ಕಂಠೀರವ ಸ್ಟುಡಿಯೋದಲ್ಲಿ ರಾಜ್‌ ಹಬ್ಬ


Team Udayavani, Apr 24, 2018, 4:48 PM IST

Dr-Raj-Birthday-2.jpg

ಅಲ್ಲಿ ಎತ್ತ ನೋಡಿದರೂ ಹಬ್ಬದ ಸಂಭ್ರಮ. ರಾರಾಜಿಸುತ್ತಿದ್ದ ಭಾವಚಿತ್ರಗಳು, ಸಾಲುಗಟ್ಟಿದ್ದ ಜನಜಂಗುಳಿ. ಮುಗಿಲು ಮುಟ್ಟಿದ್ದ ಜೈಕಾರ, ಕೈಯಲ್ಲಿ ತರಹೇವಾರಿ ಹೂವು, ಹಾರಗಳು, ಇವೆಲ್ಲದರ ಜತೆಗೆ ಕಣ್ತುಂಬಿಕೊಂಡ ಮನಸುಗಳು…

ಇದೆಲ್ಲಾ ಕಂಡು ಬಂದದ್ದು ಕಂಠೀರವ ಸ್ಟುಡಿಯೋದಲ್ಲಿ. ಏಪ್ರಿಲ್‌ 24 ಅಂದರೆ, ಅದು ಡಾ.ರಾಜಕುಮಾರ್‌ ಅವರ ಅಭಿಮಾನಿಗಳ ಪಾಲಿಗೆ ನಾಡ ಹಬ್ಬವಿದ್ದಂತೆ. ಮಂಗಳವಾರ ನಡೆದ ವರನಟ ಡಾ.ರಾಜಕುಮಾರ್‌ ಅವರ 90ನೇ ಹುಟ್ಟು ಹಬ್ಬದ ಸಂದರ್ಭದಲ್ಲಿ ಅಭಿಮಾನಿಗಳದ್ದೇ ಕಾರುಬಾರು.

ಹಾಗಾಗಿ, ಅವರ ಸಮ್ಮುಖದಲ್ಲೇ ಸ್ಮಾರಕ ಬಳಿ, ಡಾ.ರಾಜಕುಮಾರ್‌ ಕುಟುಂಬ ವಿಶೇಷ ಪೂಜೆ ಸಲ್ಲಿಸುವ ಮೂಲಕ ಜನ್ಮದಿನ ಆಚರಿಸಿತು. ಬೆಳಗ್ಗೆ ಡಾ. ರಾಜಕುಮಾರ್‌ ಅವರ ಸ್ಮಾರಕ ಬಳಿ ಆಗಮಿಸಿದ ಶಿವರಾಜ್‌ಕುಮಾರ್‌, ರಾಘವೇಂದ್ರ ರಾಜ್‌ಕುಮಾರ್‌, ಪುನೀತ್‌ ರಾಜಕುಮಾರ್‌ ಹಾಗೂ ಕುಟುಂಬ ವರ್ಗ ರಾಜಕುಮಾರ್‌ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿತು.

ನಂತರ ಜ್ಯೋತಿ ಬೆಳಗಿಸಿ ನಮಿಸಿದರು. ಈ ವೇಳೆ ಎಸ್‌.ಎ. ಗೋವಿಂದರಾಜು, ಲಕ್ಷ್ಮೀ, ಸಾಹಿತಿ ಬರಗೂರು ರಾಮಚಂದ್ರಪ್ಪ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು, ನಟ ಬಾಲರಾಜು, ನಿರ್ಮಾಪಕ ಕೆ.ಪಿ. ಶ್ರೀಕಾಂತ್‌, ವಾಸು, ಬಾಲರಾಜ್‌, ರಘುರಾಮ್‌ ಸೇರಿದಂತೆ ಅನೇಕರು ಹಾಜರಿದ್ದು, ರಾಜ್‌ ಸ್ಮಾರಕಕ್ಕೆ ನಮನ ಸಲ್ಲಿಸಿದರು.

ಪಕ್ಕದ್ದಲ್ಲೇ ಇದ್ದ ಪಾರ್ವತಮ್ಮ ರಾಜಕುಮಾರ್‌ ಸಮಾಧಿಗೂ ಈ ವೇಳೆ ಪೂಜೆ ಸಲ್ಲಿಸಲಾಯಿತು. ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಇರುವುದರಿಂದ ಈ ವೇಳೆ ಅನ್ನಸಂತರ್ಪಣೆ ಕಾರ್ಯಕ್ರಮ ಇರಲಿಲ್ಲ. ಆದರೆ, ಪ್ರತಿ ವರ್ಷದಂತೆ ಈ ವರ್ಷವೂ ರಾಜ್‌ ಕುಟುಂಬ, ಆಗಮಿಸಿದ್ದ ಸಾವಿರಾರು ಅಭಿಮಾನಿಗಳಿಗೆ ಸಿಹಿ ವಿತರಿಸಿತು.

