ಭರ್ಜರಿಯಾಗಿ ನಡೆಯುತ್ತಿದೆ ರಾಧಿಕಾ ಕುಮಾರಸ್ವಾಮಿ ‘ಅಜಾಗೃತ’ ಶೂಟಿಂಗ್

Team Udayavani, Jul 15, 2023, 6:14 PM IST

radhika kumaraswamy

ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿ ನಟಿಸುತ್ತಿರುವ “ಅಜಾಗ್ರತ’ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಅಂದ ಹಾಗೆ, ಈ ಚಿತ್ರ ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ತಯಾರಾಗುತ್ತಿದೆ.

“ಅಜಾಗ್ರತ’ ಒಂದು ಔಟ್‌ ಆ್ಯಂಡ್‌ ಔಟ್‌ ಸೈಕಾಲಜಿಕಲ್‌ ಕ್ರೈಂ-ಥ್ರಿಲ್ಲರ್‌ ಕಥೆ ಹೊಂದಿರುವ ಸಿನಿಮಾವಾಗಿದೆ. ಕನ್ನಡದ ಜೊತೆಗೆ ತೆಲುಗು, ತಮಿಳು, ಮಲೆಯಾಳಂ, ಹಿಂದಿ ಸೇರಿದಂತೆ ಸುಮಾರು ಏಳು ಭಾಷೆಗಳಲ್ಲಿ ಈ ಸಿನಿಮಾ ತೆರೆಗೆ ತರುವ ಯೋಚನೆಯಲ್ಲಿದೆ ಚಿತ್ರತಂಡ. ಎಲ್ಲ ಭಾಷೆಗಳಿಗೂ ಒಪ್ಪುವಂತಹ ಕಥಾಹಂದ “ಅಜಾಗ್ರತ’ ಸಿನಿಮಾದಲ್ಲಿ ಇರುವುದರಿಂದ ಕನ್ನಡ ಜೊತೆಗೆ ಬೇರೆ ಭಾಷೆಗಳಲ್ಲೂ ಸಿನಿಮಾವನ್ನು ಬಿಡುಗಡೆ ಮಾಡಲು ಯೋಚನೆ ಇದೆ ಎಂಬುದು ಚಿತ್ರತಂಡದ ಮಾತು.

ಚಿತ್ರತಂಡ ನೀಡಿರುವ ಮಾಹಿತಿಯ ಪ್ರಕಾರ, “ಅಜಾಗ್ರತ’ ಒಂದು ಮಹಿಳಾ ಪ್ರಧಾನ ಕಥಾಹಂದರದ ಸಿನಿಮಾ. ಇಡೀ ಸಿನಿಮಾ ನಾಯಕಿ ರಾಧಿಕಾ ಕುಮಾರಸ್ವಾಮಿ ಅವರ ಸುತ್ತ ನಡೆಯಲಿದ್ದು, ರಾಧಿಕಾ ಕಾಣಿಸಿಕೊಳ್ಳಲಿರುವ ಪಾತ್ರಕ್ಕೂ ಕೂಡ ಅದರದ್ದೇ ಆದ ಮಹತ್ವವಿರಲಿದೆ ಎಂಬುದು ಚಿತ್ರತಂಡದ ಮಾತು.

ರವಿರಾಜ್‌ ಈ ಸಿನಿಮಾಕ್ಕೆ ಬಂಡವಾಳ ಹೂಡಿ ನಿರ್ಮಾಣ ಮಾಡುತ್ತಿದ್ದಾರೆ. ಈಗಾಗಲೇ ಅಶ್ವಿ‌ನಿ ರಾಮ್‌ ಪ್ರಸಾದ್‌ ಅವರ ಪುತ್ರ ಅರುಣ್‌ ರಾಮ್‌ ಪ್ರಸಾದ್‌ ಅಭಿನಯದ “ಘಾರ್ಗ’ ಸಿನಿಮಾವನ್ನು ನಿರ್ದೇಶಿಸಿರುವ, ಫಿಲಂ ಮೇಕಿಂಗ್‌ನಲ್ಲಿ ಎಂ. ಎಸ್ಸಿ ಪದವಿಧರರಾಗಿರುವ ಜೊತೆಗೆ ವಿಎಫ್ಎಕ್ಸ್‌ನಲ್ಲೂ ಪರಿಣತಿ ಹೊಂದಿರುವ ಯುವ ನಿರ್ದೇಶಕ ಎಂ. ಶಶಿಧರ್‌, “ಅಜಾಗ್ರತ’ ಸಿನಿಮಾಕ್ಕೆ ಆ್ಯಕ್ಷನ್‌-ಕಟ್‌ ಹೇಳುತ್ತಿದ್ದಾರೆ.

ಅಂದಹಾಗೆ, ಮಹಿಳಾ ಪ್ರಧಾನ ಕಥಾಹಂದರದ ಈ ಸಿನಿಮಾದಲ್ಲಿ ನಾಯಕ ನಟಿ ರಾಧಿಕಾ ಕುಮಾರಸ್ವಾಮಿ ಅವರೊಂದಿಗೆ ಸ್ಪರ್ಶ ರೇಖಾ, ದೇವರಾಜ್‌, ಸುಚೇಂದ್ರ ಪ್ರಸಾದ್‌, ವಿನಯಾ ಪ್ರಸಾದ್‌, ಚಿತ್ರಾ ಶೆಣೈ ಸೇರಿದಂತೆ ಕನ್ನಡದ ಹಲವು ಕಲಾವಿದರು “ಅಜಾಗ್ರತ’ ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇವರೊಂದಿಗೆ ತೆಲುಗು ಚಿತ್ರರಂಗದ ರಾವ್‌ ರಮೇಶ್‌, ಪುಷ್ಪ ಸುನಿಲ್, ರಾಘವೇಂದ್ರ ಶ್ರವಣ್‌, ಮಲೆಯಾಳಂನ ಆದಿತ್ಯ ಮೆನನ್‌, ತಮಿಳಿನ ಸಮುದ್ರ ಕಣಿ, ಜಯ್‌ ಪ್ರಕಾಶ್‌ ಮತ್ತು ಬಾಲಿವುಡ್‌ನ‌ ಶ್ರೇಯಸ್‌ ತಲಪಾಡೆ ಮೊದಲಾದವರು ಕೂಡ ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ ಎಂಬುದು ಚಿತ್ರತಂಡದ ಮಾಹಿತಿ.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

Billari; ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

vidyarthi vidyarthiniyare premier show in dubai

ದುಬೈನಲ್ಲಿ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಪ್ರೀಮಿಯರ್‌ ಶೋ

Huccha movie to be re-released with technical update

Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’

Kalki

Indian Cinema; ಕಲ್ಕಿ ಗೆಲುವಲ್ಲಿ ಸ್ಟಾರ್ ನಗು

Jigar

Jigar; ತೆರೆಗೆ ಬಂತು ಪ್ರವೀಣ್ ತೇಜ್ ನಟನೆಯ ಜಿಗರ್

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.