Kannada Cinema; ಬಿಡುಗಡೆಗೆ ಸಿದ್ದವಾದ ‘ರಾಜಯೋಗ’

Team Udayavani, Nov 12, 2023, 4:50 PM IST

ಬಿಡುಗಡೆಗೆ ಸಿದ್ದವಾದ ‘ರಾಜಯೋಗ’

ಧರ್ಮಣ್ಣ ನಾಯಕನಾಗಿ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ ಚೊಚ್ಚಲ ಸಿನಿಮಾ “ರಾಜಯೋಗ’ ಈಗ ಬಿಡುಗಡೆಗೆಯ ಹಂತಕ್ಕೆ ಬಂದಿದೆ. ಸದ್ಯ ತನ್ನೆಲ್ಲ ಕೆಲಸಗಳನ್ನು ಪೂರ್ಣಗೊಳಿಸಿರುವ “ರಾಜಯೋಗ’ ಸಿನಿಮಾ ಇದೇ ನವೆಂಬರ್‌ 17ರಂದು ಬಿಡುಗಡೆಯಾಗುತ್ತಿದೆ.  ಇತ್ತೀಚೆಗೆ ಮಧ್ಯಮಗಳ ಮುಂದೆ ಬಂದಿದ್ದ “ರಾಜಯೋಗ’ ಚಿತ್ರತಂಡ ಸಿನಿಮಾದ ಪ್ಯಾಥೋ ಹಾಡೊಂದನ್ನು ಬಿಡುಗಡೆ ಮಾಡಿತು.

ಅಕ್ಷಯ್‌ ಎಸ್‌. ರಿಶಭ್‌ ಸಂಗೀತ ಸಂಯೋಜನೆಯ ಈ ಗೀತೆಗೆ, ಪ್ರಮೋದ್‌ ಜೋಯಿಸ್‌ ಸಾಹಿತ್ಯವಿರುವ ಬಂಧು-ಬಳಗದ ಕುರಿತಾಗಿ ಈ ಹಾಡು ಮೂಡಿಬಂದಿದೆ. ಲಿಂಗರಾಜ ಉಚ್ಚಂಗಿ ದುರ್ಗ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ “ರಾಜಯೋಗ’ ಸಿನಿಮಾವನ್ನು “ಶ್ರೀರಾಮರತ್ನ ಪೊ›ಡಕ್ಷನ್ಸ್‌’ ಮೂಲಕ ಕುಮಾರ ಕಂಠೀರವ, ದೀಕ್ಷಿತ್‌ ಕೃಷ್ಣ, ಪ್ರಭು ಚಿಕ್ಕ  ನಾಯ್ಕನ ಹಳ್ಳಿ, ಲಿಂಗರಾಜು ಕೆ. ಎನ್‌, ನೀರಜ್‌ ಗೌಡ ಮತು ಧರ್ಮಣ್ಣ ಕಡೂರು ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ.

ಇದೇ ವೇಳೆ ಮಾತನಾಡಿದ ನಿರ್ಮಾಪಕರಲ್ಲಿ ಒಬ್ಬರಾದ ಕುಮಾರ ಕಂಠೀರವ, “ಈ ಹಾಡು ಸಂಬಂಧಗಳ ಬಗ್ಗೆ ತಿಳಿಸಿಕೊಡುತ್ತದೆ. ನಟ ಧರ್ಮಣ್ಣ ಈ ಸಿನಿಮಾದ ಕಂಟೆಂಟ್‌ ಬಗ್ಗೆ ಈ ತಂಡದಲ್ಲಿ ನಾನೂ ಒಬ್ಬನಾಗಿ ಸೇರಿದೆ. ಸಿನಿಮಾದಲ್ಲಿ ಗ್ರಾಮೀಣ ಸೊಗಡನ್ನು ತುಂಬಾ ಚೆನ್ನಾಗಿ ತರಲಾಗಿದೆ. ನಮ್ಮ ಸಿನಿಮಾವನ್ನು ಪ್ರೇಕ್ಷಕರು ಬೆಂಬಲಿಸುತ್ತಾರೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

“ಇದು ನನ್ನ ನಿರ್ದೇಶನದ ಮೊದಲ ಸಿನಿಮಾ. ಪ್ರಾಮಾಣಿಕವಾಗಿ ಕೆಲಸ ಮಾಡಿ ಒಂದೊಳ್ಳೆ ಸಿನಿಮಾ ಕೊಡುತ್ತಿದ್ದೇವೆ. ಶ್ರದ್ದೆಯಿಂದ ಕೆಲಸ ಮಾಡಿದರೆ “ರಾಜಯೋಗ’ ಬಂದೇ ಬರುತ್ತೆ ಎಂಬ ಕಾನ್ಸೆಪ್ಟ್ ಇಟ್ಟುಕೊಂಡು ಈ ಸಿನಿಮಾ ಮಾಡಿದ್ದೇವೆ. ಗ್ರಾಮೀಣ ಭಾಗದಲ್ಲಿ ಈ ಕಥೆ ನಡೆಯುತ್ತದೆ. ಕೆಎಎಸ್‌ ಎಕ್ಸಾಂ ಬರೆಯಲು ಹೊರಟ ನಾಯಕ, ಕೊನೆಗಾದರೂ ಕೆಎಎಸ್‌ ಬರೀತಾನಾ ಇಲ್ವಾ ಅನ್ನೋದೇ ಕಥೆಯ ಒಂದು ಎಳೆ. ಜೊತೆಗೆ ಜೋತಿಷ್ಯ ಸುಳ್ಳಲ್ಲ, ಅದನ್ನು ಕೆಲವರು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂಬುದನ್ನೂ ಇಲ್ಲಿ ಹೇಳಿದ್ದೇವೆ. ಗಂಭೀರ ವಿಷಯವನ್ನು ಹಾಸ್ಯದ ಮೂಲಕ ಹೆಳಲಾಗಿದೆ’ ಎಂದು “ರಾಜಯೋಗ’ ಸಿನಿಮಾದ ಕಥಾಹಂದರ ತೆರೆದಿಟ್ಟರು ನಿರ್ದೇಶಕ ಲಿಂಗರಾಜ್‌.

ನಾಯಕ ನಟ ಧರ್ಮಣ್ಣ ಮಾತನಾಡುತ್ತ, “ತುಂಬಾ ಓದಿಕೊಂಡಿರುವವನ ಜೀವನ ಹೇಗಿರುತ್ತೆ ಅಂತ ಹೇಳುವ ಪಾತ್ರ ಈ ಸಿನಿಮಾದಲ್ಲಿದೆ. ಇದರಲ್ಲಿ ಕಾಮಿಡಿ, ಎಮೋಷನ್‌ ಎಲ್ಲಾ ಸೇರಿದೆ, ಪ್ರತಿಯೊಂದು ಪಾತ್ರಕ್ಕೂ ಸಮಾನ ಅವಕಾಶವಿದೆ. ಈಗಾಗಲೇ ಟ್ರೇಲರ್‌, ಸಾಂಗ್ಸ್‌ ಹಿಟ್‌ ಆಗಿದೆ, ಅದೇ ರೀತಿ ಜನ ಸಿನಿಮಾವನ್ನೂ ಗೆಲ್ಲಿಸುತ್ತಾರೆಂಬ ಭರವಸೆಯಿದೆ’ ಎಂದರು.

ಟಾಪ್ ನ್ಯೂಸ್

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.