Raj B Shetty; ರಕ್ಕಸಪುರದಲ್ಲಿ ರಾಜ ವೈಭವ

Team Udayavani, Aug 19, 2024, 11:37 AM IST

Raj B Shetty; ರಕ್ಕಸಪುರದಲ್ಲಿ ರಾಜ ವೈಭವ

ರಾಜ್‌ ಬಿ ಶೆಟ್ಟಿ  (Raj B Shetty) ಸದ್ದಿಲ್ಲದೇ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ಚಿತ್ರಕ್ಕೆ “ರಕ್ಕಸಪುರದೋಳ್‌’ (Rakkasapuradol) ಎಂಬ ಟೈಟಲ್‌ ಇಡಲಾಗಿದೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ನಡೆಯಿತು.

ನಟಿ ರಕ್ಷಿತ ಹಾಗೂ ನಿರ್ದೇಶಕ ಪ್ರೇಮ್‌ ಚಿತ್ರದ ಮೊದಲ ಸನ್ನಿವೇಶಕ್ಕೆ ಚಾಲನೆ ನೀಡಿ, ಶೀರ್ಷಿಕೆ ಅನಾವರಣ ಮಾಡಿದರು. ಸಾಹಸ ನಿರ್ದೇಶಕ ರವಿವರ್ಮ ನಿರ್ಮಾಣದ ಈ ಚಿತ್ರವನ್ನು ರವಿ ಸಾರಂಗ ನಿರ್ದೇಶನ ಮಾಡುತ್ತಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ರಾಜ್‌ ಬಿ ಶೆಟ್ಟಿ, “ರಕ್ಕಸಪುರದೋಳ್‌ ಚಿತ್ರದ ಕಥೆ ತುಂಬಾ ಚೆನ್ನಾಗಿದೆ. ಜನರನ್ನು ಚಿತ್ರಮಂದಿರಕ್ಕೆ ಕರೆತರಲು ಬೇಕಾಗಿರುವಂತಹ ಕಥೆಯನ್ನು ನಿರ್ದೇಶಕ ರವಿ ಮಾಡಿಕೊಂಡಿದ್ದಾರೆ. ನಾನು ಪೊಲೀಸ್‌ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಹಿಂದಿನ ಚಿತ್ರಗಳಿಗಿಂತ ಭಿನ್ನ ಪಾತ್ರ’ ಎಂದರು.

“ಕಳೆದ ಹತ್ತು ವರ್ಷಗಳಿಂದ ಪ್ರೇಮ್‌ ಅವರ ಬಳಿ ಕಥೆ, ಚಿತ್ರಕಥೆ ಹಾಗೂ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಅವರ ಸಹಕಾರ ನನಗೆ ಎಂದಿಗೂ ಇರುತ್ತದೆ. ರಕ್ಕಸ ಎಂದರೆ ರಾಕ್ಷಸ. ಪುರ ಎಂದರೆ ಊರು. ರಾಕ್ಷಸರೇ ಇರುವ ಊರು ಎಂಬುದು ಈ ಶೀರ್ಷಿಕೆಯ ಅರ್ಥ. ಮನುಷ್ಯನಲ್ಲಿ ಎರಡು ಗುಣಗಳಿರುತ್ತದೆ. ಒಂದು ಒಳ್ಳೆಯದು. ಮತ್ತೂಂದು ಕೆಟ್ಟದ್ದು. ಆ ಕೆಟ್ಟ ಗುಣಗಳನ್ನು ರಕ್ಕಸ ಎನ್ನಬಹುದು. ನಿರ್ಮಾಪಕ ರವಿವರ್ಮ ಹಾಗೂ ನಾಯಕ ರಾಜ್‌ ಬಿ ಶೆಟ್ಟಿ ಅವರು ಕಥೆ ಮೆಚ್ಚಿಕೊಂಡದ್ದು ಸಂತೋಷವಾಗಿದೆ. ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ’ ಎಂದರು ನಿರ್ದೇಶಕ ರವಿ ಸಾರಂಗ.

ನಿರ್ಮಾಪಕ ರವಿವರ್ಮ ಮಾತನಾಡಿ, “ಸಾಹಸ ನಿರ್ದೇಶಕನಾಗಿ ನನಗೆ ಎಲ್ಲರೂ ಪ್ರೋತ್ಸಾಹ ನೀಡಿದ್ದೀರಿ. ನಿರ್ಮಾಪಕನಾಗಿ ಇದು ಮೊದಲ ಚಿತ್ರ. ರವಿ ಸಾರಂಗ ಒಳ್ಳೆಯ ಕಥೆ ಮಾಡಿದ್ದಾರೆ. ರಾಜ್‌ ಬಿ ಶೆಟ್ಟಿ ಆ ಕಥೆಯನ್ನು ಒಪ್ಪಿ ನಟಿಸುತ್ತಿದ್ದಾರೆ. ಅರ್ಜುನ್‌ ಜನ್ಯ ಸಂಗೀತ ನಿರ್ದೇಶನ, ವಿಲಿಯಂ ಡೇವಿಡ್‌ ಛಾಯಾಗ್ರಹಣ, ಕೆ.ಎಂ.ಪ್ರಕಾಶ್‌ ಸಂಕಲನ, ಮೋಹನ್‌ ಬಿ ಕೆರೆ ಕಲಾ ನಿರ್ದೇಶನವಿರುವ ಹಾಗೂ ನರಸಿಂಹ ಜಾಲಹಳ್ಳಿ ಅವರ ನಿರ್ಮಾಣ ನಿರ್ವಹಣೆ ಇದೆ. ಒಂದೊಳ್ಳೆ ಚಿತ್ರ ನಿರ್ಮಾಣ ಮಾಡುತ್ತಿರುವ ಖುಷಿಯಿದೆ’ ಎಂದರು.

ಚಿತ್ರದಲ್ಲಿ ಸ್ವಾತಿಷ್ಟ ಕೃಷ್ಣ ನಾಯಕಿ. ಉಳಿದತೆ ಬಿ.ಸುರೇಶ್‌, ನಟಿ ಅರ್ಚನಾ ಕೊಟ್ಟಿಗೆ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.