ರಾಜ್ಯೋತ್ಸವಕ್ಕೆ ಕನ್ನಡ ದೇಶದೊಳ್
Team Udayavani, Oct 31, 2018, 11:20 AM IST
“ಕನ್ನಡ ದೇಶದೊಳ್’ ಎಂಬ ಸಿನಿಮಾವೊಂದು ಬರುತ್ತಿರುವ ವಿಚಾರ ನಿಮಗೆ ತಿಳಿದಿರಬಹುದು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ನವೆಂಬರ್ 1 ರಂದು ಬಿಡುಗಡೆಯಾಗುತ್ತಿದೆ. ರಾಜ್ಯೋತ್ಸವದಂದೇ ಚಿತ್ರ ಬಿಡುಗಡೆ ಮಾಡಬೇಕೆಂದು ಚಿತ್ರತಂಡ ಕನಸು ಕಂಡಿತ್ತು. ಅದೀಗ ಈಡೇರಿದೆ. ಈ ಚಿತ್ರವನ್ನು ಅಭಿರಾಮ್ ಕಂಠೀರವ ನಿರ್ದೇಶಿಸಿದ್ದಾರೆ. ಈ ಚಿತ್ರದ ಮೂಲಕ ಕನ್ನಡದ ಕಂಪನ್ನು ಸೂಸಲಿದ್ದಾರಂತೆ.
“ಈ ಟೈಟಲ್‌ನಡಿ ಸಿನಿಮಾ ಮಾಡಿದ್ದರಿಂದ ನನ್ನ ಜವಾಬ್ದಾರಿ ಹೆಚ್ಚಿತ್ತು. ಈ ಚಿತ್ರದ ಮೂಲಕ ಕನ್ನಡ ಶಕ್ತಿಯನ್ನು ತೋರಿಸಲಿದ್ದೇನೆ. ಈ ಮೂಲಕ ಕನ್ನಡ ಮಾತನಾಡದವರು ಕೂಡಾ ನಮ್ಮ ಕನ್ನಡದ ಬಗ್ಗೆ ಹೆಮ್ಮೆ ಪಡುವಂತಾಗಬೇಕು’ ಎನ್ನುವುದು ನಿರ್ದೇಶಕ ಕಂಠೀರವ ಅವರ ಮಾತು. ಈ ಚಿತ್ರವನ್ನು 30 ಜಿಲ್ಲೆಗಳಲ್ಲಿ ಚಿತ್ರೀಕರಿಸಿದ್ದು, ಈ ಸಮಯದಲ್ಲಿ ಸಾಕಷ್ಟು ಕಷ್ಟಪಟ್ಟಿದ್ದಾಗಿ ಹೇಳಿಕೊಂಡರು. ಚಿತ್ರಕ್ಕೆ ಸೊಲೋಮನ್ ಸಂಗೀತ ನೀಡಿದ್ದಾರೆ.
ಚಿತ್ತೂರು ಮೂಲದ ಸೋಲೋಮನ್, ಕೇರಳದಲ್ಲಿ ಸಂಗೀತ ಕಲಿತು, ತಮಿಳುನಾಡಿನಲ್ಲಿ ಕೆಲಸ ಆರಂಭಿಸಿ, ಈಗ ಕನ್ನಡದಲ್ಲಿ ತಮ್ಮ ಚೊಚ್ಚಲ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಚಿತ್ರವನ್ನು ಪ್ರಕಾಶ್, ವಿನೋದ್, ವೆಂಕಟೇಶ್, ಯೋಗಾನಂದ್ ಹಾಗೂ ವಿಶ್ವನಾಥ್ ಸೇರಿ ನಿರ್ಮಿಸಿದ್ದಾರೆ. ಈ ಚಿತ್ರದ ತಾರಾಬಳಗದಲ್ಲಿ ಸುಚೇಂದ್ರ ಪ್ರಸಾದ್, ಟೆನ್ನಿಸ್ ಕೃಷ್ಣ, ರಾಕ್‌ಲೈನ್ ಸುಧಾಕರ್, ರೇಖಾದಾಸ್, ಬಿರಾದಾರ್, ತಾರಕ್ ಪೊನ್ನಪ್ಪ ಮುಂತಾದವರಿದ್ದಾರೆ. ಜೇನ್ ಮತ್ತು ಬ್ರಾಡ್ ಎಂಬ ವಿದೇಶಿ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhuvanam Gaganam Movie: ಪ್ರೇಮಿಗಳ ದಿನಕ್ಕೆ ಭುವನಂ ಗಗನಂ ತೆರೆಗೆ
KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್ ನಗು
ಇನ್ಮುಂದೆ ಶಿವಣ್ಣನಿಗೆ ಡಬಲ್ ಪವರ್ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್ ಹೀರೋ ಮಾತು
ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು
2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ
ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ
ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.