‘777 ಚಾರ್ಲಿ’; ರಕ್ಷಿತ್‌ ಶೆಟ್ಟಿ ಕನಸಿಗೆ ರಾಣಾ ದಗ್ಗುಬಾಟಿ ಸಾಥ್‌


Team Udayavani, May 2, 2022, 11:26 AM IST

rakshit shetty rana daggubati

ರಕ್ಷಿತ್‌ ಶೆಟ್ಟಿ ನಟನೆಯ “777 ಚಾರ್ಲಿ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಜೂನ್‌ 10ರಂದು ತೆರೆಕಾಣಲಿದೆ. ಈಗಾಗಲೇ ಚಿತ್ರದ ಕನ್ನಡ ವರ್ಶನ್‌ ಟಿವಿ ರೈಟ್ಸ್‌ ದೊಡ್ಡ ಮೊತ್ತಕ್ಕೆ ಮಾರಾಟವಾಗುವ ಮೂಲಕ ಚಿತ್ರತಂಡ ಸುದ್ದಿಯಲ್ಲಿದೆ. ಇದರ ಬೆನ್ನಿಗೆ ಚಿತ್ರತಂಡದಿಂದ ಮತ್ತೂಂದು ಸುದ್ದಿ ಬಂದಿದೆ. ಅದು ತೆಲುಗು ಬಿಡುಗಡೆ ಕುರಿತು.

“777 ಚಾರ್ಲಿ’ ಪ್ಯಾನ್‌ ಇಂಡಿಯಾ ಸಿನಿಮಾವಾಗಿದ್ದು, ಕನ್ನಡದ ಜೊತೆಗೆ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿಯಲ್ಲಿ ಬಿಡುಗಡೆಯಾಗುತ್ತಿದೆ. ತೆಲುಗಿನಲ್ಲಿ ಈ ಚಿತ್ರವನ್ನು ಯಾರು ಬಿಡುಗಡೆ ಮಾಡುತ್ತಾರೆ ಎಂಬ ಕುತೂಹಲಕ್ಕೆ ತೆರೆಬಿದ್ದಿದೆ.

ತೆಲುಗಿನ ಖ್ಯಾತ ನಟ ರಾಣಾ ದಗ್ಗುಬಾಟಿ “777 ಚಾರ್ಲಿ’ ಚಿತ್ರವನ್ನು ತೆಲುಗಿನಲ್ಲಿ ಬಿಡುಗಡೆ ಮಾಡುವ ಮೂಲಕ ರಕ್ಷಿತ್‌ ಶೆಟ್ಟಿ ಕನಸಿಗೆ ಸಾಥ್‌ ನೀಡುತ್ತಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ರಾಣಾ, “ಇತ್ತೀಚೆಗೆ 777 ಚಾರ್ಲಿ ಚಿತ್ರವನ್ನು ನೋಡಿದೆ. ಸಿನಿಮಾ ಅದ್ಭು ತವಾಗಿ ಮೂಡಿಬಂದಿದೆ’ ಎಂದಿದ್ದಾರೆ. ಈ ಮೂಲಕ “ಚಾರ್ಲಿ’ ತೆಲುಗಿನಲ್ಲೂ ಸೌಂಡ್‌ ಮಾಡಲಿದೆ.

ಇನ್ನು, “777 ಚಾರ್ಲಿ’ ಚಿತ್ರದ ಐದು ಭಾಷೆಗಳಲ್ಲಿಯೂ ಪ್ರಸಿದ್ಧ ಹಿನ್ನೆಲೆ ಗಾಯಕರು ಹಾಡಿಗೆ ತಮ್ಮ ಧ್ವನಿ ನೀಡಿದ್ದಾರೆ. ಕನ್ನಡದಲ್ಲಿ ವಿಜಯ್‌ ಪ್ರಕಾಶ್‌ ಈ ಹಾಡಿಗೆ ಧ್ವನಿಯಾದರೆ, ಮಲಯಾಳಂನಲ್ಲಿ ಜೆಸ್ಸಿ ಗಿಫ್ಟ್, ತಮಿಳಿನಲ್ಲಿ ಗಾನ ಬಾಲಚಂದರ್‌, ತೆಲುಗಿನಲ್ಲಿ ರಾಮ್‌ ಮಿರಿಯಾಲ ಮತ್ತು ಹಿಂದಿಯಲ್ಲಿ ಸ್ವರೂಪ್‌ ಖಾನ್‌ ಕ್ರಮವಾಗಿ ಆಯಾಯ ಭಾಷೆಗಳ ಅವತರಣಿಕೆಗಳನ್ನು ಹಾಡಿದ್ದಾರೆ.

ಇದನ್ನೂ ಓದಿ:ಐಪಿಎಲ್‌ ಫ‌ಸ್ಟ್‌ ಮ್ಯಾಚ್‌-2014: ಓಪನಿಂಗ್‌ ಮತ್ತು ಫೈನಲ್‌… ಎರಡನ್ನೂ ಗೆದ್ದ ಕೆಕೆಆರ್‌

ಯುವ ನಿರ್ದೇಶಕ ಕಿರಣ್‌ ರಾಜ್‌ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ “777 ಚಾರ್ಲಿ’ ಚಿತ್ರದಲ್ಲಿ ರಕ್ಷಿತ್‌ ಶೆಟ್ಟಿಯ ಜೊತೆಗೆ ಲ್ಯಾಬ್ರಡಾರ್‌ ನಾಯಿ ಒಂದು ಪೂರ್ಣ ಪ್ರಮಾಣದ ಪಾತ್ರದಲ್ಲಿ ತೆರೆಮೇಲೆ ಕಾಣಿಸಿಕೊಂಡಿದೆ. ಸಂಗೀತಾ ಶೃಂಗೇರಿ

ಚಿತ್ರದಲ್ಲಿ ನಾಯಕಿಯಾಗಿದ್ದು, ಉಳಿದಂತೆ ರಾಜ್‌ ಬಿ. ಶೆಟ್ಟಿ, ಡ್ಯಾನಿಶ್‌ ಸೇಠ್, ಬಾಬಿ ಸಿಂಹ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಚಿತ್ರದ ಹಾಡುಗಳಿಗೆ ನೋಬಿನ್‌ ಪೌಲ್‌ ಸಂಗೀತ ಸಂಯೋಜಿಸಿದ್ದಾರೆ. “ಪರಂವಾ ಸ್ಟುಡಿಯೋಸ್‌’ ಬ್ಯಾನರ್‌ ಅಡಿಯಲ್ಲಿ “777 ಚಾರ್ಲಿ’ ಚಿತ್ರಕ್ಕೆ ಜಿ. ಎಸ್‌ ಗುಪ್ತಾ ಮತ್ತು ರಕ್ಷಿತ್‌ ಶೆಟ್ಟಿ ಜಂಟಿಯಾಗಿ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ.

ಟಾಪ್ ನ್ಯೂಸ್

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

naa ninna bidalaare movie releasing on Nov 29

Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್‌ ಬಂತು: ನ.29ಕ್ಕೆ ಸಿನಿಮಾ ತೆರೆಗೆ

Suri Loves Sandhya movie teaser

Suri Loves Sandhya: ಟೀಸರ್‌ನಲ್ಲಿ ಸೂರಿ ಲವ್‌ ಸ್ಟೋರಿ

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

udupi

udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.