ಹಾಟ್ ಕಾರ್ಪೋರೆಟ್ ಲುಕ್‌ನಲ್ಲಿ ರಾಗಿಣಿ
Team Udayavani, Nov 11, 2019, 10:33 AM IST
ಇತ್ತೀಚೆಗಷ್ಟೇ “ಅಧ್ಯಕ್ಷ ಇನ್ ಅಮೆರಿಕಾ’ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದ ನಟಿ ರಾಗಿಣಿ ದ್ವಿವೇದಿ, ಈಗ ಮತ್ತೂಂದು ವಿಭಿನ್ನ ಪಾತ್ರದಲ್ಲಿ ಅಭಿಮಾನಿಗಳ ಮುಂದೆ ಬರೋದಕ್ಕೆ ರೆಡಿಯಾಗುತ್ತಿದ್ದಾರೆ.
ಹೌದು, ರಾಗಿಣಿ ಅಭಿನಯದ ಹೊಸ ಚಿತ್ರದ ತೆರೆಮರೆಯ ಕೆಲಸಗಳು ಆರಂಭವಾಗಿದ್ದು, ಈ ಚಿತ್ರವನ್ನು ಪ್ರಕಾಶ್ ಬೆಳವಾಡಿ ನಿರ್ದೇಶಿಸುತ್ತಿದ್ದಾರೆ. ಅಂದಹಾಗೆ, ಈ ಚಿತ್ರದಲ್ಲಿ ರಾಗಿಣಿ ಅಮೆರಿಕಾದಲ್ಲಿ ದೊಡ್ಡ ಕಾರ್ಪೋರೆಟ್ ಕಂಪೆನಿಯನ್ನು ಮುನ್ನೆಡೆಸುವ ಉದ್ಯಮಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಇನ್ನು ಈ ಚಿತ್ರದ ಬಹುತೇಕ ಚಿತ್ರೀಕರಣ ಅಮೆರಿಕಾದಲ್ಲಿಯೇ ನಡೆಯಲಿದ್ದು, ಎಲ್ಲ ಅಂದುಕೊಂಡಂತೆ ನಡೆದರೆ, ಮುಂದಿನ ವರ್ಷದ ಏಪ್ರಿಲ್ ತಿಂಗಳಿನಿಂದ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ.
ಸದ್ಯ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ಈ ಚಿತ್ರದ ಟೈಟಲ್, ರಾಗಿಣಿ ಅವರ ಜೊತೆ ಅಭಿನಯಿಸಲಿರುವ ಇತರೆ ಕಲಾವಿದರು ಮತ್ತು ತಂತ್ರಜ್ಞರ ಬಗ್ಗೆ ಮಾಹಿತಿಗಳು ಇನ್ನಷ್ಟೇ ಹೊರಬೀಳಬೇಕಿದೆ. ಇನ್ನು ಈ ಚಿತ್ರದ ಬಗ್ಗೆ ಮಾತನಾಡುವ ರಾಗಿಣಿ, “ಇಲ್ಲಿಯವರೆಗೆ ನಾನು ಅಭಿನಯಿಸಿದ ಪಾತ್ರಗಳಿಗಿಂತ ವಿಭಿನ್ನವಾದ ಪಾತ್ರ ಈ ಚಿತ್ರದಲ್ಲಿದೆ. ವಿದೇಶದಲ್ಲಿ ನಡೆದ ಮತ್ತು ಜಗತ್ತಿನ ಗಮನವನ್ನು ಸೆಳೆದ ನೈಜ ಘಟನೆಯೊಂದನ್ನು ಆಧರಿಸಿ ಈ ಚಿತ್ರ ಮಾಡಲಾಗುತ್ತಿದೆ. ಚಿತ್ರದ ಕಥೆ ಮತ್ತು ನನ್ನ ಪಾತ್ರ ಎರಡೂ ಹೊಸತಾಗಿದೆ. ಇದಕ್ಕಿಂತ ಹೆಚ್ಚಾಗಿ ಈ ಚಿತ್ರದ ಬಗ್ಗೆ ಈಗಲೇ ಏನೂ ಹೇಳಲಾರೆ’ ಎನ್ನುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ
Commission: 60 ಪರ್ಸೆಂಟ್ ಕಮಿಷನ್: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.