‘ಬಿಂಗೊ’ ಚಿತ್ರಕ್ಕೆ ರಾಗಿಣಿ ಸ್ಪೆಷಲ್ ಗೆಸ್ಟ್
Team Udayavani, Jan 31, 2023, 2:09 PM IST
“ಆರ್.ಕೆ ಸ್ಟುಡಿಯೋಸ್’ ಮತ್ತು “ಮುತರಾ ವೆಂಚರ್ಸ್’ ಲಾಂಛನದಲ್ಲಿ ಲಲಿತಾ ಸ್ವಾಮಿ ಮತ್ತು ಆರ್ ಪರಾಂಕುಶ ನಿರ್ಮಿಸುತ್ತಿರುವ, ಶಂಕರ್ ಕೋನಮಾನಹಳ್ಳಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ “ಬಿಂಗೊ’ ಚಿತ್ರದಲ್ಲಿ ರಾಗಿಣಿ ದ್ವಿವೇದಿ ಹಾಗೂ ಆರ್ ಕೆ ಚಂದನ್ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.
“ಬಿಂಗೊ’ ಚಿತ್ರ ಇತ್ತೀಚೆಗೆ ತನ್ನ ಎರಡನೇ ಹಂತದ ಚಿತ್ರೀಕರಣ ಮುಗಿಸಿದೆ. ಬೆಂಗಳೂರಿನಲ್ಲಿ ಇಪ್ಪತ್ತಕ್ಕೂ ಅಧಿಕ ದಿನಗಳ ಕಾಲ ಚಿತ್ರೀಕರಣ ನಡೆದಿದ್ದು, ನಾಯಕ ಆರ್ ಕೆ ಚಂದನ್, ನಾಯಕಿ ರಕ್ಷಾ ನಿಂಬರ್ಗಿ, ರಾಜೇಶ್ ನಟರಂಗ, ಪವನ್, ಮುರಳಿ ಪೂರ್ವಿಕ್, ಅಪೂರ್ವ, ಆಶಾ ಸುಜಯ್, ಶ್ರವಣ್ ಮುಂತಾದವರು ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ:ಇವರಿಗೆ ಪಕ್ಷದಲ್ಲಿ ಚುನಾವಣೆ ಸಮಿತಿ ಇಲ್ಲವೇ: ಭವಾನಿ ರೇವಣ್ಣ ವಿಚಾರಕ್ಕೆ ಈಶ್ವರಪ್ಪ ವ್ಯಂಗ್ಯ
“ಈ ಚಿತ್ರದಲ್ಲಿ ರಾಗಿಣಿ ದ್ವಿವೇದಿ ಅವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಎರಡು ಶೇಡ್‌ಗಳಲ್ಲಿ ಅವರ ಪಾತ್ರವಿರುತ್ತದೆ. ಫೆಬ್ರವರಿಯಲ್ಲಿ ಮೂರನೇ ಹಂತದ ಚಿತ್ರೀಕರಣ ಆರಂಭವಾಗಲಿದ್ದು, ರಾಗಿಣಿ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ. ಕಿರುತೆರೆ ಹಿನ್ನೆಲೆಯಿಂದ ಬಂದಿರುವ ಆರ್ ಕೆ ಚಂದನ್ ಈ ಚಿತ್ರದ ಮೂಲಕ ನಾಯಕನಾಗಿ ಹಿರಿತೆರೆ ಪ್ರವೇಶಿಸುತ್ತಿದ್ದಾರೆ. ರಕ್ಷ ನಿಂಬರ್ಗಿ ನಾಯಕಿ. ರಾಜೇಶ್ ನಟರಂಗ, ಮಜಾಟಾಕೀಸ್ ಪವನ್ ಅವರಂತಹ ಅನುಭವಿ ಕಲಾವಿದರು ಬಿಂಗೋ ಚಿತ್ರದಲ್ಲಿದ್ದಾರೆ’ ಎಂದು ನಿರ್ದೇಶಕ ಶಂಕರ್ ಕೋನಮಾನಹಳ್ಳಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.