ಪಾದರಸ ಟೀಸರ್ ಬಿಡುಗಡೆ ಮಾಡಿದ ಪುನೀತ್
Team Udayavani, May 29, 2018, 12:03 PM IST
ಸಂಚಾರಿ ವಿಜಯ್ ಅಭಿನಯದ “ಪಾದರಸ’ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಶುಕ್ರವಾರ ಸಂಜೆ ಪುನೀತ್‌ರಾಜಕುಮಾರ್ ಅವರು ಚಿತ್ರದ ಟೀಸರ್ ಹಾಗೂ ಒಂದು ಹಾಡನ್ನು ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ನಿರ್ದೇಶಕ ಋಷಿಕೇಶ್ ಮುಖರ್ಜಿ ತಮ್ಮ ಚಿತ್ರತಂಡದ ಜೊತೆಗೆ ರಾಕ್‌ಲೈನ್ ಸ್ಟುಡಿಯೋಗೆ ತೆರಳಿ, ಅಲ್ಲಿ ಚಿತ್ರೀಕರಣದಲ್ಲಿ ನಿರತರಾಗಿದ್ದ ಪುನೀತ್ ರಾಜಕುಮಾರ್ ಅವರಿಂದ ಚಿತ್ರದ ಟೀಸರ್ ಹಾಗು ಸಂಜಯ್ ಕುಲಕರ್ಣಿ ಅವರು ಬರೆದ “ತೇಲಿ ತೇಲಿ ಹೋದೆ…’ ಹಾಡನ್ನು ಬಿಡುಗಡೆ ಮಾಡಿಸಿದ್ದಾರೆ.
ಈ ವೇಳೆ ಪುನೀತ್, “ಸಂಚಾರಿ ವಿಜಯ್ ಅವರು ರಾಷ್ಟ್ರಪ್ರಶಸ್ತಿ ವಿಜೇತರು. ಅವರಿಗೆ ಈ ಚಿತ್ರ ಕಮರ್ಷಿಯಲ್ ಹಿಟ್ ಆಗಲಿ. ಚಿತ್ರತಂಡಕ್ಕೂ ಗೆಲುವು ಸಿಗಲಿ’ ಎಂದು ಶುಭಕೋರಿದ್ದಾರೆ. ಈ ಸಂದರ್ಭದಲ್ಲಿ ನಿರ್ಮಾಪಕರಾದ ಕೃಷ್ಣ ರೇವಣ್‌ಕರ್, ಪ್ರಕಾಶ್, ಸಂಚಾರಿ ವಿಜಯ್ ಸೇರಿದಂತೆ ಚಿತ್ರತಂಡದ ಸದಸ್ಯರು ಹಾಜರಿದ್ದರು.
ಸಂಗೀತ ನಿರ್ದೇಶಕ ಎ.ಟಿ.ರವೀಶ್ ಅವರು ಚಿತ್ರಕ್ಕೆ ಆರು ಹಾಡುಗಳನ್ನು ನೀಡಿದ್ದಾರೆ. ಎಂ.ಬಿ.ಹಳ್ಳಿಕಟ್ಟೆ ಛಾಯಗ್ರಹಣವಿದೆ. ಕೆ.ಎಂ.ಪ್ರಕಾಶ್ ಅವರ ಸಂಕಲನವಿದೆ. ಸಂಚಾರಿ ವಿಜಯ್ ಅವರಿಗೆ ವೈಷ್ಣವಿ ಮೆನನ್ ನಾಯಕಿಯಾಗಿ ನಟಿಸಿದ್ದಾರೆ. ಚಿತ್ರದಲ್ಲಿ ಜಯಂತ್‌ಕಾಯ್ಕಿಣಿ ಅವರ ಸಾಹಿತ್ಯವಿದೆ. ಎಲ್ಲಾ ಅಂದುಕೊಂಡಂತೆ ನಡೆದರೆ, “ಪಾದರಸ’ ಜೂನ್‌ನಲ್ಲಿ ತೆರೆಗೆ ಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
ಹೊಸ ಸೇರ್ಪಡೆ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.