ರೈನ್‌ಬೋ ಮುಂದಕ್ಕೆ …
ಅಜೇಯ್- ಗುರು ಹೊಸ ಸಿನಿಮಾ
Team Udayavani, Mar 11, 2020, 7:03 AM IST
ಇತ್ತೀಚೆಗಷ್ಟೇ ಗುರು ದೇಶಪಾಂಡೆ ನಿರ್ಮಾಣದ, ಪ್ರಜ್ವಲ್ ದೇವರಾಜ್ ನಾಯಕನಾಗಿ ಅಭಿನಯಿಸಿದ್ದ “ಜಂಟಲ್‌ಮನ್’ ಚಿತ್ರ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಇದರ ಬೆನ್ನಲ್ಲೆ ನಿರ್ದೇಶಕ ಕಂ ನಿರ್ಮಾಪಕ ಗುರು ದೇಶಪಾಂಡೆ ಸದ್ದಿಲ್ಲದೆ ಮತ್ತೂಂದು ಚಿತ್ರವನ್ನು ಶುರು ಮಾಡುವ ಆಲೋಚನೆಯಲ್ಲಿದ್ದಾರೆ. ಅಂದಹಾಗೆ, ಕಳೆದ ವರ್ಷವೇ ಗುರು ದೇಶಪಾಂಡೆ ನಿರ್ಮಾಣದಲ್ಲಿ ಅಜೇಯ್ ರಾವ್ ಮತ್ತು ಮಾನ್ವಿತಾ ಕಾಮತ್ ಜೋಡಿಯಾಗಿ ಅಭಿನಯಿಸಬೇಕಿದ್ದ “ರೈನ್ ಬೋ’ ಚಿತ್ರ ಸೆಟ್ಟೇರಿತ್ತು.
ಆದರೆ ಕೆಲ ಕಾರಣಗಳಿಂದ ಆ ಚಿತ್ರ ಮುಂದಕ್ಕೆ ಹೋಗಿದ್ದು, ಈಗ ಗುರುದೇಶಪಾಂಡೆ, ಅಜೇಯ್ ರಾವ್ ಜೊತೆ ಮತ್ತೂಂದು ಹೊಸ ಚಿತ್ರ ಮಾಡುವ ತಯಾರಿಯಲ್ಲಿದ್ದಾರೆ. ಇನ್ನೂ ಹೆಸರಿಡದ ಈ ಚಿತ್ರಕ್ಕೆ ಸ್ವತಃ ಗುರು ದೇಶಪಾಂಡೆ ಅವರೇ ಕಥೆ, ಚಿತ್ರಕಥೆ ಬರೆದು ನಿರ್ಮಾಣವನ್ನೂ ಮಾಡುತ್ತಿದ್ದಾರೆ. ನಿರ್ದೇಶಕ ಇನ್ನೂ ಅಂತಿಮವಾಗಿಲ್ಲ. ಅವರೇ ಮಾಡುವ ಸಾಧ್ಯತೆ ಇದೆ.
ಸದ್ಯಕ್ಕೆ ಈ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ಜೋರಾಗಿಯೇ ನಡೆಯುತ್ತಿದ್ದು, ಇದೇ ಯುಗಾದಿಯ ವೇಳೆಗೆ ಚಿತ್ರದ ಮುಹೂರ್ತ ನಡೆಯಲಿದೆ. ಏಪ್ರಿಲ್ ಎರಡನೇ ವಾರದಿಂದ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ತಮ್ಮ ಹೊಸಚಿತ್ರದ ಬಗ್ಗೆ ಮಾತನಾಡುವ ನಿರ್ಮಾಪಕ ಕಂ ನಿರ್ದೇಶಕ ಗುರು ದೇಶಪಾಂಡೆ, “ಒಬ್ಬ ಮಧ್ಯಮ ವರ್ಗದ ಹುಡುಗ ಏನೆಲ್ಲ ಸಮಸ್ಯೆ, ಸವಾಲುಗಳನ್ನು ಎದುರಿಸಿ ಸೆಲೆಬ್ರಿಟಿ ಆಗುತ್ತಾನೆ ಅನ್ನೋದು ಚಿತ್ರದ ಕಥೆಯ ಒಂದು ಎಳೆ.
2000 ದಿಂದ 2020ರವರೆಗೆ ಮಧ್ಯಮ ವರ್ಗದಿಂದ ಬಂದು ಯಾರೆಲ್ಲ ಸ್ಟಾರ್, ಸೆಲೆಬ್ರಿಟಿಗಳು ಆಗಿದ್ದಾರೋ ಅವರೆಲ್ಲರನ್ನೂ ನೆನಪಿಸುವಂಥ ಸಿನಿಮಾ ಇದಾಗಲಿದೆ’ ಎನ್ನುತ್ತಾರೆ ಅವರು. ಈ ಚಿತ್ರಕ್ಕೆ ಅಜೆಯ್ ರಾವ್ ಮಾತ್ರ ನಾಯಕನಾಗಿ ಆಯ್ಕೆಯಾಗಿದ್ದು, ಅಜೆಯ್ ರಾವ್ ಚಿತ್ರದಲ್ಲಿ ಮೂರು ವಿಭಿನ್ನ ಗೆಟಪ್‌ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಉಳಿದಂತೆ ಚಿತ್ರದ ನಾಯಕಿ, ಇತರ ಕಲಾವಿದರು ಮತ್ತು ತಂತ್ರಜ್ಞರ ಬಗ್ಗೆ ಹೆಚ್ಚಿನ ಮಾಹಿತಿಗಳು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.