ಶೀಲ ನಂಬಿದ ರಾಗಿಣಿ
Team Udayavani, Aug 2, 2023, 2:44 PM IST
ನಟಿ ರಾಗಿಣಿ ದ್ವಿವೇದಿ ಅಭಿನಯದ “ಶೀಲ’ ಸಿನಿಮಾ ಇದೇ ಆಗಸ್ಟ್ 4ರಂದು ತೆರೆಗೆ ಬರುತ್ತಿದೆ. ಕನ್ನಡ ಮತ್ತು ಮಲೆಯಾಳಂ ಎರಡೂ ಭಾಷೆಗಳಲ್ಲಿ ಏಕಕಾಲಕ್ಕೆ “ಶೀಲ’ ಸಿನಿಮಾ ನಿರ್ಮಿಸಲಾಗಿದ್ದು, ಕೆಲ ದಿನಗಳ ಹಿಂದಷ್ಟೇ ಮಲೆಯಾಳಂ ಲ್ಲಿ “ಶೀಲ’ ಸಿನಿಮಾ ತೆರೆಕಂಡು ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ವಾರ ಕನ್ನಡದಲ್ಲೂ “ಶೀಲ’ ಸಿನಿಮಾವನ್ನು ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ.
ಸದ್ಯ “ಶೀಲ’ ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರತಂಡ, ಇತ್ತೀಚೆಗೆ ಸಿನಿಮಾದ ಕನ್ನಡ ಟ್ರೇಲರ್ ಮತ್ತು ಲಿರಿಕಲ್ ವಿಡಿಯೋ ಹಾಡನ್ನು ಬಿಡುಗಡೆ ಮಾಡಿದೆ. ನಟಿ ಪ್ರಿಯಾಂಕಾ ಉಪೇಂದ್ರ “ಶೀಲ’ ಸಿನಿಮಾದ ಟ್ರೇಲರ್ ಮತ್ತು ಲಿರಿಕಲ್ ವಿಡಿಯೋ ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ಹಾಜರಿದ್ದು ಚಿತ್ರತಂಡಕ್ಕೆ ಶುಭ ಹಾರೈಸಿದರು.
ಇದೇ ವೇಳೆ ಮಾತನಾಡಿದ ನಟಿ ರಾಗಿಣಿ ದ್ವಿವೇದಿ, “ಇದೊಂದು ಸಂಪೂರ್ಣ ಮಹಿಳಾ ಪ್ರಧಾನ ಸಿನಿಮಾ. ಪ್ರಸ್ತುತ ಹೆಣ್ಣುಮಕ್ಕಳು ದಿನನಿತ್ಯ ಸಮಾಜದಲ್ಲಿ ಎದುರಿಸುತ್ತಿರುವ ವಿಷಯಗಳು, ಅನುಭವಿಸುತ್ತಿರುವ ಹಲವು ಸಮಸ್ಯೆಗಳ ಸುತ್ತ ಈ ಸಿನಿಮಾದ ಕಥೆ ಹೆಣೆಯಲಾಗಿದೆ. ಹೆಣ್ಣೊಬ್ಬಳು ಸಮಯ ಬಂದರೆ ದಶಾವತಾರ ತಾಳುತ್ತಾಳೆ ಎಂಬುದನ್ನು ಸಿನಿಮಾದಲ್ಲಿ ಹೇಳಲಾಗಿದೆ’ ಎಂದು ಕಥಾಹಂದರ ತೆರೆದಿಟ್ಟರು.
“ಎಲ್ಲರಿಗೂ ಇಷ್ಟವಾಗುವಂತ ಸಿನಿಮಾ. ನಿಮ್ಮ ಶಕ್ತಿ ನಿಮ್ಮೊಳಗಿದೆ ಎಂಬುದನ್ನು ಸಿನಿಮಾದಲ್ಲಿ ಹೇಳಿದ್ದೇವೆ. ರಾಗಿಣಿ ಇಡೀ ಸಿನಿಮಾವನ್ನು ತುಂಬ ಚೆನ್ನಾಗಿ ನಿಭಾಯಿಸಿದ್ದಾರೆ’ ಎಂದರು ನಿರ್ಮಾಪಕ ಡಿ. ಎಂ ಪಿಳ್ಳೆ.
ಬಾಲು ನಾರಾಯಣನ್ ನಿರ್ದೇಶಿಸಿದ್ದು. ಅವಿನಾಶ್, ಶೋಭರಾಜ್, ಚಿತ್ರಾ ಶೆಣೈ, ಮಹೇಶ್ ನಾಯರ್, ಶ್ರೀಪತಿ, ರಿಯಾಜ್ ಖಾನ್, ಅಬೆ ಡೇವಿಡ್, ಆರತಿ ಗೋಪಾಲ್ ಮುಂತಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಆಗಸ್ಟ್ 4 ರಂದು ರಾಜ್ಯದ 100ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.