Sandalwood: ದರ್ಶನ್ ನಮ್ಮ ಚಿತ್ರರಂಗಕ್ಕೆ ಬೇಕು.. ʼದಾಸʼನ ಬಗ್ಗೆ ರಾಧಿಕಾ ಕುಮಾರಸ್ವಾಮಿ
Team Udayavani, Sep 5, 2024, 7:28 PM IST
ಬೆಂಗಳೂರು: ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು 3,991ರಲ್ಲಿ ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದಾರೆ.
ದರ್ಶನ್ ಬಂಧನವಾದ ಬಳಿಕ ಜೈಲಿಗೆ ತೆರಳಿ ಅವರನ್ನು ಭೇಟಿಯಾಗಿ ಸಹ ಕಲಾವಿದರು ಧೈರ್ಯ ತುಂಬಿದ್ದಾರೆ. ಇದಲ್ಲದೆ ಇತರೆ ಕಲಾವಿದರು ದರ್ಶನ್ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ.
ದರ್ಶನ್ ಅವರ ವ್ಯಕ್ತಿತ್ವ ಹಾಗೂ ಅವರು ಈ ಪ್ರಕರಣದಲ್ಲಿ ಬಂಧನವಾಗಿರುವ ಬಗ್ಗೆ ನಟಿ ರಾಧಿಕಾ ಕುಮಾರಸ್ವಾಮಿ (Radhika Kumaraswamy) ಅವರು ಮಾತನಾಡಿದ್ದಾರೆ.
‘ಮಂಡ್ಯ’, ‘ಅನಾಥರು’ಸಿನಿಮಾದಲ್ಲಿ ದರ್ಶನ್ ಅವರೊಂದಿಗೆ ನಟಿಸಿರುವ ರಾಧಿಕಾ ಖಾಸಗಿ ಸುದ್ದಿ ವಾಹಿನಿಗೆ ಕೊಟ್ಟ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿದ್ದಾರೆ.
“ದರ್ಶನ್ ಅವರ ವಿಷಯ ಮಾತನಾಡುವಾಗ ಮನಸ್ಸಿಗೆ ತುಂಬ ನೋವಾಗುತ್ತದೆ. ನಾನು ‘ಮಂಡ್ಯ’ ಮತ್ತು ‘ಅನಾಥರು’ ಸಿನಿಮಾಗಳ ಶೂಟಿಂಗ್ ಸಮಯದಲ್ಲಿ ಅವರನ್ನು ನೋಡಿದ್ದು. ಸೆಟ್ ನಲ್ಲಿ ಅವರು ಎಲ್ಲರ ಬಳಿ ಅಣ್ಣ ಬನ್ನಿ ಹೋಗಿ ಎಂದು ಗೌರವ ಕೊಟ್ಟು ಮಾತನಾಡುತ್ತಿದ್ದರು. ಅವರು ದೊಡ್ಡ ನಟವೆಂದು ಎಲ್ಲೂ ಕೂಡ ತೋರಿಸಿಕೊಳ್ಳುತ್ತಾ ಇರಲಿಲ್ಲ” ಎಂದು ಹೇಳಿದ್ದಾರೆ.
“ಈ ವಿಚಾರ ಒಮ್ಮೆಗೆ ಕೇಳಿದಾಗ ಇದನ್ನು ನಂಬೋಕೆ ಆಗಿರಲಿಲ್ಲ. ಇದು ನಿಜನಾ ಅಂಥ ಪ್ರಶ್ನೆ ಮೂಡಿತು. ಅವರ ಜೀವನದಲ್ಲಿ ಏನು ಆಗಿರುತ್ತೋ ಎನ್ನುವುದು ಅವರಿಗೆ ಮಾತ್ರ ಗೊತ್ತಿರಲು ಸಾಧ್ಯ. ಯಾರೋ ಹೇಳಿದ್ದು, ನ್ಯೂಸ್ ನಲ್ಲಿ ನೋಡಿದ್ದು ಮಾತ್ರ ನಮಗೆ ಗೊತ್ತಿರುತ್ತದೆ. ಯಾರ ಬಗ್ಗೆಯೂ ಗೊತ್ತಿಲ್ಲದೆ ನಾವು ಕಮೆಂಟ್ ಮಾಡುವುದು ತಪ್ಪು” ಎಂದು ಅವರು ಹೇಳಿದ್ದಾರೆ.
“ಪ್ರಾಮಾಣಿಕವಾಗಿ ಹೇಳಬೇಕೆಂದರೆ ದರ್ಶನ್ ಅವರು ನಮ್ಮ ಚಿತ್ರರಂಗಕ್ಕೆ ಬೇಕು. ಅವರಿಗೆ ಒಳ್ಳೆದಾಗಲಿ ಎನ್ನುವುದಷ್ಟೇ ನಾನು ಹೇಳಲು ಬಯಸುತ್ತೇನೆ. ಎಲ್ಲರ ಜೀವನದಲ್ಲಿ ಕೆಟ್ಟ ಘಟನೆಗಳು ನಡೆಯುತ್ತವೆ. ಅದನ್ನೆಲ್ಲ ನಾವು ಎದುರಿಸಿ ಮುಂದೆ ಹೋಗಬೇಕು. ಜೀವನದಲ್ಲಿ ಇರುವ ತೊಂದರೆಗಳನ್ನು ಆದಷ್ಟು ಬೇಗ ಪರಿಹರಿಸಿಕೊಂಡು ಅವರು ನಮ್ಮ ಚಿತ್ರರಂಗಕ್ಕೆ ಮರಳಿ ಬರಲಿ’ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.