ಏಪ್ರಿಲ್‌ ಸಿನಿಮಾದಿಂದ ಹೊರಬಂದ ರಚಿತಾ

ರಮೇಶ್‌ ಅರವಿಂದ್‌ ಜೊತೆ ಹೊಸ ಚಿತ್ರ

Team Udayavani, Jun 1, 2019, 3:12 AM IST

rachitha

ನಟಿ ರಚಿತಾರಾಮ್‌ ಈಗ ಫ‌ುಲ್‌ ಬಿಜಿ ನಟಿ. ಒಂದರ ಹಿಂದೊಂದು ಚಿತ್ರಗಳನ್ನು ಒಪ್ಪಿಕೊಳ್ಳುವ ಮೂಲಕ ಸಾಲು ಸಾಲು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಈಗ ಅವರು ಕುರಿತಾದ ಹೊಸ ಸುದ್ದಿಯೆಂದರೆ, ರಚಿತಾರಾಮ್‌ ಈ ಹಿಂದೆ ಒಪ್ಪಿಕೊಂಡಿದ್ದ ಚಿತ್ರವೊಂದರಿಂದ ಹೊರಬಂದಿದ್ದಾರೆ.

ಹೌದು, “ಏಪ್ರಿಲ್‌’ ಎಂಬ ಮಹಿಳಾ ಪ್ರಧಾನ ಚಿತ್ರದಲ್ಲಿ ನಟಿಸುತ್ತಿರುವುದಾಗಿ ಸ್ವತಃ ಅವರೇ ಹೇಳಿಕೊಂಡಿದ್ದರು. ಆ ಚಿತ್ರಕ್ಕಾಗಿ ಭರ್ಜರಿ ಫೋಟೋಶೂಟ್‌ ಕೂಡ ನಡೆಸಲಾಗಿತ್ತು. ಎಲ್ಲೆಡೆ ಆ ಚಿತ್ರದ ಕುರಿತು ಸುದ್ದಿಯೂ ಆಗಿತ್ತು. ಕಾಲಕ್ರಮೇಣ ಆ ಚಿತ್ರತಂಡ ತಟಸ್ಥವಾಗಿದೆ. ಹಲವು ಕಾರಣಗಳಿಂದ ಆ ಚಿತ್ರ ಸೆಟ್ಟೇರಿಲ್ಲ.

ಹಾಗಾಗಿ, ರಚಿತಾರಾಮ್‌ ಅವರು ಸೆಟ್ಟೇರುವ ಲಕ್ಷಣಗಳು ಕಾಣದಿರುವುದರ ಹಿನ್ನೆಲೆಯಲ್ಲಿ “ಏಪ್ರಿಲ್‌’ ಚಿತ್ರದಿಂದ ಹೊರಬಂದಿರುವುದಾಗಿ ಹೇಳಿದ್ದಾರೆ. ಅದೊಂದು ಮಹಿಳಾ ಪ್ರಧಾನ ಕಥೆ ಇರುವ ಚಿತ್ರವಾಗಿದ್ದು, ಕಥೆ ಇಷ್ಟವಾಗಿದ್ದರಿಂದ ರಚಿತಾ ನಟಿಸಲು ಒಪ್ಪಿದ್ದರು. ಆದರೆ, ಸಮಯ ಮೀರಿದರೂ, ಚಿತ್ರ ಸೆಟ್ಟೇರದಿರುವ ಹಿನ್ನೆಲೆಯಲ್ಲಿ ಹೊರಬಂದಿದ್ದಾಗಿ ಅವರು “ಉದಯವಾಣಿ’ಗೆ ಸ್ಪಷ್ಟಪಡಿಸಿದ್ದಾರೆ.

ಈ ಬೆನ್ನಲ್ಲೇ ರಚಿತಾರಾಮ್‌ ಅವರು ಹೊಸ ಚಿತ್ರವನ್ನು ಒಪ್ಪಿದ್ದಾರೆ. ಅದು ರಮೇಶ್‌ ಅರವಿಂದ್‌ ನಿರ್ದೇಶನದ ಚಿತ್ರ ಎಂಬುದು ವಿಶೇಷ. ಹೌದು, “ಏಪ್ರಿಲ್‌’ ಸಿನಿಮಾದಿಂದ ಹೊರಬಂದಿರುವ ರಚಿತಾರಾಮ್‌, ಈಗ ರಮೇಶ್‌ ಅರವಿಂದ್‌ ಅವರೇ ನಿರ್ದೇಶನ ಮಾಡುತ್ತಿರುವ ಇನ್ನೂ ಹೆಸರಿಡದ ಚಿತ್ರದಲ್ಲಿ ನಟಿಸಲು ಗ್ರೀನ್‌ಸಿಗ್ನಲ್‌ ಕೊಟ್ಟಿದ್ದಾರೆ.