ಸಿಹಿ ಸ್ವೀಕರಿಸಿದ ಅಭಿಮಾನಿಗಳು, ರಾಜಕುಮಾರ್‌ ಅವರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿ, ಜೈಕಾರ ಹಾಕಿದ್ದಲ್ಲದೆ, ಕೆಲವರು ಅಣ್ಣಾವ್ರ ಫೋಟೋ ಹಿಡಿದು, ಸ್ಮಾರಕದ ಎದುರು ನಮಸ್ಕರಿಸಿದರು. ಈ ವೇಳೆ ಚಿತ್ರರಂಗದ ಅನೇಕ ನಟ, ನಟಿಯರು, ನಿರ್ಮಾಪಕ, ನಿರ್ದೇಶಕರುಗಳು ಮತ್ತು ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಅಣ್ಣಾವ್ರ ಆಶೀರ್ವಾದ ಪಡೆದ ವಧು-ವರ: ಈ ಬಾರಿಯ ರಾಜಕುಮಾರ್‌ ಹುಟ್ಟುಹಬ್ಬದಲ್ಲಿ ಒಂದು ವಿಶೇಷವಿತ್ತು. ಮದುವೆಗೆ ತಯಾರಾಗಿದ್ದ ನವ ವಧು-ವರ ಇಬ್ಬರು ಕಲ್ಯಾಣ ಮಂಟಪಕ್ಕೆ ಹೋಗುವ ಮುನ್ನ, ಕಂಠೀರವ ಸ್ಟುಡಿಯೋಗೆ ಆಗಮಿಸಿ, ಡಾ.ರಾಜಕುಮಾರ್‌ ಸಮಾಧಿಗೆ ನಮಸ್ಕರಿಸಿ, ಅಣ್ಣಾವ್ರ ಆಶೀರ್ವಾದ ಪಡೆದರು.  

ಈ ವೇಳೆ, ಶಿವರಾಜಕುಮಾರ್‌ ಕೂಡ ನೂತನ ವಧು-ವರರಿಗೆ ಶುಭ ಹಾರೈಸಿದ್ದು ವಿಶೇಷವಾಗಿತ್ತು. ಇನ್ನು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲೂ ಮಂಗಳವಾರ ಬೆಳಗ್ಗೆ ಡಾ.ರಾಜಕುಮಾರ್‌ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು.

ಮಂಡಳಿಯ ಎದುರು ಇರುವ ರಾಜ್‌ ಪ್ರತಿಮೆಗೆ ಹೂವಿನ ಹಾರ ಹಾಕುವ ಮೂಲಕ ಜನ್ಮದಿನವನ್ನು ಆಚರಿಸಲಾಯಿತು. ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು ಹಾಗೂ ಮಂಡಳಿ ಪದಾಧಿಕಾರಿಗಳು ಹಾಜರಿದ್ದರು. ರಾಜಕುಮಾರ್‌ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮಂಗಳವಾರ ಶಿವರಾಜಕುಮಾರ್‌ ಅಭಿನಯದ “ರುಸ್ತುಂ’ ಚಿತ್ರಕ್ಕೆ ಮುಹೂರ್ತವೂ ನೆರವೇರಿತು.

ಈ ಚಿತ್ರವನ್ನು ಸಾಹಸ ನಿರ್ದೇಶಕ ರವಿವರ್ಮ ನಿರ್ದೇಶಿಸುತ್ತಿದ್ದಾರೆ. ಇದೇ ದಿನ ವಿನಯರಾಜಕುಮಾರ್‌ ಅವರ “ಅಪ್ಪ ಅಮ್ಮ ಪ್ರೀತಿ’ ಎಂಬ ಹೊಸ ಚಿತ್ರಕ್ಕೂ ಮುಹೂರ್ತ ನೆರವೇರಿತು. ಈ ಚಿತ್ರಕ್ಕೆ ಶ್ರೀಧರ್‌ ನಿರ್ದೇಶಕರು.

ಟಾಪ್ ನ್ಯೂಸ್

Marsh-webster

Border-Gavaskar Trophy: ಮಿಚೆಲ್‌ ಮಾರ್ಷ್‌ ಗಾಯಾಳು; ವೆಬ್‌ಸ್ಟರ್‌ ಬ್ಯಾಕಪ್‌ ಆಟಗಾರ

Bajarang-Poonia

Doping Test: ಕುಸ್ತಿಪಟು ಬಜರಂಗ್‌ ಪೂನಿಯಾಗೆ ನಾಲ್ಕು ವರ್ಷ ನಿಷೇಧ

ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

MNG-Falnir

Mangaluru: ಬೊಲೆರೋ ವಾಹನಕ್ಕೆ ಆಕಸ್ಮಿಕ‌ ಬೆಂಕಿ

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TAMATE MOVIE: ಟೀಸರ್‌ನಲ್ಲಿ ತಮಟೆ ಸದ್ದು

TAMATE MOVIE: ಟೀಸರ್‌ನಲ್ಲಿ ತಮಟೆ ಸದ್ದು

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

75752

Max Movie: ಅಂತೂ ಬಂದೇ ಬಿಡ್ತು ʼಮ್ಯಾಕ್ಸ್‌ʼ ರಿಲೀಸ್‌ ಡೇಟ್..‌ ಫ್ಯಾನ್ಸ್‌ ಖುಷ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Marsh-webster

Border-Gavaskar Trophy: ಮಿಚೆಲ್‌ ಮಾರ್ಷ್‌ ಗಾಯಾಳು; ವೆಬ್‌ಸ್ಟರ್‌ ಬ್ಯಾಕಪ್‌ ಆಟಗಾರ

Bajarang-Poonia

Doping Test: ಕುಸ್ತಿಪಟು ಬಜರಂಗ್‌ ಪೂನಿಯಾಗೆ ನಾಲ್ಕು ವರ್ಷ ನಿಷೇಧ

ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

MNG-Falnir

Mangaluru: ಬೊಲೆರೋ ವಾಹನಕ್ಕೆ ಆಕಸ್ಮಿಕ‌ ಬೆಂಕಿ

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.