ರಾಜ ನಿವಾಸದಲ್ಲಿ ಹೊಸಬರು ಶೂಟಿಂಗ್ ಸೆಟ್‌ನಲ್ಲಿ ಟೈಟಲ್ ಲಾಂಚ್
Team Udayavani, Nov 20, 2020, 6:23 PM IST
ಸಾಮಾನ್ಯವಾಗಿ ಚಿತ್ರ ಸೆಟ್ಟೇರುವ ಮೊದಲು ಚಿತ್ರದ ಟೈಟಲ್ ಅನೌನ್ಸ್‌ಮಾಡುವುದು ವಾಡಿಕೆ. ಆದರೆ ಇಲ್ಲೊಂದು ಚಿತ್ರತಂಡ, ಶೂಟಿಂಗ್ ಸೆಟ್‌ನಲ್ಲಿಯೇ ಚಿತ್ರದ ಟೈಟಲ್ ಅನೌನ್ಸ್ ಮಾಡಿದೆ.
ಅಂದಹಾಗೆ, ಆ ಚಿತ್ರದ ಹೆಸರು “ರಾಜ ನಿವಾಸ’. ಈಗಾಗಲೇ ಒಂದು ಹಂತದ ಚಿತ್ರೀಕರಣವನ್ನು ಪೂರ್ಣಗೊಳಿಸಿ, ಲಾಕ್ ಡೌನ್ ತೆರವಾದ ಬಳಿಕ ಎರಡನೇ ಹಂತದ ಚಿತ್ರೀಕರಣ ಆರಂಭಿಸಿರುವ ಚಿತ್ರತಂಡ, ಇತ್ತೀಚೆಗೆ ಚಿತ್ರೀಕರಣದ ಸೆಟ್‌ಗೆ ಮಾಧ್ಯಮಗಳನ್ನು ಆಹ್ವಾನಿಸಿ, ಚಿತ್ರದ ಟೈಟಲ್ ಪೋಸ್ಟರ್ ಬಿಡುಗಡೆಗೊಳಿಸಿತು. “ಡಿಎಎಂ36 ಸ್ಟುಡಿಯೋಸ್’ ಬ್ಯಾನರ್‌ನಲ್ಲಿ ಡಿ.ಪಿ ಆಂಜನಪ್ಪ “ರಾಜನಿವಾಸ’ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ.
ಚಿತ್ರದ ಬಗ್ಗೆ ಮಾತನಾಡಿದ ನಿರ್ಮಾಪಕ ಆಂಜನಪ್ಪ, “ಕಳೆದ ಒಂದೂವರೆ ವರ್ಷದ ಹಿಂದೆಯೇ ಸಿನಿಮಾ ಮಾಡಬೇಕು, ಈ ಕ್ಷೇತ್ರದಲ್ಲಿಯೇ ತೊಡಗಿಸಿಕೊಳ್ಳಬೇಕು ಎಂಬ ಸಣ್ಣ ಆಸೆ ಇತ್ತು. ಅದೀಗ “ರಾಜ ನಿವಾಸ’ ಚಿತ್ರದ ಮೂಲಕ ಈಡೇರುತ್ತಿದೆ. ಮುಂದಿನ ಫೆಬ್ರವರಿಯಲ್ಲಿ ಚಿತ್ರವನ್ನು ಬಿಡುಗಡೆ ಮಾಡುವ ಯೋಚನೆಯಿದೆ’ ಎಂದರು.
ಚಿತ್ರದ ಬಗ್ಗೆ ವಿವರಿಸಿದ ನಿರ್ದೇಶಕ ಮಿಥುನ್ ಸುವರ್ಣ, “ಇದೊಂದು ಸಸ್ಪೆನ್ಸ್-ಥ್ರಿಲ್ಲರ್ ಶೈಲಿಯ ಸಿನಿಮಾ. ಈಗಾಗಲೇ ಶೇ.80ರಷ್ಟು ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರದಲ್ಲಿ ಒಟ್ಟು ಮೂರು ಸಾಹಸ ದೃಶ್ಯಗಳಿವೆ. ಕಮರ್ಷಿಯಲ್ ಸಿನಿಮಾಕ್ಕೆ ಬೇಕಾದ ಎಲ್ಲ ರೀತಿಯ ಅಂಶಗಳೂ ಸಿನಿಮಾದಲ್ಲಿವೆ. ಚಿತ್ರದಕಥೆಯನ್ನು ತೆರೆಮೇಲೆ ನೋಡಬೇಕು’ ಎಂದರು.
ಇದನ್ನೂ ಓದಿ : ಜೇಮ್ಸ್‌ಗೆ ಬರಲ್ಲ ನಾಸಿರುದ್ದೀನ್ ಶಾ
ಇನ್ನು ರಾಘವ್ ನಾಯಕ್ ಈ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ನಿರ್ದೇಶಕನಾಗಿ ಗುರುತಿಸಿಕೊಳ್ಳಬೇಕೆಂಬ ಆಸೆ ಹೊತ್ತು ಚಿತ್ರರಂಗಕ್ಕೆ ಬಂದಿದ್ದ ರಾಘವ್, ಈ ಚಿತ್ರದ ಮೂಲಕ ನಾಯಕನಾಗಿದ್ದಾರೆ. “ಕಥೆಯ ಒಂದೆಳೆ ಕೇಳಿಯೇ ಇಷ್ಟವಾಯ್ತು. ಬೇರೆನೂ ಯೋಚಿಸದೇ ಈ ಸಿನಿಮಾ ಒಪ್ಪಿಕೊಂಡು ಮುಗಿಸುತ್ತಿದ್ದೇನೆ. ಇಲ್ಲಿ ಪ್ರಾಚ್ಯವಸ್ತು ವಿಭಾಗದಲ್ಲಿ ಕೆಲಸ ಮಾಡುವವನಾಗಿ ಕಾಣಿಸಿಕೊಂಡಿದ್ದೇನೆ. ಮಿಸ್ಟ್ರಿ ಸುತ್ತ ಇಡೀ ಸಿನಿಮಾ ಸುತ್ತಲಿದೆ’ ಎಂದು ತಮ್ಮ ಪಾತ್ರ ಪರಿಚಯ ಮಾಡಿಕೊಟ್ಟರು.
ಚಿತ್ರದಲ್ಲಿ ನಟಿ ಕೃತ್ತಿಕಾ ರವೀಂದ್ರನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದು, ನಾಯಕ ಪತ್ನಿಯಾಗಿ ಅಭಿನಯಿಸುತ್ತಿದ್ದಾರೆ. ಉಳಿದಂತೆ ಶ್ರೀನಗರಕಿಟ್ಟಿ, ಬಲರಾಜವಾಡಿ, ಅರ್ಜುನ್ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಚಿತ್ರಕ್ಕೆ ರಮೇಶ್ ರಾಜ್ ಛಾಯಾಗ್ರಹಣವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.