ಡಾ ವಿಷ್ಣುವರ್ಧನ್ ನಿವಾಸದಲ್ಲಿ “ರಾಜಾ ಸಿಂಹ’ ಟೀಸರ್ ಬಿಡುಗಡೆ
Team Udayavani, Sep 18, 2017, 2:25 PM IST
ಅನಿರುದ್ಧ್ ಅಭಿನಯದ “ರಾಜಾ ಸಿಂಹ’ ಚಿತ್ರದ ಟೀಸರ್ ಇಂದು ಡಾ. ವಿಷ್ಣುವರ್ಧನ್ ಅವರ ಹುಟ್ಟುಹಬ್ಬದ ಅಂಗವಾಗಿ ಬಿಡುಗಡೆಯಾಗಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಡಾ. ವಿಷ್ಣುವರ್ಧನ್ ಅವರ ಜಯನಗರದ ಮನೆಯಲ್ಲಿ ನಡೆದ ಸಣ್ಣ ಸಮಾರಂಭದಲ್ಲಿ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಈ ಸಂದರ್ಭದಲ್ಲಿ ಡಾ. ಭಾರತಿ ವಿಷ್ಣುವರ್ಧನ್ ಸೇರಿದಂತೆ ಚಿತ್ರತಂಡದ ಹಲವು ಸದಸ್ಯರು ಭಾಗವಹಿಸಿದ್ದರು.
ಅಂದಹಾಗೆ, “ರಾಜ ಸಿಂಹ’ ಚಿತ್ರವನ್ನು ಸಿ.ಡಿ. ಬಸಪ್ಪ ನಿರ್ಮಿಸುತ್ತಿದ್ದು, ರವಿರಾಮ್ ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅನಿರುದ್ಧ್ ಎದುರು ನಿಖೀತಾ ನಾಯಕಿಯಾಗಿ ನಟಿಸಿದ್ದು, ಭಾರತಿ ವಿಷ್ಣುವರ್ಧನ್, ಅಂಬರೀಶ್, ಶರತ್ ಲೋಹಿತಾಶ್ವ ಮುಂತಾದವರು ನಟಿಸಿದ್ದಾರೆ.
ಈ ಚಿತ್ರವು “ಸಿಂಹಾದ್ರಿಯ ಸಿಂಹ’ ಚಿತ್ರದ ಮುಂದುವರೆದ ಭಾಗವಾಗಿದ್ದು, ಇದರಲ್ಲಿ ವಿಷ್ಣುವರ್ಧನ್ ಅವರ ಪಾತ್ರವೂ ಇರುತ್ತದಂತೆ. “ಸಿಂಹಾದ್ರಿಯ ಸಿಂಹ’ ಚಿತ್ರದಲ್ಲಿನ ವಿಷ್ಣುವರ್ಧನ್ ಅವರ ಸ್ಟಾಕ್ ಶಾಟ್‌ಗಳನ್ನು ಬಳಸಿಕೊಳ್ಳುವದರ ಜೊತೆಗೆ, ಗ್ರಾಫಿಕ್ಸ್ ಮೂಲಕ ಅವರನ್ನು ಮತ್ತೂಮ್ಮೆ ಸೃಷ್ಠಿಸಲಾಗುತ್ತಿರುವುದು ಈ ಚಿತ್ರದ ವಿಶೇಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ
ಕೊಹ್ಲಿ-ರೋಹಿತ್ ಬಳಿಕ ಜಡೇಜಾ ಸ್ಥಾನಕ್ಕೂ ಕುತ್ತು: ಕಠಿಣ ನಿರ್ಧಾರ ಕೈಗೊಂಡ ಬಿಸಿಸಿಐ
Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು
Mangaluru: ಕರಾವಳಿ ಖಗೋಳ ಉತ್ಸವ; ಉಲ್ಕಾ ತುಣುಕು, ನಕ್ಷತ್ರ ವೀಕ್ಷಣೆ ಅವಕಾಶ
Bajpe: ಇನ್ಮುಂದೆ ದೀಪಗಳಿಂದ ಬೆಳಗಲಿದೆ ವಿಮಾನ ನಿಲ್ದಾಣ ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.