ಅದೂ ಕೂಡ ನಾಯಕಿ ಪ್ರಧಾನ ಕುರಿತಾದ ಕಥೆ ಆಗಿದ್ದು, ಹೊಸ ಬಗೆಯ ಕಥೆಯನ್ನು ಹೇಳುವ ಪ್ರಯತ್ನ ಮಾಡುತ್ತಿದ್ದಾರಂತೆ ರಮೇಶ್‌ ಅರವಿಂದ್‌. ಎಲ್ಲಾ ಅಂದುಕೊಂಡಂತೆ ನಡೆದರೆ ಜೂನ್‌ನಲ್ಲಿ ರಮೇಶ್‌ ಅರವಿಂದ್‌ ನಿರ್ದೇಶನದ ಹೊಸ ಚಿತ್ರದ ಚಿತ್ರೀಕರಣದಲ್ಲಿ ರಚಿತಾರಾಮ್‌ ಭಾಗವಹಿಸಲಿದ್ದಾರೆ.

ಅಂದಹಾಗೆ, ರಚಿತಾರಾಮ್‌ ಅವರು ಈ ಹಿಂದೆ ಬಿಡುಗಡೆಗೊಂಡು ಮೆಚ್ಚುಗೆ ಪಡೆದ “ಪುಷ್ಪಕ ವಿಮಾನ’ ಚಿತ್ರದಲ್ಲಿ ರಮೇಶ್‌ ಅರವಿಂದ್‌ ಅವರ ಮಗಳ ಪಾತ್ರದಲ್ಲಿ ನಟಿಸಿದ್ದರು. ಆಗ ಅವರಿಬ್ಬರ ಕಾಂಬಿನೇಷನ್‌ನಿಂದ ಚಿತ್ರ ಚೆನ್ನಾಗಿ ಮೂಡಿಬಂದಿತ್ತು.

ಅದಕ್ಕೆ ಎಲ್ಲೆಡೆಯಿಂದ ಮೆಚ್ಚುಗೆಯೂ ವ್ಯಕ್ತವಾಗಿತ್ತು. ಈಗ ರಮೇಶ್‌ ಅರವಿಂದ್‌ ಅವರೇ ರಚಿತಾರಾಮ್‌ ಅವರನ್ನು ನಿರ್ದೇಶನ ಮಾಡುತ್ತಿದ್ದಾರೆ. ಆ ಚಿತ್ರದ ಶೀರ್ಷಿಕೆ ಸೇರಿದಂತೆ ಚಿತ್ರದಲ್ಲಿ ಯಾರೆಲ್ಲಾ ಇರುತ್ತಾರೆ, ಎಲ್ಲೆಲ್ಲಿ ಚಿತ್ರೀಕರಣ ಎಂಬಿತ್ಯಾದಿ ವಿಷಯಗಳು ಹೊರಬೀಳಬೇಕಿದೆ.

ಈ ನಡುವೆ ರಚಿತಾರಾಮ್‌ ಅವರು ಹಿರಿಯ ನಿರ್ದೇಶಕ ಪಿ.ವಾಸು ಅವರ ನಿರ್ದೇಶನದ “ಆನಂದ್‌’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಶಿವರಾಜಕುಮಾರ್‌ ಚಿತ್ರದ ಹೀರೋ. ಇದೇ ಮೊದಲ ಬಾರಿಗೆ ರಚಿತಾರಾಮ್‌ ಅವರು ಶಿವರಾಜಕುಮಾರ್‌ ಜೊತೆ ನಟಿಸುತ್ತಿದ್ದಾರೆ.

ಆ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ಅದರಲ್ಲಿ ರಚಿತಾ ಬಿಜಿಯಾಗಿದ್ದಾರೆ. ಅತ್ತ, ಉಪೇಂದ್ರ ಅವರೊಂದಿಗೆ ನಟಿಸಿರುವ “ಐ ಲವ್‌ ಯು’ ಚಿತ್ರ ಜೂನ್‌ 14 ರಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ “ಐ ಲವ್‌ ಯು’ ಚಿತ್ರದ ಟ್ರೇಲರ್‌ ವೀಕ್ಷಿಸಿದ ರಚಿತಾರಾಮ್‌ ಅವರ ಅಭಿಮಾನಿಗಳು, ಅಷ್ಟೊಂದು ಬೋಲ್ಡ್‌ ಪಾತ್ರದಲ್ಲಿ ಕಾಣಿಸಿಕೊಂಡಿರುವ ಬಗ್ಗೆ ಕಾಮೆಂಟ್‌ ಮಾಡಿದ್ದರು.

ಅದನ್ನು ಗಮನಿಸಿದ ರಚಿತಾರಾಮ್‌, ಕಥೆ ಚೆನ್ನಾಗಿತ್ತು. ಪಾತ್ರಕ್ಕೆ ಪೂರಕವಾಗಿದ್ದರಿಂದ ಬೋಲ್ಡ್‌ ಆಗಿ ಕಾಣಿಸಿಕೊಂಡಿದ್ದೇನೆ. ಅಭಿಮಾನಿಗಳಿಗೆ ಇಷ್ಟ ಆಗಲ್ಲ ಅನ್ನುವುದಾದರೆ, ನಾನು ಮುಂದಿನ ದಿನಗಳಲ್ಲಿ ಆ ರೀತಿಯ ಬೋಲ್ಡ್‌ ಪಾತ್ರ ಮಾಡುವುದರಲ್ಲಿ ಅರ್ಥವಿಲ್ಲ ಎನ್ನುತ್ತಾರೆ.

ಟಾಪ್ ನ್ಯೂಸ್

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.