಿ, ಪುನೀತ್‌ ರಾಜಕುಮಾರ್‌ ಪತ್ನಿ ಅಶ್ವಿ‌ನಿ ಪುನೀತ್‌ ರಾಜಕುಮಾರ್‌ “ಪಿಆರ್‌ಕೆ ಪ್ರೊಡಕ್ಷನ್ಸ್‌’ನ ಮುಂದಿನ ಪ್ರಾಜೆಕ್ಟ್‌ನ ಟೈಟಲ್‌ ಟೀಸರ್‌ ರಿಲೀಸ್‌ ದಿನಾಂಕ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಸೋಶಿಯಲ್‌ ಮೀಡಿಯಾ ಮೂಲಕ ಮಾಹಿತಿ ನೀಡಿರುವ ಅಶ್ವಿ‌ನಿ, “ಡಿಸೆಂಬರ್‌ 6ಕ್ಕೆ ಡಾಕ್ಯುಮೆಂಟರಿ ಟೈಟಲ್‌ ಟೀಸರ್‌ ರಿಲೀಸ್‌ ಮಾಡಲಾಗುತ್ತಿದೆ. ಅಪ್ಪು ಅವರ ಅಮೋಘವಾದ ಕನಸಿನ ಪಯಣ. ಹಿಂದೆಂದೂ ಕಾಣದ ರೋಮಾಂಚಕ ಅನುಭವ’ ಎಂದು ತಮ್ಮ ಪೋಸ್ಟ್‌ ನಲ್ಲಿ ಬರೆದುಕೊಂಡಿದ್ದಾರೆ.

ಅಮೋಘ ವರ್ಷ ಜತೆ ಸೇರಿ ಪುನೀತ್‌ ರಾಜಕುಮಾರ್‌ “ವೈಲ್ಡ್ ಕರ್ನಾಟಕ’ ಡಾಕ್ಯುಮೆಂಟರಿ ಸಿದ್ಧಪಡಿಸಿದ್ದರು. ರಾಜ್ಯದ ನಾನಾ ಭಾಗಗಳಲ್ಲಿ ಇದನ್ನು ಶೂಟ್‌ ಮಾಡಲಾಗಿತ್ತು. ಈ ಡಾಕ್ಯುಮೆಂಟರಿಯಲ್ಲಿ ಪುನೀತ್‌ ಕೂಡ ಇದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. “ಪಿಆರ್‌ಕೆ ಪ್ರೊಡಕ್ಷನ್ಸ್‌’ನಲ್ಲಿ ನಿರ್ಮಾಣವಾಗಿರುವ ಕರ್ನಾಟಕದ ಬಗ್ಗೆ ಇರುವ ಡಾಕ್ಯುಮೆಂಟರಿಯ ಟೈಟಲ್‌ ಟೀಸರ್‌ ಡಿ. 6ಕ್ಕೆ ರಿಲೀಸ್‌ ಆಗಲಿದೆ.  ಸದ್ಯ ಈ ವಿಚಾರ ಕೇಳಿ ಪವರ್‌ಸ್ಟಾರ್‌ ಫ್ಯಾನ್ಸ್‌ ಖುಷಿಯಾಗಿದ್ದು, ಇದರ ಬಗ್ಗೆ ಹೆಚ್ಚಿನ ಮಾಹಿತಿ ಇದೇ ಡಿ. 6ಕ್ಕೆ ಗೊತ್ತಾಗಲಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.