ಚಾರ್ಲಿಗೆ ಸಂಗೀತಾ; ಮಹದೇವನ ಸತಿ ಈಗ ರಕ್ಷಿತ್ ಗೆ ನಾಯಕಿ
Team Udayavani, Jul 17, 2018, 6:08 PM IST
ರಕ್ಷಿತ್ ಶೆಟ್ಟಿ ನಾಯಕರಾಗಿರುವ “777ಚಾರ್ಲಿ’ ಚಿತ್ರದ ಒಂದು ಹಂತದ ಚಿತ್ರೀಕರಣ ಈಗಾಗಲೇ ಮುಗಿದು ಹೋಗಿದೆ. ಸದ್ಯ ರಕ್ಷಿತ್ “ಅವನೇ ಶ್ರೀಮನ್ನಾರಾಯಣ’ ಸಿನಿಮಾದಲ್ಲಿ ಬಿಝಿಯಾಗಿದ್ದಾರೆ. ಈ ಗ್ಯಾಪಲ್ಲಿ ಚಿತ್ರತಂಡ ಚಾರ್ಲಿಗೆ ನಾಯಕಿ ಹುಡುಕಿದೆ. “ಚಾರ್ಲಿ’ಗೆ ನಾಯಕಿ ಯಾರಾಗುತ್ತಾರೆಂಬ ಕುತೂಹಲ ಅನೇಕರಲ್ಲಿತ್ತು. ಈಗ ಸಂಗೀತಾಗೆ ನಾಯಕಿ ಪಟ್ಟ ಸಿಕ್ಕಿದೆ. ಈ ಮೂಲಕ ನಾಯಕಿಯ ಕುತೂಹಲಕ್ಕೆ ತೆರೆಬಿದ್ದಿದೆ. ನೀವು “ಹರ ಹರ ಮಹಾದೇವ’ ಧಾರಾವಾಹಿ ನೋಡಿದ್ದರೆ ನಿಮಗೆ ಸಂಗೀತಾ ಮುಖಪರಿಚಯವಿರುತ್ತದೆ. ಆ ಧಾರಾವಾಹಿಯಲ್ಲಿ ಸತಿ ಪಾತ್ರ ಮಾಡಿದ್ದ ಸಂಗೀತಾಗೆ ಈಗ ಪ್ರಮುಖ ಬ್ಯಾನರ್‌ನ ಸಿನಿಮಾದಲ್ಲಿ ಅವಕಾಶ ಸಿಕ್ಕಿದೆ.
ಮಾಡೆಲಿಂಗ್ ಮಾಡುತ್ತಿದ್ದ ಸಂಗೀತಾ “ಕರ್ಮ’ ಎಂಬ ಕಿರುಚಿತ್ರದಲ್ಲಿ ನಟಿಸುವ ಮೂಲಕ ಬಣ್ಣದ ಲೋಕಕ್ಕೆ ಬಂದವರು. ಆ ನಂತರ ಸಂಗೀತಾಗೆ ಬ್ರೇಕ್ ನೀಡಿದ್ದು “ಹರ ಹರ ಮಹಾದೇವ’ ಧಾರಾವಾಹಿ. ಆ ಧಾರಾವಾಹಿ ಸಂಗೀತಾಗೆ ಒಳ್ಳೆಯ ಹೆಸರು ಕೊಟ್ಟಿದ್ದು ಸುಳ್ಳಲ್ಲ. ಹೀಗಿರುವಾಗ ಸಂಗೀತಾ ಹೊಸಬರ ಸಿನಿಮಾವೊಂದರಿಂದ ಅವಕಾಶ ಬಂದು, ಆ ಚಿತ್ರದಲ್ಲಿ ನಟಿಸಿದ್ದಾರೆ. ಆ ಚಿತ್ರ ಇನ್ನಷ್ಟೇ ಬಿಡುಗಡೆಯಾಗಬೇಕಿದೆ. ಹೀಗಿರುವಾಗಲೇ “777 ಚಾರ್ಲಿ’ಯಿಂದ ಅವಕಾಶ ಸಿಕ್ಕಿದೆ. ಪಾತ್ರದ ಬಗ್ಗೆ ಗುಟ್ಟುಬಿಟ್ಟು ಕೊಡದ ಸಂಗೀತಾ, “ತುಂಬಾ ಚೆನ್ನಾಗಿದೆ. ಸವಾಲಿನ ಪಾತ್ರ’ ಎಂದಷ್ಟೇ ಹೇಳುತ್ತಾರೆ.
ಈ ಚಿತ್ರವನ್ನು ಕಿರಣ್ ರಾಜ್ ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ನಾಯಕರಾಗಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ನಾಯಿಯೊಂದು ಪ್ರಮುಖ ಪಾತ್ರ ಮಾಡುತ್ತಿದ್ದು, ಮನುಷ್ಯ ಹಾಗೂ ಪ್ರಾಣಿ ನಡುವಿನ ಸಂಬಂಧದ ಸುತ್ತ ಈ ಸಿನಿಮಾ ಸಾಗಲಿದೆ. ನಾಯಕ ಹಾಗೂ ನಾಯಿ ನಡುವಿನ ಬಾಂಧವ್ಯ ಹೇಗಿರುತ್ತದೆ. ನಾಯಕನ ಜೀವನದಲ್ಲಿ ಆ ನಾಯಕಿ ಹೇಗೆ ಪ್ರಮುಖ ಪಾತ್ರ ವಹಿಸುತ್ತದೆ ಎಂಬ ಅಂಶದೊಂದಿಗೆ ಈ ಸಿನಿಮಾ ಸಾಗುತ್ತದೆಯಂತೆ. ಚಿತ್ರವನ್ನು ಜಿ.ಎಸ್.ಗುಪ್ತಾ ಹಾಗೂ ರಕ್ಷಿತ್ ಶೆಟ್ಟಿ ನಿರ್ಮಿಸುತ್ತಿದ್ದು, ಪುಷ್ಕರ್ ಸಾಥ್ ನೀಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.