ರಾಜುವಿಗೆ 25ರ ಸಂಭ್ರಮ
Team Udayavani, Feb 13, 2018, 10:52 AM IST
ಕಳೆದ ತಿಂಗಳು ಬಿಡುಗಡೆಯಾದ “ರಾಜು ಕನ್ನಡ ಮೀಡಿಯಂ’ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತವಾಗುವ ಚಿತ್ರತಂಡದ ಮೊಗದಲ್ಲಿ ನಗು ಮೂಡಿತ್ತು. ಅದರ ಪರಿಣಾಮವಾಗಿ ಈಗ ಚಿತ್ರ 25 ದಿನಗಳನ್ನು ಪೂರೈಸಿ ಮುನ್ನುಗ್ಗುತ್ತಿದೆ. ಈ ಖುಷಿಯನ್ನು ಚಿತ್ರತಂಡ ಭಾನುವಾರ ಚಿತ್ರಮಂದಿರಕ್ಕೆ ಭೇಟಿ ನೀಡಿ ಪ್ರೇಕ್ಷಕರ ಜೊತೆ ಕೇಕ್ ಕತ್ತರಿಸುವ ಮೂಲಕ ಆಚರಿಸಿತು.
ಹೌದು, “ರಾಜು ಕನ್ನಡ ಮೀಡಿಯಂ’ ಚಿತ್ರದ ನಾಯಕ ಗುರುನಂದನ್, ನಿರ್ಮಾಪಕ ಕೆ.ಎ. ಸುರೇಶ್ ಸೇರಿದಂತೆ ಚಿತ್ರತಂಡ ಸಂತೋಷ್ ಚಿತ್ರಮಂದಿರಕ್ಕೆ ಭೇಟಿ ಕೊಟ್ಟು ಪ್ರೇಕ್ಷಕರರೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸಿತು. “ಜನ ಸಿನಿಮಾ ನೋಡಿ ಖುಷಿಪಡುತ್ತಿದ್ದಾರೆ. ಪಕ್ಕಾ ಕನ್ನಡ ನೇಟಿವಿಟಿ ಇರುವ ಸಿನಿಮಾ ಎಂಬ ಪ್ರಶಂಸೆ ವ್ಯಕ್ತವಾಗುತ್ತಿದೆ.
ಸುದೀಪ್ ಅವರ ಪಾತ್ರ, ಅವರ ಗೆಟಪ್ ಅನ್ನು ತುಂಬಾ ಇಷ್ಟಪಡುತ್ತಿದ್ದಾರೆ. ಚಿತ್ರ ಈಗಾಗಲೇ ವಿದೇಶಗಳಲ್ಲೂ ಬಿಡುಗಡೆಯಾಗಿದ್ದು, ಚೆನ್ನಾಗಿ ಪ್ರದರ್ಶನ ಕಾಣುತ್ತಿದೆ’ ಎನ್ನುವುದು ನಿರ್ಮಾಪಕ ಕೆ.ಎ.ಸುರೇಶ್ ಮಾತು. “ರಾಜು ಕನ್ನಡ ಮೀಡಿಯಂ’ ಚಿತ್ರವನ್ನು ನರೇಶ್ ನಿರ್ದೇಶಿಸಿದ್ದು, ಚಿತ್ರದಲ್ಲಿ ಆವಂತಿಕಾ ಶೆಟ್ಟಿ ನಾಯಕಿಯಾಗಿ ನಟಿಸಿದ್ದಾರೆ. ಚಿತ್ರದ ವಿಶೇಷ ಪಾತ್ರವೊಂದರಲ್ಲಿ ಸುದೀಪ್ ಕಾಣಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್ ಬಗ್ಗೆ ರಮ್ಯಾ ಮಾತು
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!
Kuchuku Movie: ಟೀಸರ್‌ನಲ್ಲಿ ಕುಚುಕು
MUST WATCH
ಹೊಸ ಸೇರ್ಪಡೆ
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.